ವೈಕುಂಠ ಏಕಾದಶಿ ಸಂಭ್ರಮ; ಬೆಳಗಿನಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ
Vaikuntha Ekadashi: ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಬೆಳಗಿನ ಜಾವದಿಂದಲೇ ವಿವಿಧ ದೇಗುಲಗಳಲ್ಲಿ ಶ್ರೀ ವೆಂಕಟೇಶ್ವರನಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿಸುತ್ತಿದ್ದಾರೆ. ಬೆಂಗಳೂರಿನ ಪ್ರಸಿದ್ಧ ದೇಗುಲ ಇಸ್ಕಾನ್, ವೈಯಾಲಿಕಾವಲ್ ಟಿಟಿಡಿ ಸೇರಿದಂತೆ ಪ್ರಮುಖ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಸಂಗ್ರಹ ಚಿತ್ರ -
ನಾಡಿನಾದ್ಯಂತ ವೈಕುಂಠ ಏಕಾದಶಿ (Vaikuntha Ekadashi) ಸಂಭ್ರಮ ಮನೆ ಮಾಡಿದೆ. ಬೆಳಗಿನ ಜಾವದಿಂದಲೇ ವಿವಿಧ ದೇಗುಲಗಳಲ್ಲಿ ಶ್ರೀ ವೆಂಕಟೇಶ್ವರನಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿಸುತ್ತಿದ್ದಾರೆ. ಬೆಂಗಳೂರಿನ ಪ್ರಸಿದ್ಧ ದೇಗುಲ ಇಸ್ಕಾನ್, ವೈಯಾಲಿಕಾವಲ್ ಟಿಟಿಡಿ ಸೇರಿದಂತೆ ಪ್ರಮುಖ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವೈಯಾಲಿಕಾವಲ್ ಟಿಟಿಡಿ ದೇವಾಲಯದಲ್ಲಿ ಬೆಳಗಿನ ಜಾವ 1:30 ರಿಂದ ರಾತ್ರಿ 11 ಘಂಟೆಯ ತನಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುದೆ. ವಯಾಲಿಕಾವಲ್ ಟಿಟಿಡಿ ದೇವಸ್ಥಾನಕ್ಕೆ ಅನೇಕ ಭಕ್ತರು ಬರುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಬ್ಯಾರಿಕೇಡ್ ಹಾಕಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ ಇರಲಿದೆ. ನೆಲಮಂಗಲದ ಶ್ರೀದೇವಿ ಭೂದೇವಿ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. 800 ವರ್ಷಗಳಿಗೂ ಹಳೆಯದಾದ ಪುರಾತನ ದೇವಾಲಯವಿದು. ದೇವಾಲಯದ ಉತ್ತರ ಬಾಗಿಲ ಮೂಲಕ ಭಕ್ತರು ವೈಕುಂಠನ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ 25 ಸಾವಿರಕ್ಕೂ ಅಧಿಕ ಭಕ್ತಾಧಿಗಳು ಬರುವ ನಿರೀಕ್ಷೆ ಇದೆ.
ಬೆಳಗಿನ ಜಾವದಿಂದಲೇ ದರ್ಶನಕ್ಕೆ ಭಕ್ತರು ಸಾಗರೋಪಾದಿಯಲ್ಲಿ ಗೋವಿಂದನ ದರ್ಶನಕ್ಕೆ ಬರುತ್ತಿದ್ದಾರೆ. ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ.
ತಿರುಪತಿಗೆ ಭಕ್ತರ ದಂಡು
ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅತ್ಯಂತ ಪವಿತ್ರವಾದ ವೈಕುಂಠ ಏಕಾದಶಿ ಆಚರಣೆಗಳು ಅದ್ಧೂರಿಯಾಗಿ ಆಚರಿಸಲಾಗುತ್ತೆ. ಡಿಸೆಂಬರ್ 30, ಮಂಗಳವಾರ ಬೆಳಿಗ್ಗೆ 12:05 ಕ್ಕೆ ವೈಕುಂಠ ದ್ವಾರಗಳನ್ನು ತೆರೆಯಲಾಯಿತು. ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) 10 ದಿನಗಳವರೆಗೆ, ಅಂದರೆ ಡಿಸೆಂಬರ್ 30 ರಿಂದ ಜನವರಿ 8, 2026 ರವರೆಗೆ ವೈಕುಂಠ ದ್ವಾರ ದರ್ಶನವನ್ನು ನೀಡುತ್ತಿವೆ. ಈ ವಿಶೇಷ ದರ್ಶನವು ವರ್ಷದಲ್ಲಿ ಈ ಹತ್ತು ದಿನಗಳವರೆಗೆ ಮಾತ್ರ ಲಭ್ಯವಿರುತ್ತದೆ, ಈ ಸಮಯದಲ್ಲಿ ಲಕ್ಷಾಂತರು ಜನರು ತಿಮ್ಮಪ್ಪನ ದರ್ಶನ ಮಾಡುತ್ತಾರೆ.