ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Corona Virus: ರಾಜ್ಯಕ್ಕೆ ಕೋವಿಡ್‌ ಕಂಟಕ; ಮತ್ತೆ ಇಬ್ಬರಿಗೆ ಸೋಂಕು ದೃಢ, 40 ಕ್ಕೇರಿದ ಪ್ರಕರಣ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಭಾನುವಾರದಿಂದಲೇ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೋನ ಟೆಸ್ಟ್ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಕಟ್ಟು ನಿಟ್ಟಿನ ಕ್ರಮವನ್ನು ಜಾರಿಗೊಳಿಸಿದೆ.

ರಾಜ್ಯಕ್ಕೆ ಕೋವಿಡ್‌ ಕಂಟಕ; ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ  ಸೋಂಕು ದೃಢ

Profile Vishakha Bhat May 25, 2025 10:52 AM

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ (Corona Virus) ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಭಾನುವಾರದಿಂದಲೇ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೋನ ಟೆಸ್ಟ್ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಕಟ್ಟು ನಿಟ್ಟಿನ ಕ್ರಮವನ್ನು ಜಾರಿಗೊಳಿಸಿದೆ. ಬೆಂಗಳೂರಿನಲ್ಲಿ ನಿನ್ನೆ ಸೋಂಕಿಗೆ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಇದೀಗ ಬೆಂಗಳೂರಿನಲ್ಲಿ ಮತ್ತೆ ಎರಡು ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಮಲ್ಲೇಶ್ವರಂನಲ್ಲಿ 45 ವರ್ಷದ ಮತ್ತು ರಾಜಾಜಿನಗರದಲ್ಲಿ 38 ವರ್ಷದ ವ್ಯಕ್ತಿಗೆ ಕೊವಿಡ್ ಪಾಸಿಟಿವ್ ಬಂದಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದರೂ ಕೊವಿಡ್ ಪಾಸಿಟಿವ್​ ಬಂದಿದ್ದು, ಸದ್ಯ ಕೊವಿಡ್ ಸೋಂಕಿತರು ಹೋಮ್​ ಐಸೋಲೇಷನ್​ನಲ್ಲಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಬಂದಿದ್ದು, ಇದೀಗ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಪಕ್ಕದ ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಗಣನೀಯವಾಗಿ ಕೊರೋನಾ ಕೇಸ್‌ ಏರಿಕೆ ಕಂಡಿದೆ. ಆಂಧ್ರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಯಾವುದೇ ರೂಪಾಂತರಿ ವೈರಸ್‌ ಪತ್ತೆಯಾಗಿಲ್ಲ. ಯಾವುದೇ ಆತಂಕ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸರ್ಕಾರ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜನನಿಬಿಡ ಪ್ರದೇಶದಲ್ಲಿ ಓಡಾಡುವಾಗ ಮಾಸ್ಕ್‌ ಧರಿಸಿ ಎಂದು ಸೂಚನೆ ನೀಡಿದೆ.

ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೊರೋನಾದ ರೂಪಾಂತರಿ ಒಮಿಕ್ರಾನ್ ಜೆಎನ್‌1 ಉಪ ತಳಿಗಳಾದ ಎನ್‌ಬಿ.1.8 ಮತ್ತು ಎಲ್‌ಎಫ್‌.7 ಕೇಸ್‌ಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಮತ್ತೊಂದೆಡೆ ನೆರೆ ರಾಜ್ಯ ಕೇರಳದಲ್ಲಿ ಮೇ ತಿಂಗಳಲ್ಲಿ 182 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಕೇರಳ ಸರಕಾರವು ಕೊಟ್ಟಾಯಂ, ಎರ್ನಾಕುಲಂ ಮತ್ತು ತಿರುವನಂತಪುರ ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ಈ ಸುದ್ದಿಯನ್ನೂ ಓದಿ: Corona Virus: ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಬೆಡ್‌, ಆಕ್ಸಿಜನ್‌ ರೆಡಿ ಇಡಲು ಸರ್ಕಾರ ಸೂಚನೆ

ಕೊರೋನಾ ಸೋಂಕಿನ ಜತೆಗೆ ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಪೂರ್ವ ಮುಂಗಾರು ಮಳೆಯ ಆರ್ಭಟದ ನಡುವೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಡೆಂಗ್ಯೂ, ಮಲೇರಿಯಾ, ಚಿಕುನ್‌ ಗುನ್ಯಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗುತ್ತಿದೆ. ಜತೆಗೆ ಸಾಮಾನ್ಯ ಜ್ವರ, ವೈರಲ್‌ ಸೋಂಕು, ನೆಗಡಿ, ಸುಸ್ತು, ತಲೆನೋವು ಪ್ರಕರಣಗಳೂ ಹೆಚ್ಚಳವಾಗುತ್ತಿದೆ.