ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

G Parameshwar: ಪರಪ್ಪನ ಅಗ್ರಹಾರದಲ್ಲಿ ಉಗ್ರನಿಗೆ ರಾಜಾತಿಥ್ಯ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Parappana Agrahara Jail: ಇಂಥ ಘಟನೆಗಳು ಮಂಗಳೂರು, ಬೆಳಗಾವಿ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇ ಪದೆ ಆಗಿದ್ದು ಕೇಳಿಬಂದಿದೆ. ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಅವರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬೆಳವಣಿಗೆಗೆ ಯಾರು ಹೊಣೆಗಾರರಾಗಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವರು ನುಡಿದಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಉಗ್ರನಿಗೆ ರಾಜಾತಿಥ್ಯ: ಗೃಹ ಸಚಿವರು ಹೇಳಿದ್ದೇನು?

ಗೃಹ ಸಚಿವ ಜಿ ಪರಮೇಶ್ವರ್ -

ಹರೀಶ್‌ ಕೇರ
ಹರೀಶ್‌ ಕೇರ Nov 9, 2025 10:39 AM

ಬೆಂಗಳೂರು : ಪರಪ್ಪನ ಅಗ್ರಹಾರ (Parappana Agrahara Jail) ಜೈಲಿನಲ್ಲಿ ನಡೆಯುವ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದ್ದು ಜೈಲಿನಲ್ಲಿ ವಿಕೃತಕಾಮಿ ಉಮೇಶ್ ರೆಡ್ಡಿ ಹಾಗೂ ಶಂಕಿತ ಐಸಿಸ್‌ ಭಯೋತ್ಪಾದಕ ಶಕೀಲ್‌ ಸೇರಿದಂತೆ ಹಲವು ರಾಜಾತಿಥ್ಯ (VIP treatment) ಪಡೆಯುತ್ತಿರುವುದು ನಿನ್ನೆ ಕಂಡುಬಂದಿತ್ತು. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ (viral news) ಆಗಿದ್ದವು. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ (Home minister G Parameshwar) ಅವರು ಪ್ರತಿಕ್ರಿಯೆ ನೀಡಿದ್ದು, ಇದಕ್ಕೆ ಹೊಣೆಗಾರರಾದವರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಇಂದು ಮಾತನಾಡಿದ ಅವರು, ಇಂಥ ಘಟನೆಗಳು ಮಂಗಳೂರು, ಬೆಳಗಾವಿ ಸೇರಿದಂತೆ ಬಹಳ ಕಡೆ ಆದ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಅವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪದೇ ಪದೆ ಆಗಿದ್ದು ಕೇಳಿಬಂದಿದೆ. ಇದೇ ರೀತಿಯಾದಾಗ ಕೆಲವರನ್ನು ಸಸ್ಪೆಂಡ್ ಮಾಡಲಾಗಿತ್ತು. ಎಡಿಜಿಪಿ ಬಿ ದಯಾನಂದ ಅವರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬೆಳವಣಿಗೆಗೆ ಯಾರು ಹೊಣೆಗಾರರಾಗಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೂಪರಿಟೆಂಡೆಂಟ್ ಮತ್ತು ಕೆಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಈ ಪ್ರಕರಣದ ಬಗ್ಗೆ ಕೂಡಲೇ ವರದಿ ನೀಡುವಂತೆ ನಾನು ಸೂಚನೆ ನೀಡಿದ್ದೇನೆ. ಜೈಲಿನಲ್ಲಿ ಮೊಬೈಲ್ ಮತ್ತಿತರ ಸೌಲಭ್ಯ ಯಾರಿಗೂ ಕೊಡುವ ಹಾಗಿಲ್ಲ. ಇದನ್ನು ನಾವು ಸೀರಿಯಸ್ಸಾಗಿ ತೆಗೆದುಕೊಂಡಿದ್ದೇವೆ. ಫೆಸಿಲಿಟಿ ಕೊಟ್ಟರೆ ಜೈಲು ಅಂತ ಹೇಗೆ ಅನ್ನಿಸಿಕೊಳ್ಳುತ್ತದೆ? ಉಗ್ರ ಮಾತ್ರವಲ್ಲ ಯಾರಿಗೂ ರಾಜಾತಿಥ್ಯ ನೀಡುವಂತಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Bangalore Central Jail: ಭಯೋತ್ಪಾದಕರಿಗೂ ಸ್ವರ್ಗವಾಯ್ತಾ ಪರಪ್ಪನ ಅಗ್ರಹಾರ ಜೈಲು?; ಐಸಿಸ್‌ ಉಗ್ರನಿಗೆ ರಾಜಾತಿಥ್ಯ!

ನಟ ದರ್ಶನ್ ವಿಚಾರವಾಗಿ ಮಾತನಾಡಿದ ಅವರು, ಹಾಸಿಗೆ ದಿಂಬಿಗಾಗಿ ದರ್ಶನ್ ಕೋರ್ಟಿಗೆ ಹೋಗಬೇಕಾಯಿತು. ಕೈದಿಗಳಿಗೆ ಸುಲಭವಾಗಿ ಎಲ್ಲ ಸಿಗುತ್ತೆ ಅನ್ನೋದನ್ನು ನೋಡಿದ್ದೇವೆ. ಎಲ್ಲವನ್ನು ಗಂಭೀರವಾಗಿ ಪರಿಶೀಲನೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.