ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Caste Census: ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

Caste Census: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ತಿಳಿಸಿದ್ದರು. ಇದೀಗ ಈ ಸಂಬಂದ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

Profile Prabhakara R Jun 12, 2025 3:19 PM

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ (Caste Census) ನಡೆಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಗರದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಡೆದಿದ್ದು, ಜಾತಿಗಣತಿ ಮರು ಸಮೀಕ್ಷೆ ಸೇರಿ ಹಲವು ಮಹತ್ವದ ನಿರ್ಣಯಗಳಿಗೆ ಅನುಮೋದನೆ ನೀಡಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಭೇಟಿ ನೀಡಿದಾಗ ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಜಾತಿಗಣತಿ ಮರು ಸಮೀಕ್ಷೆ ನಡೆಸಿ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು ಚರ್ಚಿಸಿದ್ದೇವೆ. 2011ರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಬಗ್ಗೆ ಸರ್ವೆ ನಡೆಸಲಾಗಿತ್ತು. 2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11 ಕೋಟಿ ಇತ್ತು. 2015ರಲ್ಲಿ 6.35 ಕೋಟಿ ಜನಸಂಖ್ಯೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಸರ್ವೆ ಆಗಿದ್ದು 5.98 ಕೋಟಿ ಜನರದ್ದು. 2015ರ ಏಪ್ರಿಲ್​ 11ರಂದು ಜಾತಿಗಣತಿ ಸರ್ವೆ ಆರಂಭವಾಗಿತ್ತು. 2025ರ ನವೆಂಬರ್​ 30ರಂದು ಸರ್ವೆ ಮುಕ್ತಾಯಗೊಂಡಿತ್ತು. 1.60 ಲಕ್ಷ ಸಿಬ್ಬಂದಿ ಜಾತಿಗಣತಿ ಸರ್ವೆಯಲ್ಲಿ ಭಾಗಿಯಾಗಿದ್ದರು ಎಂದರು.

2018ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿತು. 2018ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಎಚ್​.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಸಿಎಂ ಆಗಿದ್ದರು. ಅಂದು ಹಿಂದುಳಿದ ವರ್ಗಗಳ ಮಂತ್ರಿ ಪುಟ್ಟರಂಗಶೆಟ್ಟಿ ಆಗಿದ್ದರು. ಆಗ ಜಾತಿಗಣತಿ ವರದಿ ಪೂರ್ಣಗೊಂಡಿತ್ತು. ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಅವರು ವರದಿ ಸ್ವೀಕರಿಸುವಂತೆ ಅಧ್ಯಕ್ಷ ಕಾಂತರಾಜುಗೆ ಮನವಿ ಮಾಡಿದ್ದರು. ಎಚ್​.ಡಿ. ಕುಮಾರಸ್ವಾಮಿ ವರದಿ ಸ್ವೀಕಾರ ಮಾಡಬೇಡಿ ಅಂತ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ತೆಗೆದುಕೊಳ್ಳಲಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ : ಸಿಎಂ ಸಿದ್ದರಾಮಯ್ಯ

ಕಾಂತರಾಜು ಸರ್ವೆಯ ದತ್ತಾಂಶ ಪಡೆದು ಜಯಪ್ರಕಾಶ್ ಹೆಗ್ಡೆ ಅವರು ಶಿಫಾರಸು ಮಾಡಿದರು. 2024ರ ಫೆ.29ರಂದು ಸರ್ಕಾರಕ್ಕೆ ಜಯಪ್ರಕಾಶ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಪಾರ್ಲಿಮೆಂಟ್ ಚುನಾವಣೆ ಕಾರಣದಿಂದ ವರದಿ ಚರ್ಚಿಸಲಿಲ್ಲ. ಬಳಿಕ ಸರ್ಕಾರ ವರದಿ ತೆಗೆದುಕೊಂಡು 2025 ರಲ್ಲಿ ಕ್ಯಾಬಿನೆಟ್ ಮುಂದೆ ಮಂಡಿಸಿದ್ದೇವೆ. ಸಚಿವರು ಅವರ ಅಭಿಪ್ರಾಯ ಕೊಟ್ಟಿದ್ದಾರೆ ಎಂದರು.