Cylinder Blast: ಬೆಂಗಳೂರು ಸಿಲಿಂಡರ್ ಬ್ಲಾಸ್ಟ್ ಪ್ರಕರಣಕ್ಕೆ ತಿರುವು; ಫ್ರಿಡ್ಜ್ ಸ್ಫೋಟಗೊಂಡು ಅವಘಡ!
Cylinder Blast: ಬೆಂಗಳೂರು ವಿಲ್ಸನ್ ಗಾರ್ಡನ್ ಸಮೀಪ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಮೊದಲಿಗೆ ಸಿಲಿಂಡರ್ ಸ್ಫೋಟದಿಂದ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ ಮನೆಯ ಸಿಲಿಂಡರ್‌ಗೆ ಯಾವುದೇ ಹಾನಿಯಾಗಿಲ್ಲ. ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.


ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ಸಮೀಪ ಸಂಭವಿಸಿದ ಸ್ಫೋಟದಲ್ಲಿ ಬಾಲಕನೊಬ್ಬ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಅವಘಡಕ್ಕೆ ಸಿಲಿಂಡರ್ ಸ್ಫೋಟ ಕಾರಣ ಎನ್ನಲಾಗಿತ್ತು. ಆದರೆ, ಇದೀಗ ಸ್ಫೋಟಕ್ಕೆ ಪ್ರಮುಖ ಕಾರಣ ಬಹಿರಂಗವಾಗಿದೆ. ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನಪಾಳ್ಯದಲ್ಲಿ ಫ್ರಿಡ್ಜ್ ಸ್ಫೋಟದಿಂದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಹೇಳಲಾಗಿತ್ತು. ಆದರೆ ಮನೆಯ ಸಿಲಿಂಡರ್‌ಗೆ ಯಾವುದೇ ಹಾನಿಯಾಗಿಲ್ಲ. ಸ್ಫೋಟದ ತೀವ್ರತೆ ಹೆಚ್ಚಾಗಿದ್ದ ಕಾರಣ ಪೊಲೀಸರು ತನಿಖೆ ಚುರಕುಗೊಳಿಸಿದ್ದರು. ಇತ್ತ ಎಸ್‌ಡಿಆರ್‌ಎಫ್ ಕಾರ್ಯಾಚರಣೆ ವೇಳೆ ಸ್ಫೋಟದ ಕಾರಣ ಬಹಿರಂಗವಾಗಿದೆ. ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇನ್ನು ಸಿಲಿಂಡರ್ ಸ್ಫೋಟವಾಗಿಲ್ಲ ಎಂಬ ಮಾಹಿತಿ ತಿಳಿಯುತ್ತಿದ್ಧಂತೆ ಡಾಗ್ ಸ್ಕ್ವಾಡ್ ತಂಡ ವಾಪಸ್ ತೆರಳಿದೆ. ಎಸ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಮುರಿದು ಬಿದ್ದ, ಧ್ವಂಸಗೊಂಡಿರುವ ಮನೆ ಭಾಗಗಳನ್ನು ಕಾರ್ಮಿಕರು ತೆರವು ಮಾಡುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Cylinder Blast: ಸಿಲಿಂಡರ್ ಸ್ಫೋಟ: ಹಾನಿಗೀಡಾದ ಮನೆಗಳ ದುರಸ್ತಿಗೆ ಸಿಎಂ ಸೂಚನೆ
ವಿಲ್ಸನ್ ಗಾರ್ಡನ್ ಪ್ರಕರಣದಲ್ಲಿ ಯಾವುದೇ ಸ್ಫೋಟಕ ಬಳಕೆಯಾಗಿಲ್ಲ ಎಂಬುವುದನ್ನು ಪೊಲೀಸರು ದೃಢಪಡಿಸಿದ್ದಾರೆ. ಘಟನೆಯಲ್ಲಿ ಯಾವುದೇ ಐಇಡಿ ಬಳಕೆ ಆಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.