Karnataka Weather: ಯೆಲ್ಲೋ ಅಲರ್ಟ್; ರಾಜ್ಯಾದ್ಯಂತ ಮುಂದಿನ 4 ದಿನ ಭರ್ಜರಿ ಮಳೆ ಸಾಧ್ಯತೆ!
Karnataka Weather: ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಜೂನ್ 2ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ) -
ಬೆಂಗಳೂರು: ಮುಂದಿನ 4 ದಿನ ಭರ್ಜರಿ ಮಳೆಯಾಗುವ ಕಾರಣ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather) ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 21°C ಇರುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜೂನ್ 2ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಬಿರುಗಾಳಿ ಸಹಿತ ಮಳೆ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 3ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಜೋರಾದ ಗಾಳಿ ಸಹಿತ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 4ರಂದು ಕರಾವಳಿಯಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಜೋರಾದ ಗಾಳಿ ಸಹಿತ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Health Tips: ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ಈ ಅದ್ಭುತ ಪ್ರಯೋಜನಗಳು ಸಿಗಲಿವೆ!
ಜೂನ್ 5ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.