ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

LPG cylinder blast: ಗ್ಯಾಸ್ ಸೋರಿಕೆಯಿಂದ ಹೊತ್ತಿ ಉರಿದ ಮನೆ; ಇಬ್ಬರು ಸಜೀವದಹನ, ನಾಲ್ವರು ಗಂಭೀರ

LPG cylinder blast: ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಅವಘಡ ನಡೆದಿದೆ. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ವ್ಯಕ್ತಿಯೊಬ್ಬರು ತೆರಳಿದಾಗ ಗ್ಯಾಸ ಸೋರಿಕೆಯಾಗಿ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ.

ಗ್ಯಾಸ್ ಸೋರಿಕೆಯಿಂದ ಹೊತ್ತಿ ಉರಿದ ಮನೆ; ಇಬ್ಬರು ಸಜೀವದಹನ

Profile Prabhakara R May 1, 2025 1:39 PM

ನೆಲಮಂಗಲ: ಗ್ಯಾಸ್ ಸೋರಿಕೆಯಿಂದ ಮನೆ ಹೊತ್ತಿ ಉರಿದು, ಇಬ್ಬರು ಸಜೀವ ದಹನವಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದು (LPG cylinder blast) ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ನಡೆದಿದೆ. ನಾಗರಾಜ್(50) ಮತ್ತು ಶ್ರೀನಿವಾಸ್(50) ಮೃತರು. ಗಾಯಾಳುಗಳಾದ ಅಭಿಷೇಕ್, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸವ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗಯ್ಯ ಎಂಬುವವರಿಗೆ ಎರಡು ಬಾಡಿಗೆ ಮನೆಗಳು ಇದ್ದು, ಬಳ್ಳಾರಿಯ ನಾಗರಾಜ್​ ಕುಟುಂಬ ಒಂದು ಮನೆಯಲ್ಲಿ ಬಾಡಿಗೆಗೆ ಇತ್ತು. ಬೆಳಗ್ಗೆ ಕೆಲಸಕ್ಕೆ ತೆರಳುವಾಗ ನಾಗರಾಜ್ ದೇವರ ಮುಂದೆ ದೀಪ ಹಚ್ಚಿದ್ದರು. ಈ ವೇಳೆ ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಮಗ ಅಭಿಷೇಕ್ ಮುಂದಾಗಿದ್ದ. ಅಜಾಗರೂಕತೆಯಿಂದ ಸಿಲಿಂಡರ್ ಫಿಟ್ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ದೀಪದ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ನಾಗರಾಜ್ ಹಾಗೂ ಶ್ರೀನಿವಾಸ್ ಮೃತಪಟ್ಟಿದ್ದಾರೆ.

ಮೂಲತಃ ಬಳ್ಳಾರಿಯವರಾಗಿರುವ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿದ್ದರು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19) ಅಭಿಷೇಕ್ ಗೌಡ (18) ವಾಸವಿದ್ದರು. ಮನೆ ಹೊತ್ತಿ ಉರಿದಾಗ ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್​ ಕೂಡ ಬೆಂಕಿಯಲ್ಲಿ ಸಿಲುಕಿದ್ದರು. ಈ ವೇಳೆ ಲಕ್ಷ್ಮಿದೇವಿ, ಬಸವನಗೌಡ ಮನೆಯಿಂದ ಓಡಿ ಬಂದಿದ್ದು, ನಾಗರಾಜ್ ಹಾಗೂ ಅಭಿ ಬೆಂಕಿಗೆ ಸಿಲುಕಿದ್ದರು.

ಈ ಸುದ್ದಿಯನ್ನೂ ಓದಿ | Kothi Manja Passed Away: ಜೋಗಿ ಸಿನಿಮಾ ಖ್ಯಾತಿಯ ನಟ ಕೋತಿ ಮಂಜ ನಿಧನ

ಈ ವೇಳೆ ಪಕ್ಕದ ಮನೆಯಲ್ಲಿದ್ದ ಶ್ರೀನಿವಾಸ್ ಹಾಗೂ ಮನೆ ಮಾಲೀಕ ಶಿವಶಂಕರ್ ಬೆಂಕಿ ನಂದಿಸಲು ಮುಂದಾಗಿದ್ದರು. ಅಭಿಷೇಕ್​ನನ್ನು ಉಳಿಸಲು ಶ್ರೀನಿವಾಸ್ ಹೋಗಿದ್ದು, ಇತ್ತ ನಾಗರಾಜ್​ರನ್ನು ಉಳಿಸಲು ಹೋಗಿದ್ದ ಶಿವಶಂಕರ್​ಗೆ ಬೆಂಕಿ ತಗುಲಿದೆ. ಕೂಡಲೇ ಸ್ಥಳಿಯರು ಬೆಂಕಿ ತಗುಲಿದವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಚಿತ್ರದುರ್ಗದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವು

road accident chitradurga

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿಯಾಗಿ (Road accident) ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿರುವ (three death) ಘಟನೆ ನಡೆದಿದೆ. ಕಾರಿನಲ್ಲಿದ್ದ ಅರ್ಜುನ್ (28), ಶರವಣ (31) ಮತ್ತು ಸೇಂದಿಲ್ (29) ಮೃತರು. ಘಟನೆ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತದಲ್ಲಿ ಸಮತಾ ಸೈನಿಕ ದಳ ರಾಜ್ಯಾಧ್ಯಕ್ಷ ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ವರ್ಲಕೊಂಡ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಮತ ಸೈನಿಕ ದಳ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಕಾರ್ಯಕ್ರಮ ನಿಮಿತ್ತ ಬಾಗೇಪಲ್ಲಿಗೆ ತೆರಳಿದ್ದ ಇವರು ಇನ್ನೋವಾ ಕಾರಿನಲ್ಲಿ ವಕೀಲ ಸ್ನೇಹಿತರ ಜೊತೆಗೂಡಿ ಬೆಂಗಳೂರಿನತ್ತ ಬರುತ್ತಿದ್ದರು. ವರ್ಲಕೊಂಡ ಸೇತುವೆ ಬಳಿ ಇನ್ನೊಬ್ಬ ಕಾರಿನ ಟೈಯರ್ ಸಿಡಿದ ಪರಿಣಾಮ ಕಾರು ಹತ್ತಾರು ಪಲ್ಟಿ ಯಾಗಿ ರಸ್ತೆಯ ಬಳಿಯ ಹಳ್ಳಕ್ಕೆ ಬಿದ್ದ ಪರಿಣಾಮ ಚೆನ್ನಕೃಷ್ಣಪ್ಪ ಸ್ಥಳದಲ್ಲೇ ಮೃತರಾಗಿದ್ದಾರೆ.

ಇವರ ಜೊತೆಗಿದ್ದವರು ವಕೀಲರೆಂದು ತಿಳಿದು ಬಂದಿದ್ದು ಅವರ ಹೆಸರು ಗೊತ್ತಿಲ್ಲ. ಈ ಅಪಘಾತ ದಲ್ಲಿ ಅವರಿಗೆ ಕೈ ಬೆರಳು ತುಂಡಾಗಿದೆ ಎಂಬ ಮಾಹಿತಿ ಇದ್ದು, ಘಟನಾ ಸ್ಥಳದಿಂದ ಅವರು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ ಈ ಘಟನೆ ಬುಧವಾರ ಸಂಜೆ ನಡೆದಿದ್ದು ಸ್ಥಳಕ್ಕೆ ಭೇಟಿ ನೀಡಿದ್ದ ಪೆರೇಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಘಟನೆ ಸಂಬಂಧಪಟ್ಟ ಮೃತ ಚೆನ್ನಕೃಷ್ಣಪ್ಪ ಅವರ ಮಗ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು ಈ ಅಪಘಾತಕ್ಕೆ ಕಾರಣವೇನು ಎಂಬುದು ತನಿಖೆಯ ಬಳಿಕ ಗೊತ್ತಾಗಲಿದೆ.

ಇದನ್ನೂ ಓದಿ: Temple Wall Collapse: ಆಂಧ್ರಪ್ರದೇಶದಲ್ಲಿ ಘೋರ ದುರಂತ; ದೇವಾಲಯದ ಗೋಡೆ ಕುಸಿದು 8 ಮಂದಿ ಸಾವು