ಜ್ಞಾನೇಂದ್ರ ಕುಮಾರ್ ಪ್ರಶ್ನೆ ಪತ್ರಿಕೆ ಸೋರಿಕೆ ರೂವಾರಿ: ಕೆಪಿಎಸ್ʼಸಿ ಹಗರಣ ಬಗೆದಷ್ಟೂ ಅಕ್ರಮ
ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕಗೊಂಡ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗ ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕವಾಗಲು ಬೇಕಾಗಿದ್ದ ಕನಿಷ್ಠ ಅರ್ಹತೆ ಇರಲಿಲ್ಲ ಎನ್ನುವ ಅಂಶ ತನಿಖೆ ವೇಳೆ ಬಯಲಾಗಿದೆ. ರಾಷ್ಟ್ರೀಯ ಸಹಕಾರ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸು ತ್ತಿದ್ದಾಗ ಅವರ ಕೆಲಸ ತೃಪ್ತಿದಾಯಕ ವಾಗಿಲ್ಲವೆಂದು ಗುತ್ತಿಗೆ ನವೀಕರಿಸಿರಲಿಲ್ಲ ಎನ್ನುವ ಅಂಶ ತಿಳಿದುಬಂದಿದೆ.
-
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶು ವೈದ್ಯಾಧಿಕಾರಿಗಳ ನೇಮಕ ಪರೀಕ್ಷೆಯ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಆಯೋಗದ ಮತ್ತಷ್ಟೂ ಹಗರಣಗಳ ದರ್ಶನವಾಗಿದ್ದು ಕೆಪಿಎಸ್‌ಸಿ ಅಧ್ಯಕ್ಷರ ಆಯ್ಕೆಯಲ್ಲಿಯೂ ಅಕ್ರಮ ನಡೆದಿದೆ ಎನ್ನುವ ಅಂಶ ಬಹಿರಂಗವಾಗಿದೆ. ಇದೇ ವೇಳೆ ಪರೀಕ್ಷಾ ನಿಯಂತ್ರಕರಾಗಿದ್ದ ಮತ್ತು ಎಲ್ಲಾ ಪರೀಕ್ಷೆಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರೇ ಈ ಅಕ್ರಮದ ಮಾಸ್ಟರ್ ಮೈಂಡ್ ಎಂದು ಸಿಐಡಿ ಮೂಲಗಳು ಹೇಳಿವೆ.
ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕಗೊಂಡ ಶಿವಶಂಕರಪ್ಪ ಎಸ್. ಸಾಹುಕಾರ್ ಅವರಿಗ ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕವಾಗಲು ಬೇಕಾಗಿದ್ದ ಕನಿಷ್ಠ ಅರ್ಹತೆ ಇರಲಿಲ್ಲ ಎನ್ನುವ ಅಂಶ ತನಿಖೆ ವೇಳೆ ಬಯಲಾಗಿದೆ. ರಾಷ್ಟ್ರೀಯ ಸಹಕಾರ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸು ತ್ತಿದ್ದಾಗ ಅವರ ಕೆಲಸ ತೃಪ್ತಿದಾಯಕ ವಾಗಿಲ್ಲವೆಂದು ಗುತ್ತಿಗೆ ನವೀಕರಿಸಿರಲಿಲ್ಲ ಎನ್ನುವ ಅಂಶ ತಿಳಿದುಬಂದಿದೆ.
ತನಿಖೆಯ ವೇಳೆ ಸಿಐಡಿ ಅಧಿಕಾರಿಗಳಿಗೆ ಸಿಕ್ಕಿರುವ ಸಾಕ್ಷ್ಯಗಳು ಬೆಚ್ಚಿಬೀಳಿಸುವಂತಿವೆ. ಅಂದು ಪರೀಕ್ಷಾ ನಿಯಂತ್ರಕರಾಗಿದ್ದ ಮತ್ತು ಎಲ್ಲಾ ಪರೀಕ್ಷೆಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರೇ ಈ ಅಕ್ರಮದ ರೂವಾರಿ ಎಂದು ಸಿಐಡಿ ಮೂಲಗಳು ಹೇಳಿವೆ.
ಇದನ್ನೂ ಓದಿ: KPSC Recruitment Scam: ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್
ಪ್ರಶ್ನೆಪತ್ರಿಕೆ ಸೋರಿಕೆ, ಓಎಂಆರ್ ಶೀಟ್‌ಗಳ ತಿದ್ದುಪಡಿ ಹಾಗೂ ಸ್ಟ್ರಾಂಗ್ ರೂಮ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಅಳಿಸಿಹಾಕುವ ಮೂಲಕ ಸಾಕ್ಷ್ಯ ನಾಶಪಡಿಸಲು ಜ್ಞಾನೇಂದ್ರ ಕುಮಾರ್ ಸಕ್ರಿಯ ವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ರಾಜ್ಯ ಸರಕಾರವು ಈ ಪ್ರಕರಣದ ಗಂಭೀರತೆ ಪರಿಗಣಿಸಿ ಸಿಐಡಿ ತನಿಖೆಗೆ ಆದೇಶಿಸಿದ ಬೆನ್ನ, ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಸೇರಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಿಐಡಿ ತಂಡವು ನಡೆಸಿದ ಸುದೀರ್ಘ ಕಾರ್ಯಾಚರಣೆಯ ಬಳಿಕ, ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಬಸವರಾಜ್ ಕನ್ನಾಳೆ ಅವರನ್ನು ಬಂಧಿಸಿ, 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಇಬ್ಬರೂ ಆರೋಪಿಗಳನ್ನು ಸೆಪ್ಟೆಂಬರ್ 9 ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ತನಿಖೆಯು ಕೇವಲ ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸೀಮಿತವಾಗಿಲ್ಲ. ಬಸವರಾಜ್ ಕನ್ನಾಳೆ ಯು ಇತರ ಗ್ರೇಡ್-1 ನೇಮಕಾತಿಗಳಲ್ಲೂ ಅಕ್ರಮ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬೃಹತ್ ಜಾಲದಲ್ಲಿ ಇನ್ನೂ ಹಲವು ಪ್ರಭಾವಿ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆ ಇದೆ. ತನಿಖೆ ಆಳಕ್ಕೆ ಹೋಗುತ್ತಿದ್ದಂತೆ, ದಿನಕ್ಕೊಂದು ಹೊಸ ಸೋಟಕ ವಿಷಯಗಳು ಹೊರಬರುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳು ನಡೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಯುವಕರ ಭವಿಷ್ಯದೊಂದಿಗೆ ಚೆಟವಾಡುತ್ತಿರುವ ಯಾರನ್ನೇ ಆದರೂ ಸಹಿಸುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.
ಸಿಐಡಿ ಅಧಿಕಾರಿಗಳು ರಾಜಕೀಯ ಒತ್ತಡಗಳಿಗೆ ಮಣಿಯದೆ ತನಿಖೆಯನ್ನು ಮುಂದುವರಿಸುತ್ತಿದ್ದು, ಪ್ರಕರಣದ ಬೇರುಗಳನ್ನು ಕಿತ್ತೊಗೆಯಲು ಪಣತೊಟ್ಟಿದ್ದಾರೆ. ಓಎಂಆರ್ ಶೀಟ್ ತಿದ್ದುಪಡಿ ಮತ್ತು ಸ್ಟ್ರಾಂಗ್ ರೂಮ್ ಭದ್ರತೆಯಲ್ಲಿ ಉಂಟಾದ ಲೋಪಗಳು, ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಆಳವನ್ನು ತೋರಿಸುತ್ತಿವೆ.
ಬಿಜೆಪಿ ಕಾರ್ಯಕರ್ತ ಕನ್ನಾಳೆ ಬಂಧನ ಪಶುವೈದ್ಯಾಧಿಕಾರಿಗಳ ನೇಮಕ ಪರೀಕ್ಷೆಯ ಅಕ್ರಮ ಸಂಬಂಧ ಬೀದರ್ ಮೂಲದ ಬಿಜೆಪಿ ಮುಖಂಡ ಮತ್ತು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆಯನ್ನು ಸಿಐಡಿ ಬಂಧಿಸಿದೆ. ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಈತ ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿ ದ್ದಲ್ಲದೆ, ಪರೀಕ್ಷಾರ್ಥಿಗಳಿಗೆ ಒಂದಕ್ಕೆ 40 ಲಕ್ಷ ರುಪಾಯಿಯಂತೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಎನ್ನಲಾಗಿದೆ. ಈ ಹಣಕಾಸಿನ ವ್ಯವಹಾರವನ್ನು ಬ್ಯಾಂಕ್ ಖಾತೆ ಮತ್ತು ನಗದು ರೂಪದಲ್ಲಿ ನಡೆಸಲಾಗಿತ್ತು.
ಗುತ್ತಿಗೆ ನೌಕರನಿಗೆ ಅಧ್ಯಕ್ಷ ಸ್ಥಾನ?
ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಅಥವಾ ಸದಸ್ಯರಾಗಲು ಕೇಂದ್ರ ಅಥವಾ ರಾಜ್ಯ ಸರಕಾರದ ಅಧೀನದಲ್ಲಿ ಕನಿಷ್ಠ 10 ವರ್ಷವರೆಗೆ ಕಾರ್ಯನಿರ್ವಹಿಸಬೇಕು ಎಂದು ಸಂವಿಧಾನದ 316ನೇ ವಿಧಿಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಅಂದಿನ ಬಿಜೆಪಿ ಸರಕಾರ ಸಹಕಾರಿ ಯೂನಿಯನ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದವರನ್ನು ಆಯೋಗಕ್ಕೆ ಅಧ್ಯಕ್ಷನನ್ನಾಗಿ ನೇಮಿಸಿದೆ. ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಿವಶಂಕರಪ್ಪ ಎಸ್.ಸಾಹುಕಾರ್ 10 ವರ್ಷಗಳ ಹಿಂದೆ ರಾಷ್ಟ್ರೀಯ ಸಹಕಾರ ಯೂನಿಯನ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದರು. ಆ ಅವಧಿಯಲ್ಲಿ ಅವರ ಕಾರ್ಯನಿರ್ವಹಣೆ ತೃಪ್ತಿಕರವಾಗಿರಲಿಲ್ಲ. ಹೀಗಾಗಿ ಅವರ ಗುತ್ತಿಗೆ ಅವಧಿ ವಿಸ್ತರಿಸಬಾರದು.
ಯಾವುದೇ ಪ್ರಭಾರ ಕಾರ್ಯಭಾರವನ್ನೂ ವಹಿಸಬಾರದು ಎಂಬ ಷರಾದೊಂದಿಗೆ 2010ರ ಮಾರ್ಚ್ 18 ರಂದು ಆದೇಶ ಹೊರಡಿಸಲಾಗಿತ್ತು. ಸರಕಾರದ ಇತರೆ ಇಲಾಖೆಗಳಿಗೆ ಗ್ರೂಪ್ ಎ,ಬಿ ಮತ್ತು ಸಿ ಗುಂಪಿಗೆ ಅಽಕಾರಿ, ನೌಕರರನ್ನು ಆಯ್ಕೆ ಮಾಡುವ ಪ್ರಾಽಕಾರ. ಕೆಪಿಎಸ್‌ಸಿಯಂತಹ ಪ್ರಮುಖ ಸಾಂವಿಧಾನಿಕ ಹುದ್ದೆಗಳಿಗೆ ಆಯ್ಕೆ ಮಾಡುವ ವೇಳೆ ಉನ್ನತ ಅರ್ಹತೆಯುಳ್ಳ ಮತ್ತು ಸರಕಾರದ ಜವಾಬ್ದಾರಿಯುತ ಹುದ್ದೆಯಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವವರನ್ನು ನೇಮಿಸಬೇಕಿತ್ತು ಎನ್ನುವ ಮಾತುಗಳು ಕೇಳಿಬರುತ್ತಿದೆ.
ಬಿಜೆಪಿ ಕಾರ್ಯಕರ್ತ ಕನ್ನಾಳೆ ಬಂಧನ
ಪಶುವೈದ್ಯಾಧಿಕಾರಿಗಳ ನೇಮಕ ಪರೀಕ್ಷೆಯ ಅಕ್ರಮ ಸಂಬಂಧ ಬೀದರ್ ಮೂಲದ ಬಿಜೆಪಿ ಮುಖಂಡ ಮತ್ತು ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ್ ಕನ್ನಾಳೆಯನ್ನು ಸಿಐಡಿ ಬಂಧಿಸಿದೆ. ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಈತ ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ಪರೀಕ್ಷಾರ್ಥಿಗಳಿಗೆ ಒಂದಕ್ಕೆ 40 ಲಕ್ಷ ರುಪಾಯಿಯಂತೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಎನ್ನಲಾಗಿದೆ. ಈ ಹಣಕಾಸಿನ ವ್ಯವಹಾರವನ್ನು ಬ್ಯಾಂಕ್ ಖಾತೆ ಮತ್ತು ನಗದು ರೂಪದಲ್ಲಿ ನಡೆಸಲಾಗಿತ್ತು. ಸದ್ಯ ಬಂಧಿತರಾಗಿರುವ ಆರೋಪಿಗಳ ವಿಚಾರಣೆಯಿಂದ ಹಣದ ಹರಿವು ಯಾರು ಯಾರಿಗೆ ತಲುಪಿದೆ ಮತ್ತು ಈ ಜಾಲದ ಹಿಂದೆ ಇರುವ ದೊಡ್ಡ ಶಕ್ತಿಗಳು ಯಾವುವು ಎಂಬುದು ಸ್ಪಷ್ಟವಾಗಲಿದೆ.
ಬಂಧಿತ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರು 2018 ರಿಂದ 2019 ರವರೆಗೆ ಸುಮಾರು 11 ತಿಂಗಳುಗಳ ಕಾಲ ಬಸವಕಲ್ಯಾಣದಲ್ಲಿ ಎಸಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ತದನಂತರ 2020-21ರಲ್ಲಿ ಬೀದರ್ ಜಿಲ್ಲಾ ಪಂಚಾಯ್ತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಇದೇ ಅವಧಿಯಲ್ಲಿ ಬಸವರಾಜ್ ಕನ್ನಾಳೆ, ಪ್ರಸ್ತುತ ಬಿಜೆಪಿ ಶಾಸಕರಾಗಿರುವ ಡಾ.ಶೈಲೇಂದ್ರ ಬೆಲ್ದಾಳೆ ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದನು. ಈ ಸಂದರ್ಭದಲ್ಲಿ ಜ್ಞಾನೇಂದ್ರ ಕುಮಾರ್ ಅವರೊಂದಿಗೆ ಬಸವರಾಜ್ ಅತ್ಯಂತ ನಿಕಟ ಹಾಗೂ ಉತ್ತಮ ಒಡನಾಟ ಬೆಳೆಸಿಕೊಂಡಿದ್ದ ಎನ್ನಲಾಗಿದೆ.
*
ಗುತ್ತಿಗೆ ನೌಕರನಿಗೆ ಅಧ್ಯಕ್ಷ ಸ್ಥಾನ?
ಪ್ರಶ್ನೆಪತ್ರಿಕೆ ಸೋರಿಕೆಗೆ ಕನ್ನಾಳೆ ಮಧ್ಯವರ್ತಿ
ಇನ್ನಷ್ಟು ಪರೀಕ್ಷೆಗಳಲ್ಲಿ ಅಕ್ರಮ ಸಾಧ್ಯತೆ