ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ebola case: ರಾಜ್ಯದಲ್ಲಿ ಪತ್ತೆಯಾದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್‌: ಸಚಿವ ದಿನೇಶ್‌ ಗುಂಡೂರಾವ್

ಎಬೋಲಾ ಪ್ರಕರಣದ ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಪತ್ತೆಯಾದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್‌

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌. -

Prabhakara R
Prabhakara R May 27, 2026 10:22 PM

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದ್ದು, ಸಂಪೂರ್ಣವಾಗಿ 'ನೆಗೆಟಿವ್' ಆಗಿದೆ. ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ.

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ಹಂಚಿಕೊಂಡಿದ್ದಾರೆ. ಎಬೋಲಾ ಪ್ರಕರಣದ ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ.

ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ರಾಜ್ಯದ ಜನತೆಗೆ ನಾನು ಭರವಸೆ ನೀಡಲು ಬಯಸುತ್ತೇನೆ. ನಮ್ಮ ಆರೋಗ್ಯ ಇಲಾಖೆಯು ಪ್ರತಿಯೊಂದು ಪರಿಸ್ಥಿತಿಯನ್ನೂ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಯಾವುದೇ ರೀತಿಯ ಸವಾಲನ್ನು ಎದುರಿಸಲು ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.

Ebola outbreak: ಎಬೋಲಾ ವೈರಸ್‌ ಆತಂಕ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್‌; ಮಾರ್ಗಸೂಚಿ ಪ್ರಕಟ

ಯಾರೂ ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ಕಳಕಳಿಯಿಂದ ವಿನಂತಿಸುತ್ತೇನೆ. ವದಂತಿಗಳಿಗೆ ಕಿವಿಗೊಡದೆ, ನಿಗದಿಪಡಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಿ. ಸರ್ಕಾರ ಮತ್ತು ಆರೋಗ್ಯ ಇಲಾಖೆ ಅಧಿಕೃತವಾಗಿ ಹೊರಡಿಸುವ ಮಾಹಿತಿ ಹಾಗೂ ಪ್ರಕಟಣೆಗಳನ್ನು ಮಾತ್ರ ಆಧಾರವಾಗಿಟ್ಟುಕೊಳ್ಳಿ. ನಿಮ್ಮ ಆರೋಗ್ಯದ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.