ವಿದ್ಯಾರ್ಥಿಗಳ ಆರೋಗ್ಯವೇ ಪ್ರಮುಖ: ಆರೋಗ್ಯಕರ ಪರಿಸರದಿಂದ ಉತ್ತಮ ಅಧ್ಯಯನ ಸಾಧ್ಯ: ಡಿ.ಆರ್. ವಿಜಯಸಾರಥಿ
ಇಂದಿನ ಜೀವನಶೈಲಿಯಲ್ಲಿ ಕಲುಷಿತ ನೀರು, ಪರಿಸರ ಮಾಲಿನ್ಯ ಹಾಗೂ ರಾಸಾಯನಿಕ ಆಹಾರ ಪದ್ಧತಿಗಳ ಪರಿಣಾಮವಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ನಿಯಮಿತ ಆರೋಗ್ಯ ತಪಾಸಣೆ, ಸಮತೋಲನ ಆಹಾರ ಪದ್ಧತಿ, ಯೋಗ ಮತ್ತು ಧ್ಯಾನ ಅಳವಡಿಸಿಕೊಳ್ಳು ವುದು ಅನಿವಾರ್ಯ. ವಿಶೇಷವಾಗಿ ವಿದ್ಯಾರ್ಥಿಗಳ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಉತ್ತಮ ಆರೋಗ್ಯ ಮತ್ತು ಸ್ವಚ್ಛ ಪರಿಸರ ಇದ್ದಾಗ ಮಾತ್ರ ಅವರು ಉತ್ತಮವಾಗಿ ಅಧ್ಯಯನ ಮಾಡಬಹುದು
-
ವಿಜಯನಗರ: ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ವಾಸವಿ ಜ್ಞಾನಪೀಠ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕದ ಸಹಯೋಗದಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬ ಸದಸ್ಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಿ ಗಮನ ಸೆಳೆಯಿತು.
ಕಾರ್ಯಕ್ರಮಕ್ಕೆ ವಾಸವಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಆರ್. ವಿಜಯ ಸಾರಥಿ ಅವರು ಕಾಲೇಜು ಪ್ರಾಂಶುಪಾಲರು ಹಾಗೂ ಗಣ್ಯ ವೈದ್ಯರೊಂದಿಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ಜೀವನಶೈಲಿಯಲ್ಲಿ ಕಲುಷಿತ ನೀರು, ಪರಿಸರ ಮಾಲಿನ್ಯ ಹಾಗೂ ರಾಸಾಯನಿಕ ಆಹಾರ ಪದ್ಧತಿಗಳ ಪರಿಣಾಮವಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ನಿಯಮಿತ ಆರೋಗ್ಯ ತಪಾಸಣೆ, ಸಮತೋಲನ ಆಹಾರ ಪದ್ಧತಿ, ಯೋಗ ಮತ್ತು ಧ್ಯಾನ ಅಳವಡಿಸಿಕೊಳ್ಳುವುದು ಅನಿವಾರ್ಯ. ವಿಶೇಷವಾಗಿ ವಿದ್ಯಾರ್ಥಿಗಳ ಆರೋಗ್ಯ ಅತ್ಯಂತ ಮುಖ್ಯವಾಗಿದ್ದು, ಉತ್ತಮ ಆರೋಗ್ಯ ಮತ್ತು ಸ್ವಚ್ಛ ಪರಿಸರ ಇದ್ದಾಗ ಮಾತ್ರ ಅವರು ಉತ್ತಮವಾಗಿ ಅಧ್ಯಯನ ಮಾಡಬಹುದು,” ಎಂದು ಹೇಳಿದರು.
ವಿದ್ಯಾರ್ಥಿಗಳ ಜೊತೆಗೆ ಅವರ ಕುಟುಂಬ ಸದಸ್ಯರ ಆರೋಗ್ಯಕ್ಕೂ ಸಮಾನ ಪ್ರಾಮುಖ್ಯತೆ ನೀಡಿರುವ ಕಾಲೇಜು, ಈ ಶಿಬಿರದ ಮೂಲಕ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬ ದವರಿಗೂ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸಿರುವುದಾಗಿ ತಿಳಿಸಿದರು.
ವಾಸವಿ ಸಮೂಹ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಜೊತೆಗೆ ಆರೋಗ್ಯ, ಉದ್ಯಮ ಕೌಶಲ್ಯ, ಸಾಹಿತ್ಯ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದ್ದು, ಇಂತಹ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವುದು ವಿಶೇಷವಾಗಿದೆ.
“ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದ್ದು, ತುರ್ತು ಸಂದರ್ಭಗಳಲ್ಲಿ ಅನೇಕ ಜೀವ ಗಳನ್ನು ಉಳಿಸುತ್ತದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.
ಶಿಬಿರದಲ್ಲಿ ಸಪ್ತಗಿರಿ ಆಸ್ಪತ್ರೆಯ ವೈದ್ಯರು ಹಾಗೂ ಮೆಡಿಸ್ಕೋಪ್ ರಕ್ತನಿಧಿ ಕೇಂದ್ರದ ಸಿಬ್ಬಂದಿ ಭಾಗವಹಿಸಿ ಹೃದಯ, ಕಿಡ್ನಿ, ನರರೋಗ, ಕಣ್ಣು, ಸ್ತ್ರೀರೋಗ, ಮೂಳೆ ಸಮಸ್ಯೆ ಗಳು, ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡ ಸೇರಿದಂತೆ ವಿವಿಧ ತಪಾಸಣೆಗಳನ್ನು ನಡೆಸಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅವರ ಕುಟುಂಬ ಸದಸ್ಯರು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದು ಕೊಂಡರು.