ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಡಾ. ಶಿವರಾಮ ಕಾರಂತ ಬಡಾವಣೆ ನಿವೇಶನದ ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

BDA: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಡಾ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಗಸ್ಟ್‌ 31ರಂದು ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ಅಕ್ಟೋಬರ್‌ 31ರ ಮಧ್ಯಾಹ್ನ 12:00 ಗಂಟೆಯವರೆಗೆ ಇದೆ.

ಕಾರಂತ ಬಡಾವಣೆ ನಿವೇಶನದ ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

ಡಾ. ಶಿವರಾಮ ಕಾರಂತ ಬಡಾವಣೆ (ಸಾಂದರ್ಭಿಕ ಚಿತ್ರ) -

Ramesh Ballamoole
Ramesh Ballamoole Oct 31, 2026 12:18 PM

ಬೆಂಗಳೂರು, ಅ. 31: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಡಾ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಗಸ್ಟ್‌ 31ರಂದು ಪ್ರಾರಂಭಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ಅಕ್ಟೋಬರ್‌ 31ರ ಮಧ್ಯಾಹ್ನ 12:00 ಗಂಟೆಯವರೆಗೆ ಇದೆ.

ಈ ಕುರಿತು ಸಾರ್ವಜನಿಕರಲ್ಲಿ ಹಾಗೂ ಅರ್ಜಿದಾರರಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಅಂತಿಮ ಕಾಲಮಿತಿಗಳ ಬಗ್ಗೆ ಈ ಕೆಳಗಿನಂತೆ ಸ್ಪಷ್ಟಪಡಿಸಲಾಗಿದೆ: ಚಲನ್ ಸೃಜನೆ (Challan Generation): ದಿನಾಂಕ 31.10.2026ರ ಮಧ್ಯಾಹ್ನ 12:00 ಗಂಟೆಯವರೆಗೆ ಮಾತ್ರ ಚಲನ್ ಸೃಜಿಸಲು ಅವಕಾಶವಿದೆ.

ಅರ್ಜಿ ಶುಲ್ಕ ಪಾವತಿ (Fee Payment): ದಿನಾಂಕ 31.10.2026ರಂದು ಬ್ಯಾಂಕಿನ ಕಾರ್ಯನಿರ್ವಹಣಾ ಸಮಯದೊಳಗೆ ಶುಲ್ಕವನ್ನು ಪಾವತಿಸಬೇಕು.

ವಿಶೇಷ ಸೂಚನೆ

ನಿಗದಿಪಡಿಸಿದ ಅಂತಿಮ ಸಮಯದ ನಂತರ ಸೃಜಿಸಲಾಗುವ ಯಾವುದೇ ಚಲನ್, ಸಲ್ಲಿಸುವ ಅರ್ಜಿಗಳು ಅಥವಾ ಪಾವತಿಸುವ ಹಣದ ಪ್ರಸ್ತಾವನೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕರು ಹಾಗೂ ಅರ್ಜಿದಾರರಿಗೆ ಈ ಮೂಲಕ ಸ್ಪಷ್ಟಪಡಿಸಲಾಗಿದೆ.