ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯದಲ್ಲಿ ಸ್ಟಿಂಗ್‌ ಆಪರೇಷನ್‌ ಕಂಪನ; ಬೆಂಗಳೂರು ಸಿಸಿಬಿ ಪೊಲೀಸರ ಎದುರು ಕಾಂಗ್ರೆಸ್ ಮಹಿಳಾ ನಾಯಕಿ ಶರಣು

ಸಿದ್ದರಾಮಯ್ಯ ಅವರನ್ನ ಬ್ಲ್ಯಾಕ್ ಮೇಲ್​ ಮಾಡಲು ಸ್ಟಿಂಗ್​ ಆಪರೇಷನ್ ಮಾಡಿದ್ದು, ಕಾಂಗ್ರೆಸ್​​ನವರ ಕೈವಾಡವಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್​ ಮಹಿಳಾ ನಾಯಕಿ ಬೆಂಗಳೂರಿನ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಟಿಂಗ್‌ ಆಪರೇಷನ್‌; ಸಿಸಿಬಿ ಪೊಲೀಸರ ಎದುರು ಕಾಂಗ್ರೆಸ್ ಮಹಿಳಾ ನಾಯಕಿ ಶರಣು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 24, 2026 1:02 PM

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನ ಬ್ಲ್ಯಾಕ್ ಮೇಲ್​ ಮಾಡಲು ಸ್ಟಿಂಗ್​ ಆಪರೇಷನ್ (Sting operation Case) ಮಾಡಿದ್ದು, ಕಾಂಗ್ರೆಸ್​​ನವರ ಕೈವಾಡವಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್​ ಮಹಿಳಾ ನಾಯಕಿ (Congress Leader) ಬೆಂಗಳೂರಿನ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಮತ್ತು ಕನ್ನಡ ಸುದ್ದಿ ವಾಹಿನಿಯೊಂದರೊಂದಿಗೆ ಗುರುತಿಸಿಕೊಂಡಿರುವ ರಾಕೇಶ್ ಶೆಟ್ಟಿ ಇದ್ದಾರೆ ಎಂದು ಆರೋಪಿಸಿದ್ದರು. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಹ ಈ ಕುರಿತು ಮಾತನಾಡಿ, ಸ್ಟಿಂಗ್ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ.ಸಿದ್ದರಾಮಯ್ಯರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ. ಸಿದ್ದರಾಮಯ್ಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನಲೆಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ ಅವರ ಲೆಗಸಿ ಹಾಳು ಮಾಡಿ ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ. ಕಾಂಗ್ರೆಸ್‌ನ ಓರ್ವ ಮಹಿಳೆ ಈ ಪ್ರಕರಣದಲ್ಲಿದ್ದಾರೆ ಎಂದು ಹೇಳಿದ್ದರು.

Sting operation: ಸ್ಟಿಂಗ್‌ ಆಪರೇಷನ್‌ ಬಗ್ಗೆ ಮೌನ ಮುರಿದ ಮಾಜಿ ಸಿಎಂ ಸಿದ್ದರಾಮಯ್ಯ; ನ್ಯಾಯಯುತ ತನಿಖೆಗೆ ಒತ್ತಾಯ

ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆಯೊಬ್ಬರು ಪುತ್ತೂರು ಟಿಕೆಟ್‌ಗಾಗಿ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಹಾಗಾಗಿ, ರಾಜಕೀಯ ಲಾಭಕ್ಕಾಗಿ ಮತ್ತು ಸಿದ್ದರಾಮಯ್ಯ ಹೆಸರನ್ನು ಕೆಡಿಸಲು ಈ ರೀತಿಯ ಕೃತ್ಯಕ್ಕೆ ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದ್ದರು. ಯತೀಂದ್ರ ಸಿದ್ದರಾಮಯ್ಯ ಗಂಭೀರದ ಬಳಿಕ ಕಾಂಗ್ರೆಸ್​ ಮಹಿಳಾ ನಾಯಕಿ ಕೃಪಾ ಆಳ್ವಾಗೆ ನೋಟಿಸ್​ ನೀಡಲಾಗಿತ್ತು.