ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

80ನೇ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಡಿ ಕೆ ಶಿವಕುಮಾರ್‌ ಮಾಡಿದ ಪ್ರಮುಖ ಘೋಷಣೆ ಏನು?

CM DK Shivakumar: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು.

ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಮಾಡಿದ ಪ್ರಮುಖ ಘೋಷಣೆ ಏನು?

ಸಿಎಂ ಡಿಕೆ ಶಿವಕುಮಾರ್‌ (ಸಂಗ್ರಹ ಚಿತ್ರ) -

Vishakha Bhat Heggar
Vishakha Bhat Heggar Aug 15, 2026 3:36 PM

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ( CM D.K. Shivakumar) ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಪ್ರಮುಖ ಘೋಷಣೆಗಳನ್ನು ಅವರು ಮಾಡಿದ್ದಾರೆ.

  • 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು 3 ಟ್ರಿಲಿಯನ್ ಡಾಲರ್‌ ಕೊಂಡೊಯ್ಯುವ ಗುರಿ.
  • ಎಲ್ಲ ಶಾಲೆಗಳಲ್ಲಿ 6ನೇ ತರಗತಿಯಿಂದ ಎಐ ಶಿಕ್ಷಣ ಪರಿಚಯ.
  • ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಆರಂಭ.
  • ದೇಶದ ಪ್ರಪ್ರಥಮ ಸರ್ಕಾರಿ ಸ್ವಾಮ್ಯದ AI ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಸ್ಥಾಪನೆ.
  • ರಾಜ್ಯದ ವಿವಿಧೆಡೆ ಎಐ ಹಬ್ ಗಳ ಸ್ಥಾಪನೆ.
  • ‘ಮುಖ್ಯಮಂತ್ರಿ ಉದ್ಯೋಗ ಸಂಕಲ್ಪ’ ಯೋಜನೆ ಆರಂಭ.
  • ಸರ್ಕಾರಿ ವಲಯದ 72,000 ಪ್ರಮುಖ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭ. ಮುಂದಿನ ಆರು ತಿಂಗಳಲ್ಲಿ ಎಲ್ಲಾ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ.
  • ಯುವಕರಿಗಾಗಿ ‘ಯುವ ಉದ್ಯೋಗ ಸೇತು’ ಯೋಜನೆ.
  • ‘ಉದ್ಯೋಗ ನಿಧಿ’ ಯೋಜನೆ ಮೂಲಕ ಹಿಂದುಳಿದ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ.
  • ಪ್ರತಿ ಹೊಸ ಉದ್ಯೋಗಕ್ಕೆ ತಿಂಗಳಿಗೆ ₹2,500 ಪ್ರೋತ್ಸಾಹಧನ.
  • ಮುಂದಿನ ಎರಡು ವರ್ಷಗಳಲ್ಲಿ 1 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿ ಗುರಿ.
  • ರೈತರಿಗಾಗಿ ‘ಮುಖ್ಯಮಂತ್ರಿ ರೈತ ಚೈತನ್ಯ’ ಯೋಜನೆ.
  • ಡ್ರೋನ್ ಮತ್ತು ಉಪಗ್ರಹದ ಮೂಲಕ ಬೆಳೆ ಸಮೀಕ್ಷೆ ಹಾಗೂ ನೈಜ ಸಮಯದ ಮಾಹಿತಿ.
  • ಸಣ್ಣ ರೈತರಿಗಾಗಿ ‘ರೈತ ಮಿತ್ರ’ ಕಾರ್ಯಕ್ರಮ.
  • 3 ಎಕರೆ ಅಥವಾ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಾಡಿಗೆ ಶುಲ್ಕದಲ್ಲಿ 50% ಸಹಾಯಧನ.
  • ದೊಡ್ಡಬಳ್ಳಾಪುರದಲ್ಲಿ ಅಡ್ವಾನ್ಸ್‌ ಮ್ಯಾನುಫ್ಯಾಕ್ಚರ್‌ ಕ್ಲಸ್ಟರ್ ಸ್ಥಾಪನೆ.
  • ₹20,000 ಕೋಟಿ ಹೂಡಿಕೆ ಹಾಗೂ ಸುಮಾರು 1 ಲಕ್ಷ ಉದ್ಯೋಗಗಳ ಸೃಷ್ಟಿ ಗುರಿ.
  • ‘ಬಿಯಾಂಡ್‌ ಬೆಂಗಳೂರು’ ಅಡಿಯಲ್ಲಿ ಐದು ಜಾಗತಿಕ ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆ.
  • ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ‘ಸಹಾಯ ಹಸ್ತ’ ಯೋಜನೆ.
  • ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಲ್ಲಿ 7.5% ಮೀಸಲಾತಿ.
  • ರಾಜ್ಯದ ಪ್ರತಿಯೊಂದು ಪಟ್ಟಣ ಮತ್ತು ನಗರದಲ್ಲಿ ರಿಂಗ್‌ ರಸ್ತೆ ಹಾಗೂ ಮೊಬಿಲಿಟಿ ಗ್ರಿಡ್ ಅಭಿವೃದ್ಧಿ.
  • ಬೆಂಗಳೂರು ಬಿಸಿನೆಸ್ ಕಾರಿಡಾರ್ – 117 ಕಿ.ಮೀ. ರಿಂಗ್ ರಸ್ತೆ ಯೋಜನೆಗೆ ಚಾಲನೆ.
  • ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಗಳ ಸ್ಥಾಪನೆ.
  • ಬೆಂಗಳೂರಿನಲ್ಲಿ ರೌಡಿ ನಿಗ್ರಹ ಪಡೆ ರಚನೆ.
  • ಬೆಂಗಳೂರಿನಲ್ಲಿ ಐದು ಬೃಹತ್ ವೃಕ್ಷೋಧ್ಯಾನ (ಟ್ರೀ ಪಾರ್ಕ್‌) ನಿರ್ಮಾಣ.
  • ಬೆಂಗಳೂರಿನ ಏಳು ಪ್ರಮುಖ ಕೆರೆಗಳ ಅಭಿವೃದ್ಧಿ.
  • ವಾಹನ ಮಾಲೀಕರಿಗೆ ಸರಳ ವಿಮಾ ಸೇವೆಗಾಗಿ ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ ಸ್ಥಾಪನೆ.
  • ಜನರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಜಾಸೇವೆ ಇಲಾಖೆ ಸ್ಥಾಪನೆ.
  • ಮೇಕೆದಾಟು ಯೋಜನೆ ಆರಂಭಿಸುವ ಘೋಷಣೆ.
  • 112 ಪ್ರಮುಖ ಜಲಸಂಪನ್ಮೂಲ ಯೋಜನೆಗಳಿಗೆ ₹16,000 ಕೋಟಿ ಅನುಮೋದನೆ.
  • ಭೂ-ಗ್ಯಾರಂಟಿ ಮೂಲಕ ಆಸ್ತಿ ಮಾಲೀಕತ್ವದ ಗೊಂದಲಕ್ಕೆ ಪರಿಹಾರ.
  • ಇ-ಖಾತಾ ವ್ಯವಸ್ಥೆ ಮೂಲಕ ಆಸ್ತಿ ದಾಖಲೆಗಳ ಡಿಜಿಟಲೀಕರಣ.