ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ; 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ

ಮೇ 10ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸೇವೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.

ರಾಜ್ಯದ 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ

-

Prabhakara R
Prabhakara R May 10, 2026 11:32 PM

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೊಡ್ಡಮಟ್ಟದ ವರ್ಗಾವಣೆ ಪ್ರಕ್ರಿಯೆ ಕೈಗೊಂಡಿದೆ. ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ದರ್ಜೆಯ ಅಧಿಕಾರಿಗಳ ವರ್ಗಾವಣೆಗೆ ಚಾಲನೆ ನೀಡಲಾಗಿದ್ದು, ಒಟ್ಟು 293 ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ಹಾಗೂ 74 ಡಿವೈಎಸ್‌ಪಿ (ಸಿವಿಲ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮೇ 10ರಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸೇವೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಡಿಜಿ ಮತ್ತು ಐಜಿಪಿ ಕಚೇರಿ ತಿಳಿಸಿದೆ.

ವರ್ಗಾವಣೆಗೊಂಡ 293 ಇನ್ಸ್‌ಪೆಕ್ಟರ್‌ಗಳಲ್ಲಿ ಹೆಚ್ಚಿನವರು ಬೆಂಗಳೂರು ನಗರ, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡದಂತಹ ಪ್ರಮುಖ ನಗರ ಪ್ರದೇಶಗಳ ವಿವಿಧ ಠಾಣೆಗಳಿಗೆ ನಿಯುಕ್ತಿಗೊಂಡಿದ್ದಾರೆ. ಇನ್ನುಇನ್ಸ್‌ಪೆಕ್ಟರ್‌ಗಳ ಜತೆಗೆ 74 ಡಿವೈಎಸ್‌ಪಿ (DySP) ದರ್ಜೆಯ ಅಧಿಕಾರಿಗಳಿಗೂ ಹೊಸ ಸ್ಥಳಗಳನ್ನು ನಿಯುಕ್ತಿಗೊಳಿಸಲಾಗಿದೆ.

ವರ್ಗಾವಣೆಯಾದ ಡಿವೈಎಸ್‌ಪಿ ಅಧಿಕಾರಿಗಳ ಪಟ್ಟಿ DYSP

ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ ಪಟ್ಟಿPI