ದೆಹಲಿಯ ಸಂಸ್ಥೆಗೆ ಸ್ಟಿಂಗ್ ಆಪರೇಷನ್ ಗುತ್ತಿಗೆ?: ಸ್ಟಿಂಗ್ ಆಪರೇಷನ್: ಕಾಂಗ್ರೆಸ್ ಶಾಸಕರಿಂದ ತನಿಖೆಗೆ ಒತ್ತಡ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ವಲಯದಲ್ಲಿರುವ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಗಣಿಗ ರವಿಕುಮಾರ್, ಕುಟುಕು ಕಾರ್ಯಾಚರಣೆಯ ಮೂಲಕ ಸರಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಸಂಪುಟ ಸಭೆಯಲ್ಲಿ ತಮ ಸಹೋದ್ಯೊಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಒಂದಷ್ಟು ಮಾಹಿತಿಗಳಿದ್ದು, ತನಿಖೆ ನಡೆದರೆ ಸತ್ಯಾಂಶ ಬಯಲಿಗೆ ಬರಲಿದೆ ಎನ್ನುವ ಮಾತುಗಳನ್ನು ಆಡಿದ್ದಾರೆ.
-
ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ, ಆಡಳಿತ-ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ಕುಟುಕು ಕಾರ್ಯಚರಣೆಯ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಶಾಸಕರೇ ಸರಕಾರದ ಮೇಲೆ ಒತ್ತಡ ಹೇರಲಾರಂಭಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದಲೂ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆಯುತ್ತಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ 10 ಸಚಿವರನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸ ಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಈ ಆರೋಪಕ್ಕೆ ಪೂರಕವಾಗಿ ಕೆಲ ವಿಡಿಯೊ, ಆಡಿಯೊ ಹಾಗೂ ಫೋಟೋಗಳು ಲಭ್ಯವಾಗಿದೆ. ಆದ್ದರಿಂದ ಅದನ್ನು ಆಧರಿಸಿ ಸಮಗ್ರ ತನಿಖೆಗೆ ಆದೇಶಿಸು ವಂತೆ ಒತ್ತಡವನ್ನು ಕಾಂಗ್ರೆಸ್ ಶಾಸಕರು ಹೇರಿದ್ದಾರೆ.
ಇದನ್ನೂ ಓದಿ: Bangalore News: ಅಂಬೇಡ್ಕರ್ ಅವರನ್ನು ವ್ಯಕ್ತಿಯಾಗಿ ಅಲ್ಲ, ಸಿದ್ಧಾಂತವಾಗಿ ನೋಡಬೇಕು: ಕೋಡಿ ರಂಗಪ್ಪ ಕರೆ
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತ ವಲಯದಲ್ಲಿರುವ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಗಣಿಗ ರವಿಕುಮಾರ್, ಕುಟುಕು ಕಾರ್ಯಾಚರಣೆಯ ಮೂಲಕ ಸರಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಸಂಪುಟ ಸಭೆಯಲ್ಲಿ ತಮ್ಮ ಸಹೋ ದ್ಯೊಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಒಂದಷ್ಟು ಮಾಹಿತಿಗಳಿದ್ದು, ತನಿಖೆ ನಡೆದರೆ ಸತ್ಯಾಂಶ ಬಯಲಿಗೆ ಬರಲಿದೆ ಎನ್ನುವ ಮಾತುಗಳನ್ನು ಆಡಿದ್ದಾರೆ.
ಮಂಡ್ಯ ಶಾಸಕ ಗಣಿಗ ರವಿಕುಮಾರ್ ಒಂದು ಹೆಜ್ಜೆ ಮುಂದೆ ಹೋಗಿ, ರಾಜ್ಯದಿಂದ ಕೇಂದ್ರವನ್ನು ಪ್ರತಿನಿಧಿಸುವ ಸಚಿವರೊಬ್ಬರು ಮತ್ತು ಬಿಜೆಪಿಯ ರಾಜ್ಯ ನಾಯಕರು ಸ್ಟಿಂಗ್ ಆಪರೇಷನ್‌ಗೆ ಬಂಡವಾಳ ಹೂಡಿಕೆ ಮಾಡಿದ್ದಾರೆ. ಕೋಲ್ಕತ್ತಾ ಮತ್ತು ದೆಹಲಿ ಮೂಲದ ಎರಡು ಕಂಪನಿಗಳಿಗೆ ಈ ಜವಾಬ್ದಾರಿ ವಹಿಸಲಾಗಿತ್ತು. ಅವರಿಗಾಗಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಿಕೊಟ್ಟು, ಹಣ ಕೂಡ ನೀಡಲಾಗಿತ್ತು. ಈ ಎಲ್ಲದರ ಬಗ್ಗೆ ಮಾಹಿತಿಯಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ದಾಖಲೆ ನೀಡುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪೆನ್ ಡ್ರೈವ್ ಒಂದನ್ನು ಪ್ರದರ್ಶಿಸಿದ ಅವರು ಇದರಲ್ಲಿ ಎಲ್ಲ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.
![]()
ನಮಗೆ ಬಂದಿರುವ ಮಾಹಿತಿ ಪ್ರಕಾರ, ಕೇಂದ್ರ ಸರಕಾರ ಹತಾಶೆಗೊಂಡಿದ್ದು, ರಾಜ್ಯಸರಕಾರವನ್ನು ಪತನಗೊಳಿಸಬೇಕು ಎಂದು ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿವೆ. ಜಾಗೃತರಾಗಿರ ಬೇಕು ಎಂದು ಸಿಎಂ ಹೇಳಿದ್ದಾರಷ್ಟೆ. ಕುಮಾರಸ್ವಾಮಿ ಮಾಹಿತಿ ಎಲ್ಲಿಂದ ಪಡೆದಿದ್ದಾರೆ ಎಂದು ಗೊತ್ತಿಲ್ಲ.
- ಪ್ರಿಯಾಂಕ್ ಖರ್ಗೆ, ಗೃಹ ಸಚಿವ