ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Bengaluru: ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಯ ಮನೆಯವರಿಗೆ ಕಳಿಸಿದ ಆಂತರಿಕ ಪತ್ರದ ಪ್ರಕಾರ, ಶಾಲೆಯಲ್ಲಿ ಮಕ್ಕಳ ಬೆಳಗಿನ ಅಸೆಂಬ್ಲಿ ಸಮಯದಲ್ಲಿ ವಿದ್ಯಾರ್ಥಿ ಶಾಲೆಯ ಎರಡನೇ ಮಹಡಿಯಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ

ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

-

ಹರೀಶ್‌ ಕೇರ ಹರೀಶ್‌ ಕೇರ Oct 14, 2025 12:08 PM

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಕ್ಕಳು ಕೂಡ ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇದೀಗ ಬೆಂಗಳೂರಿನ ಪೂರ್ವ ಭಾಗದ ರಿಚರ್ಡ್ಸ್ ಟೌನ್‌ನಲ್ಲಿ ಸೋಮವಾರ (ಅ.13) 17 ವರ್ಷದ ಬಾಲಕನೊಬ್ಬ ತನ್ನ ಶಾಲಾ ಕಟ್ಟಡದಿಂದ ಹಾರಿ (Student Self harming) ಸಾವನ್ನಪ್ಪಿದ್ದಾನೆ. ಮೃತನನ್ನು 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ. ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ವಿದ್ಯಾರ್ಥಿಯ ಸಾವನ್ನು ಅಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Self Harming: ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಯ ಮನೆಯವರಿಗೆ ಕಳಿಸಿದ ಆಂತರಿಕ ಪತ್ರದ ಪ್ರಕಾರ, ಶಾಲೆಯಲ್ಲಿ ಮಕ್ಕಳ ಬೆಳಗಿನ ಅಸೆಂಬ್ಲಿ ಸಮಯದಲ್ಲಿ ವಿದ್ಯಾರ್ಥಿ ಶಾಲೆಯ ಎರಡನೇ ಮಹಡಿಯಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ ಎಂದು ಈ ಪತ್ರದಲ್ಲಿ ತಿಳಿಸಲಾಗಿದೆ. ಶಾಲೆಯ ಶಿಕ್ಷಕರು ಹೇಳಿರುವಂತೆ, ತುಂಬಾ ಚಟುವಟಿಕೆಯಿಂದ ಇರುವ ವಿದ್ಯಾರ್ಥಿ, ಶಾಲೆಯ ಎಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ, ಪ್ರತಿಭಾನ್ವಿತ ಕ್ರೀಡಾಪಟು ಎಂದು ಹೇಳಿದ್ದಾರೆ.

ವಿದ್ಯಾರ್ಥಿಯ ಸಾವಿನ ಸುದ್ದಿಯಿಂದ ಮನೆಯವರು ತುಂಬಾ ಅಘಾತಕ್ಕೆ ಒಳಲಾಗಿದ್ದು, ಮಂಗಳವಾರ ಶಾಲೆಗೂ ರಜೆಯನ್ನು ನೀಡಲಾಗಿದೆ. ವಿದ್ಯಾರ್ಥಿಯ ಸಾವಿಗೆ ನಿಜವಾದ ಕಾರಣ ತನಿಖೆಯಿಂದ ತಿಳಿಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.