ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mysuru Dasara 2025: ದಸರಾವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬುವುದು ಸುಳ್ಳು ಸುದ್ದಿ: ಸಿಎಂ ಸ್ಪಷ್ಟನೆ

Sonia Gandhi: ನಾಡಹಬ್ಬ ದಸರಾವನ್ನು ಸೋನಿಯಾ ಗಾಂಧಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ದಸರಾವನ್ನು ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ದಸರಾವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬುವುದು ಸುಳ್ಳು ಸುದ್ದಿ

Prabhakara R Prabhakara R Aug 22, 2025 2:04 PM

ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವವನ್ನು (Mysuru Dasara 2025) ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.

ನಾಡಹಬ್ಬ ದಸರಾವನ್ನು ಸೋನಿಯಾ ಗಾಂಧಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಸಿಎಂ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಾರಿಯ ದಸರಾವನ್ನು ಕಾಂಗ್ರೆಸ್‍ ಅಧಿನಾಯಕಿ ಸೋನಿಯಾ ಗಾಂಧಿ ಅವರ ಕೈ ಯಲ್ಲಿ ಉದ್ಘಾಟನೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ | Elephant Arjuna: ದಸರಾ ಆನೆ ಅರ್ಜುನನ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಿದ ರಾಜ್ಯ ಸರ್ಕಾರ

ಮೈಸೂರು ದಸರಾದಲ್ಲಿ ಏರ್ ಶೋಗೆ ರಕ್ಷಣಾ ಇಲಾಖೆ ಅಸ್ತು, ಧನ್ಯವಾದ ಸಲ್ಲಿಸಿದ ಸಿಎಂ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದಲ್ಲಿ ಏರ್ ಶೋ (Air show) ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಧನ್ಯವಾದ ಹೇಳಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಸಚಿವರಿಗೆ ಧನ್ಯವಾದ ಹೇಳಿದ್ದಾರೆ. ಕರ್ನಾಟಕ ಸರ್ಕಾರ, ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.

ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಾರಿಯ ದಸರಾವನ್ನು ಅದ್ಧೂರಿ ಜತೆಗೆ ಅಚ್ಚುಕಟ್ಟಾಗಿ ಜನಪರವಾಗಿ ಆಚರಣೆ ಮಾಡಬೇಕೆಂದು ಸರ್ಕಾರ ನಿರ್ಧಾರ ಮಾಡಿದೆ. ಅಲ್ಲದೆ, ದಸರಾ ಮಹೋತ್ಸವಕ್ಕೆ ಮತ್ತಷ್ಟು ಮೆರುಗು ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಮುಂದಾಗಿದ್ದರು. ದಸರಾದಲ್ಲಿಏರ್‌ ಶೋ ಪ್ರದರ್ಶನಕ್ಕೆ ಚಿಂತನೆ ನಡೆಸಿ ಕಳೆದ ತಿಂಗಳು ಹೊಸದಿಲ್ಲಿಗೆ ತೆರಳಿದ್ದ ವೇಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆ ಮಾತುಕತೆ ಇದೀಗ ಫಲಪ್ರದವಾಗಿದ್ದು, ರಾಜ್ಯದ ಬೇಡಿಕೆಯಾದ ಏರ್‌ ಶೋಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ವೈಮಾನಿಕ ಪ್ರದರ್ಶನವನ್ನು ಮೈಸೂರಿಗರೂ ಎರಡು - ಮೂರು ಬಾರಿ ಕಣ್ತುಂಬಿಕೊಂಡಿದ್ದಾರೆ. ಈ ಹಿಂದೆ 2023, 2019 ಹಾಗೂ 2017 ರಲ್ಲಿ ಏರ್‌ ಶೋ ದಸರಾದಲ್ಲಿ ನಡೆದಿತ್ತು. ಕಳೆದ ವರ್ಷ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್‌ ಶೋ ಹಮ್ಮಿಕೊಳ್ಳಲಾಗಿತ್ತು. ಅಲ್ಲದೆ, ಮೈಸೂರು ದಸರಾದಲ್ಲಿ ಡ್ರೋಣ್‌ ಶೋ ನಡೆಸಲಾಗಿತ್ತು. ಈ ಎರಡು ಶೋ ನೋಡಲು ಜನರು ಆಗಮಿಸಿದ್ದರು.