ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Double murder case: ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

Two BJP leaders killed: ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಜೋಡಿ ಕೊಲೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಹದೇವಪುರದ ಬಿಜೆಪಿ ಯುವ ಮುಖಂಡ ಪ್ರಶಾಂತರೆಡ್ಡಿ ಹಾಗೂ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಕೇಸ್ ವಿಚಾರಣೆಗೆ ಹಾಜರಾದ ವೇಳೆ, ತಂದೆ-ಮಗನನ್ನು ಅಪಹರಿಸಿ, ಹತ್ಯೆ ಮಾಡಲಾಗಿದೆ.

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕತ್ತು ಸೀಳಿ ಬರ್ಬರ ಹತ್ಯೆ!

Prabhakara R Prabhakara R Jul 23, 2025 9:06 PM

ಬೆಂಗಳೂರು: ಬೆಂಗಳೂರು ಮೂಲದ ಇಬ್ಬರು ಉದ್ಯಮಿ ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಕತ್ತು ಸೀಳಿ ಕೊಲೆ (Double murder case) ಮಾಡಿ, ಹೆದ್ದಾರಿ ಬಳಿ ಬೀಸಾಡಿರುವ ಘಟನೆ ನಡೆದಿದೆ. ಮೃತರು ತಂದೆ-ಮಗ ಆಗಿದ್ದು, ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದಾಗ, ಇಬ್ಬರನ್ನೂ ಅಪಹರಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತರನ್ನು ಬೆಂಗಳೂರಿನ ಮಹದೇವಪುರದ ಬಿಜೆಪಿ ಯುವ ಮುಖಂಡ ಪ್ರಶಾಂತರೆಡ್ಡಿ ಹಾಗೂ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಇವರು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಆಪ್ತರು ಎಂದು ತಿಳಿದುಬಂದಿದೆ.

ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಬೆಂಗಳೂರಿನ ಕಾಡುಗೋಡಿಯಲ್ಲಿ ನೆಲೆಸಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಇಬ್ಬರೂ ಮಾರ್ವಲ್ ಬಿಲ್ಡರ್ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಮೇಲೆ ಚೆಕ್ ಬೌನ್ಸ್ ಕೇಸು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಆಂಧ್ರ ಮೂಲದ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ಅಪ್ಪ- ಮಗನ ಮೇಲೆ ಚೆಕ್ ಬೌನ್ಸ್ ಕೇಸ್‌ ದಾಖಲಿಸಿದ್ದರು. ನೆನ್ನೆ ವಿಮಾನದ ಮೂಲಕ ಅಪ್ಪ-ಮಗ ಕೋರ್ಟ್ ಕೇಸ್‌ ವಿಚಾರಣೆಗೆ ತೆರಳಿದ್ದರು. ಮಧ್ಯಾಹ್ನ ಕೋರ್ಟ್ ಬಳಿಯೇ ತಂದೆ-ಮಗ ಇಬ್ಬರನ್ನೂ ಮಾತುಕತೆಗೆ ಕರೆದ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ರಾಜಿಯಾಗೋಣ ಎಂದು ಮಾತನಾಡುತ್ತಲೇ, ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಕೂರಿಸಿಕೊಂಡ ಕಿಡ್ನ್ಯಾಪ್ ಮಾಡಿದ್ದಾರೆ. ಇದಾದ ಬಳಿಕ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಹೆದ್ದಾರಿಯಲ್ಲೇ ಬೀಸಾಡಿ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿಯನ್ನೂ ಓದಿ | Murder Case: ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

ಗೌರಿಬಿದನೂರಿನಲ್ಲಿ ಸ್ಕೂಟಿ-ಲಾರಿ ಡಿಕ್ಕಿಯಾಗಿ 5 ತಿಂಗಳ ಗರ್ಭಿಣಿ, ಪತಿ ದುರ್ಮರಣ

ಚಿಕ್ಕಬಳ್ಳಾಪುರ: ಸ್ಕೂಟಿ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ತಿಂಗಳ ಗರ್ಭಿಣಿ ಮತ್ತು ಆಕೆಯ ಪತಿ ಮೃತಪಟ್ಟಿರುವುದು ಗೌರಿಬಿದನೂರಿನಲ್ಲಿ ನಡೆದಿದೆ. ನೂರಿ (35) ಮತ್ತು ಯಾಸಿನ್ ಖಾನ್ (45) ಮೃತ ದಂಪತಿ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆಯಲ್ಲಿ ಮಂಗಳವಾರ ರಾತ್ರಿ ಅಪಘಾತ ನಡೆದಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಗೌರಿಬಿದನೂರು ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ದಂಪತಿ ಸಂಬಂಧಿಕರೊಬ್ಬರ ಕಾರ್ಯಕ್ರಮ ಮುಗಿಸಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದರು. ಈ ವೇಳೆ ಇವರ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಯಾಸಿನ್ ಖಾನ್ ಸ್ಥಳದಲ್ಲಿ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಪತಿಯನ್ನು ಬೆಂಗಳೂರಿನ ವಿಕ್ಟೋರಿಯೊ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತ ನೂರಿ ಮದುವೆಯಾಗಿ 15 ವರ್ಷದ ಬಳಿಕ ಗರ್ಭಿಣಿಯಾಗಿದ್ದಳು. ತಂದೆ -ತಾಯಿ ಆಗುವ ಖುಷಿಯಲ್ಲಿ ದಂಪತಿ ಇದ್ದರು. ಆದರೆ, ಜವರಾಯನ ಅಟ್ಟಹಾಸಕ್ಕೆ ಹೊಟ್ಟೆಯಲ್ಲಿದ್ದ ಮಗು ಸೇರಿ ದಂಪತಿ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Murder Case: ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ