Pavitra Gowda: ಪವಿತ್ರಾ ಗೌಡಗೆ ಮತ್ತೆ ಶಾಕ್; ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ A1 ಆರೋಪಿ ಪವಿತ್ರಾ ಗೌಡಗೆ ಶಾಕ್ ಎದುರಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸುಪ್ರೀಂ ಕೋರ್ಟ್ ಇತ್ತೀಚಿಗೆ ನಟ ದರ್ಶನ್ ಪವಿತ್ರ ಗೌಡ ಆರೋಪಿಗಳ ಅರ್ಜಿ ವಜಾ ಗೊಳಿಸಿತ್ತು ಇತ್ತೀಚಿಗೆ ಪವಿತ್ರ ಗೌಡ ಅರ್ಜಿ ಪರಿಶೀಲನೆ ಮಾಡಿ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಪವಿತ್ರಾ ಗೌಡ (ಸಂಗ್ರಹ ಚಿತ್ರ) -
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ A1 ಆರೋಪಿ ಪವಿತ್ರಾ ಗೌಡಗೆ (Pavitra Gowda) ಶಾಕ್ ಎದುರಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸುಪ್ರೀಂ ಕೋರ್ಟ್ (Supreme Court) ಇತ್ತೀಚಿಗೆ ನಟ ದರ್ಶನ್ (Actor Darshan) ಪವಿತ್ರ ಗೌಡ ಆರೋಪಿಗಳ ಅರ್ಜಿ ವಜಾ ಗೊಳಿಸಿತ್ತು ಇತ್ತೀಚಿಗೆ ಪವಿತ್ರ ಗೌಡ ಅರ್ಜಿ ಪರಿಶೀಲನೆ ಮಾಡಿ ಮತ್ತೊಮ್ಮೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಪ್ರಕರಣ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎಲ್ಲಾ ಆರೋಪಿಗಳ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ನೀಡಿತ್ತು. ಬಳಿಕ ಪವಿತ್ರ ಗೌಡ ಮತ್ತೊಮ್ಮೆ ಅರ್ಜಿ ಪರಿಶೀಲನೆ ನಡೆಸಿ ಜಾಮೀನು ಕೋರಿ ಇತ್ತೀಚಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್ ಪವಿತ್ರ ಗೌಡ ಅರ್ಜಿಯನ್ನು ವಜಾ ಗೊಳಿಸಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆಗಸ್ಟ್ 14 ರಂದು ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
ಜಾಮೀನು ರದ್ದು ಆದೇಶದಲ್ಲಿ ಕೆಲ ತಪ್ಪುಗಳಿವೆ. ಮತ್ತೊಮ್ಮೆ ಪರಿಶೀಲಿಸಿ ಜಾಮೀನು ನೀಡುವಂತೆ ಪವಿತ್ರಾಗೌಡ ಮನವಿ ಮಾಡಿದ್ದರು. ಆರೋಪಿಗಳ ವಿಚಾರಣೆಯನ್ನು ನ್ಯಾಯಾಲಯವು ನಡೆಸಿದ್ದು, ನ.10ರಂದು ಟ್ರಯಲ್ ಆರಂಭದ ದಿನಾಂಕ ನಿಗದಿಪಡಿಸಲಾಗಿದೆ. ಪ್ರಾಸಿಕ್ಯೂಷನ್ ಶೀಘ್ರದಲ್ಲೇ ಸಾಕ್ಷ್ಯಗಳ ಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಲು ತಯಾರಿ ನಡೆಸುತ್ತಿದೆ. ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 230 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಈ ಪೈಕಿ ಸುಮಾರು 70 ಅತ್ಯಂತ ಪ್ರಮುಖವಾಗಿವೆ. ಮೂರು ಪ್ರಮುಖ ಐ ವಿಟ್ನೆಸ್‌ಗಳು, ಸಿಸಿಟಿವಿ ದೃಶ್ಯಗಳು ಹಾಗೂ ಎಫ್‌ಎಸ್‌ಎಲ್ ವರದಿ ಸೇರಿದಂತೆ ತಾಂತ್ರಿಕ ಸಾಕ್ಷ್ಯಗಳೂ ಸೇರಿವೆ.
ಈ ಸುದ್ದಿಯನ್ನೂ ಓದಿ: Actor Darshan: ಸವಲತ್ತು ಕೋರಿದ ದರ್ಶನ್ ಅರ್ಜಿ 9ಕ್ಕೆ ಮುಂದೂಡಿಕೆ, ʼಉಮೇಶ್ ರೆಡ್ಡಿಗೆ ಕೊಟ್ಟ ಸೌಲಭ್ಯ ದರ್ಶನ್‌ಗೆ ಏಕಿಲ್ಲ?ʼ ಎಂದ ವಕೀಲರು
ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಜಗದೀಶ್ ಹಾಗೂ ಮಧ್ಯಂತರ ಜಾಮೀನಿನ ಮೇರೆಗೆ ಹೊರಗಿರುವ ಪ್ರದೋಷ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ಆರೋಪಪಟ್ಟಿಯಲ್ಲಿರುವ ಅಂಶಗಳನ್ನು ಓದಿ ಹೇಳಿದ್ದರು. ಬಳಿಕ ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನ ನಿರಾಕರಿಸಿದ್ದರು. ಹೀಗಾಗಿ ನ.10ರಂದು ಪ್ರಕರಣದ ಟ್ರಯಲ್ ದಿನಾಂಕವನ್ನ ನಿಗದಿಪಡಿಸುವುದಾಗಿ ಹೇಳಿ ವಿಚಾರಣೆ ಮುಂದೂಡಿದ್ದರು.
ರೇಣುಕಾಸ್ವಾಮಿ ಕೊಲೆ
ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ದರ್ಶನ್ ಮತ್ತು ಗ್ಯಾಂಗ್ ಜೂನ್ 8 ರಂದು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಲಾಗಿತ್ತು. ಬಳಿಕ ಮೃತದೇಹವನ್ನು ಸುಮನಹಳ್ಳಿ ಬಳಿಯ ರಾಜಕಾಲುವೆಯಲ್ಲಿ ಎಸೆಯಲಾಗಿತ್ತು.