ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Biklu Shiva murder case: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

Biklu Shiva murder case: ಬೆಂಗಳೂರಿನ ಹಲಸೂರು ಕೆರೆ ಬಳಿ ಜುಲೈ 15ರ ರಾತ್ರಿ ರೌಡಿಶೀಟರ್​​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಎ5 ಆರೋಪಿಯಾದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ.

ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

Prabhakara R Prabhakara R Jul 24, 2025 8:06 PM

ಬೆಂಗಳೂರು: ಹಲಸೂರು ಕೆರೆ ಬಳಿ ಬರ್ಬರವಾಗಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು (Biklu Shiva murder case) ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಈ ಪ್ರಕರಣದಲ್ಲಿ ಎ5 ಆರೋಪಿಯಾದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಮತ್ತೊಂದೆಡೆ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ದುಬೈಗೆ ಪಲಾಯನ ಮಾಡಿದ್ದಾನೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಎ1 ಆರೋಪಿ ಜಗದೀಶ್ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಆರೋಪಿ, ಜಾಮೀನು ನೀಡಲು ಅರ್ಹರಲ್ಲ ಎಂದು ಜನಪ್ರತಿನಿಧಿಗಳ ನ್ಯಾಯಾಲಾಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅಭಿಪ್ರಾಯಪಟ್ಟಿದ್ದರು.

ಮತ್ತೊಂದೆಡೆ ಪ್ರಕರಣದ ಎ5 ಆರೋಪಿಯಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಸಾಕ್ಷ್ಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದರ ನಡುವೆ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿ ಹೆಗಲಿಗೆ ವಹಿಸಿ ಆದೇಶ ಹೊರಡಿಸಿದೆ.

ಏನಿದು ಪ್ರಕರಣ?

ಬೆಂಗಳೂರಿನ ಹಲಸೂರು ಕೆರೆ ಬಳಿ ಜುಲೈ 15ರ ರಾತ್ರಿ ರೌಡಿಶೀಟರ್​​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈದಿದ್ದರು. ಕಿತ್ತಕನೂರು ಬಳಿ ಖರೀದಿಸಿದ್ದ ನಿವೇಶನ ಸಂಬಂಧ ಆರೋಪಿಗಳು ಬಿಕ್ಲು ಶಿವನಿಗೆ ಪ್ರಾಣ ಬೆದರಿಕೆ ಹಾಕುತ್ತಿದ್ದರು. ತಡರಾತ್ರಿ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ 8-9 ಮಂದಿ ಮನೆಯ ಮುಂದೆ ಕಾರಿನ ಬಳಿ ನಿಂತಿದ್ದ ಶಿವಪ್ರಕಾಶ್​ನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ದೂರು ನೀಡಿದ್ದರು.

ಈ ಸುದ್ದಿಯನ್ನೂ ಓದಿ | Rachita Ram: ಬಿಕ್ಲು ಶಿವ ಕೊಲೆ ಕೇಸ್‌; ಡಿಂಪಲ್‌ ಕ್ವೀನ್‌ ರಚಿತಾಗೆ ಚಿನ್ನಾಭರಣ ಗಿಫ್ಟ್‌ ನೀಡಿದ್ದ ಆರೋಪಿ ಜಗ್ಗ!

ಮಾಜಿ ಸಚಿವ ಬೈರತಿ ಬಸವರಾಜ್, ಜಗದೀಶ್ ಮತ್ತು ಇತರರಿಂದ ತನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಶಿವಪ್ರಕಾಶ್ ಹೇಳಿಕೊಂಡಿದ್ದ. ಶಾಸಕ ಬೈರತಿ ಬಸವರಾಜ್ ಅವರ ಕುಮ್ಮಕ್ಕಿನಿಂದಲೇ ಆರೋಪಿಗಳು ನನ್ನ ಮಗನನ್ನು ಹತ್ಯೆಗೈದಿದ್ದಾರೆ ಎಂದು ದೂರಿನಲ್ಲಿ ಶಿವಪ್ರಕಾಶ್ ತಾಯಿ ಆರೋಪಿಸಿದ್ದರು.