ಡಾ. ಎ. ಸೂರ್ಯಪ್ರಕಾಶ್, ಕೆ.ಎನ್. ಚನ್ನೇಗೌಡ, ರಂಗನಾಥ್ ಭಾರದ್ವಾಜ್ ಸೇರಿ ಹಲವರಿಗೆ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರದಾನ
VSK Media Awards: ರಾಜ್ಯದ ಪ್ರತಿಷ್ಠಿತ ಸುದ್ದಿ ಸಂವಹನ ಸಂಸ್ಥೆಯಾದ 'ವಿಶ್ವ ಸಂವಾದ ಕೇಂದ್ರ ಕರ್ನಾಟಕ' ವತಿಯಿಂದ ಪತ್ರಿಕೋದ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಗಣನೀಯ ಸಾಧನೆ ಮಾಡಿದ ಪತ್ರಕರ್ತರಿಗೆ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.
-
ಬೆಂಗಳೂರು: ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವತಿಯಿಂದ ಕೊಡಮಾಡುವ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಸವನಗುಡಿಯ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಪದ್ಮಭೂಷಣ ಶತಾವಧಾನಿ ಡಾ. ಆರ್.ಗಣೇಶ್ ಹಾಗೂ ವಿಶ್ವ ಸಂವಾದ ಕೇಂದ್ರ ಕರ್ನಾಟಕದ ನಿರ್ವಾಹಕ ವಿಶ್ವಸ್ಥ ಡಾ. ಎಂ.ಕೆ.ಶ್ರೀಧರನ್ ಪ್ರಶಸ್ತಿ ಪ್ರದಾನ ಮಾಡಿದರು.

ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿಗೆ ವಿಜಯವಾಣಿಯ ಸಂಪಾದಕ ಕೆ.ಎನ್. ಚನ್ನೇಗೌಡ, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಗೆ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ, ಎಂ.ವಿ.ಕಾಮತ್ ಪತ್ರಿಕೋದ್ಯಮ ಪ್ರಶಸ್ತಿಗೆ ಇಂಡಿಯಾ ಟುಡೇಯ ದಕ್ಷಿಣ ಭಾರತ ಆವೃತ್ತಿಯ ಸಂಪಾದಕ ನಾಗಾರ್ಜುನ್ ದ್ವಾರಕನಾಥ್, ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ಟಿವಿ-9 ಕನ್ನಡದ ಮುಖ್ಯ ನಿರ್ಮಾಪಕ ರಂಗನಾಥ್ ಭಾರದ್ವಾಜ್, ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಹಿರಿಯ ಅಂಕಣಕಾರ ಡಾ. ಅರಕಲಗೂಡು ಸೂರ್ಯಪ್ರಕಾಶ್, ವಿ.ಎಸ್.ಕೆ. ಡಿಜಿಟಲ್ ಮೀಡಿಯಾ ಪ್ರಶಸ್ತಿಗೆ ಆರ್‌ಜೆ ಹಾಗೂ ಯೂಟ್ಯೂಬರ್ ರಶ್ಮೀ ಆರ್ ರಾವ್ (ರ‍್ಯಾಪಿಡ್ ರಶ್ಮೀ) ಭಾಜನರಾದರು.

ಕಾರ್ಯಕ್ರಮದಲ್ಲಿ ಪತ್ರಕರ್ತರು, ಅಂಕಣಕಾರರು, ಸಾಹಿತಿಗಳು, ಮಾಧ್ಯಮ ಆಸಕ್ತರು ಭಾಗವಹಿಸಿದ್ದರು.