ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Terrorist Death: ಶಂಕಿತ ಭಯೋತ್ಪಾದಕ ಕೇಂದ್ರ ಕಾರಾಗೃಹದಲ್ಲಿ ಸಾವು

ಕಳೆದ 2020ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಇದ್ದ. ಸುದ್ದಗುಂಟೆಪಾಳ್ಯ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಜೈಲು ಸೇರಿದ್ದ. ಪ್ರಕರಣ ಸಂಬಂಧ NIA ಅಧಿಕಾರಿಗಳು ಸಾಧಿಕ್ ಪಾಶ ಸೇರಿದಂತೆ 6 ಶಂಕಿತರನ್ನು ಅರೆಸ್ಟ್ ಮಾಡಿದ್ದರು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

ಶಂಕಿತ ಭಯೋತ್ಪಾದಕ ಕೇಂದ್ರ ಕಾರಾಗೃಹದಲ್ಲಿ ಸಾವು

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 7, 2026 12:28 PM

ಬೆಂಗಳೂರು, ಫೆ.07 : ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Bengaluru central jail, parappana agrahara jail) ಶಂಕಿತ ಭಯೋತ್ಪಾದಕ (Terrorist death) ಸಾವನಪ್ಪಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಡರಾತ್ರಿ ಸಾಧಿಕ್ ಪಾಷಾ (47) ಸಾವನಪ್ಪಿದ್ದಾನೆ. ಕಳೆದ ಆರು ತಿಂಗಳಿನಿಂದ ಲೋ ಬಿಪಿ ಮತ್ತು ಹೈ ಶುಗರ್ ಸೇರಿದಂತೆ ಕೆಲ ಅನಾರೋಗ್ಯ ಸಮಸ್ಯೆಯಿಂದ ಶಂಕಿತ ಭಯೋತ್ಪಾದಕ ಬಳಲುತ್ತಿದ್ದ.

ಕಳೆದ 2020ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಇದ್ದ. ಸುದ್ದಗುಂಟೆಪಾಳ್ಯ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಜೈಲು ಸೇರಿದ್ದ. ಪ್ರಕರಣ ಸಂಬಂಧ NIA ಅಧಿಕಾರಿಗಳು ಸಾಧಿಕ್ ಪಾಶ ಸೇರಿದಂತೆ 6 ಶಂಕಿತರನ್ನು ಅರೆಸ್ಟ್ ಮಾಡಿದ್ದರು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

ಕೆರೆಯಲ್ಲಿ ನವಜಾತ ಶಿಶು ಶವ ಪತ್ತೆ

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಭೂಸಾಲಕುಂಟೆ ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಇದು ಗಂಡು ಮಗುವಿನ ಶವ ಆಗಿದ್ದು, ಆಗತಾನೆ ಜನಿಸಿದ ಮಗುವನ್ನು ಕೆರೆಯಲ್ಲಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಮುಳಬಾಗಿಲು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಸ್‌ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ

ಶಿವಮೊಗ್ಗ : ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಡುಬಾ ಗ್ರಾಮದ ಬಳಿ ಘಟನೆ ನಡೆದಿದೆ. ಹೃದಯಾಘಾತವಾದರೂ ಚಾಲಕ ರಮೇಶ್ ಸಮಯ ಪ್ರಜ್ಞೆ ಮೆರೆದಿದ್ದಾರೆ. ಹೃದಯಾಘಾತವಾದರೂ ಚಾಲಕ ರಮೇಶ್ ರಸ್ತೆ ಬದಿ ಬಸ್ ನಿಲ್ಲಿಸಿದ್ದಾರೆ. ಬಸ್ ಚಾಲನೆ ವೇಳೆಯೇ ರಮೇಶ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಪ್ರಯಾಣಿಕರು ಅಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.