Bengaluru News: ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಕಿರಾತಕ!
Bengaluru News: ಬೆಂಗಳೂರಿನ ವಿವೇಕ್ ನಗರದಲ್ಲಿ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯ ಸಹೋದರಿ ಹಲವು ವರ್ಷಗಳಾದರೂ ಸಾಲ ವಾಪಸ್ ನೀಡಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿ ವ್ಯಕ್ತಿಯ ಮನೆಗೆ ಆರೋಪಿ ಬೆಂಕಿ ಇಟ್ಟಿದ್ದಾನೆ.


ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಮಣಿ ಬೆಂಕಿ ಹಚ್ಚಿದ ಆರೋಪಿ. ಈತನ ಸಹೋದರಿ ತನ್ನ ಮಗಳ ಮದುವೆಗಾಗಿ, ವೆಂಕಟರಮಣಿ ಎಂಬುವವರ ಬಳಿ 5 ಲಕ್ಷ ರೂ. ಹಣ ಪಡೆದಿದ್ದಳು. ಹಲವು ವರ್ಷಗಳಾದರೂ ಸಾಲ ವಾಪಸ್ ನೀಡಿರಲಿಲ್ಲ. ಇದರಿಂದ ವೆಂಕಟರಮಣಿ ಹಣ ವಾಪಸ್ ಕೊಡುವಂತೆ ಕೇಳಿದ್ದರು.
ಹಣ ವಾಪಸ್ ಕೇಳಿದ್ದಕ್ಕೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿಯವರ ಬಳಿ ಗಲಾಟೆ ಮಾಡಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಿಟ್ಟಾದ ಆರೋಪಿ, ವೆಂಕಟರಮಣಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಚಿಪ್ಸ್ ಆಸೆ ತೋರಿಸಿ 7ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವ ಹೀನ ಕೃತ್ಯವೊಂದು(Physical assault) ಬೆಳಕಿಗೆ ಬಂದಿದೆ. ಚಿಪ್ಸ್ ಆಸೆ ತೋರಿಸಿ ಕಾಮುಕನೋರ್ವ 7 ವರ್ಷದ ಬಾಲಕಿಯ ಮೇಲೆ ಅಟ್ಟಹಾಸ ಮೆರೆದಿದ್ದಾನೆ. ಇದೀಗ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿಬಂದಿದ್ದು, 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿ ಚಿಪ್ಸ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದು ಗೋದಾಮಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಬಾಲಕಿ ಪೋಷಕರು ಬಾಗಲಗುಂಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಹಿನ್ನೆಲೆಯಲ್ಲಿ ಕೇರಳ ಮೂಲದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಈ ಸುದ್ದಿಯನ್ನೂ ಓದಿ: MP Murder Case: ಅತ್ತಿಗೆ ಮೈದುನನ ಲವ್ವಿ-ಡವ್ವಿಗೆ ಪತಿ ಬಲಿ; ಕ್ರೈಂ ಪೆಟ್ರೋಲ್ ಶೋ ನೋಡಿ ಕೊಲೆಗೆ ಪ್ಲ್ಯಾನ್!