ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fraud case: ಡಿಸಿಸಿ ಬ್ಯಾಂಕ್‌ಗೆ ವಂಚನೆ ಕೇಸ್‌ನಲ್ಲಿ ಬಂಧನವಾಗಿದ್ದ ಡಿ.ಕೆ.ಸಿದ್ರಾಮ್‌ ಬಿಡುಗಡೆ

Fraud case: ಬೀದರ್‌ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ನೀಡಿ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್.ಎಸ್.ಎಸ್.ಕೆ)  ಅಧ್ಯಕ್ಷ ಡಿ.ಕೆ ಸಿದ್ರಾಮ್ ಅವರ ವಿರುದ್ಧ ಜನವಾಡ ಪೋಲಿಸ್ ಠಾಣೆಯಲ್ಲಿ ಡಿಸಿಸಿ ಬ್ಯಾಂಕಿನ್ ಅಧಿಕಾರಿ ಪ್ರಕರಣ ದಾಖಲಿಸಿದ್ದರು.

ಡಿಸಿಸಿ ಬ್ಯಾಂಕ್‌ಗೆ ವಂಚನೆ ಪ್ರಕರಣ; ಡಿ.ಕೆ.ಸಿದ್ರಾಮ್‌ಗೆ ಬಿಡುಗಡೆ

Profile Prabhakara R May 17, 2025 9:30 PM

ಬೀದರ್: ಡಿಸಿಸಿ ಬ್ಯಾಂಕ್‌ಗೆ ವಂಚನೆ, ಸಾರ್ವಜನಿಕರ ಹಣ ವಂಚಿಸಿರುವ ಆರೋಪದಲ್ಲಿ (Fraud case) ಬಂಧಿನವಾಗಿದ್ದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್.ಎಸ್.ಎಸ್.ಕೆ)  ಅಧ್ಯಕ್ಷ ಡಿ.ಕೆ ಸಿದ್ರಾಮ್ ಅವರು, ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ನೀಡಿ ವಂಚಿಸಿರುವ ಆರೋಪದಡಿ ಅವರ ವಿರುದ್ಧ ಜನವಾಡ ಪೋಲಿಸ್ ಠಾಣೆಯಲ್ಲಿ ಡಿಸಿಸಿ ಬ್ಯಾಂಕಿನ್ ಅಧಿಕಾರಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸಿದ್ರಾಮ್ ಅವರನ್ನು ಮೇ 9 ರಂದು ಅವರು ಬಂಧನಕ್ಕೆ ಒಳಗಾಗಿದ್ದರು. ಒಂಬತ್ತು ದಿನಗಳ ನಂತರ ಜಾಮೀನು ಸಿಕ್ಕಿದೆ. ರೈತರ ಹಿತದೃಷ್ಟಿಯಿಂದ ಹೋರಾಟ ಮಾಡಿದ್ದೇನೆ. ರೈತರ ಒಳಿತಿಗಾಗಿ ಕೆಲಸ ಮಾಡಿದ್ದೇನೆ. ರೈತರಿಗಾಗಿ ಜೈಲಿಗೆ ಹೋಗಿದ್ದೇನೆ ಎಂಬ ಭಾವನೆ ಇದೆ ಎಂದು ಡಿ.ಕೆ ಸಿದ್ರಾಮ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Crime News: ಬೆತ್ತಲೆ ವ್ಯಕ್ತಿಯಿಂದ ಮೊಬೈಲ್‌ ಅಂಗಡಿ ದರೋಡೆ, ಬೆಂಗಳೂರಿನಲ್ಲಿ ನಡೆದ ಘಟನೆ

ಜಮಖಂಡಿಯಲ್ಲಿ ಘೋರ ಘಟನೆ; ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲೇ ವರ ಸಾವು!

Jamkhandi

ಬಾಗಲಕೋಟೆ: ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಮೃತಪಟ್ಟಿರುವ ಘಟನೆ (Groom Dies) ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ಅಕ್ಷತೆ ಬಿದ್ದ ಕೆಲವೇ ಹೊತ್ತಿನಲ್ಲಿ ಹೃದಯಾಘಾತವಾಗಿ ವರ ಕುಸಿದುಬಿದ್ದಿದ್ದಾನೆ. ಇದರಿಂದ ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಯುವಕ ಅಂತಿಮ ವಿದಾಯ ಹೇಳಿದ್ದಾನೆ.

ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿ ಪ್ರವೀಣ ಕುರ್ನೆ (25) ಮೃತ ದುರ್ದೈವಿ. ಇಂದು ಪೂಜಾ ಎಂಬ ವಧುವಿನ ಜತೆ ಪ್ರವೀಣ್ ಕುರ್ನೆ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇದರಿಂದ ವಿವಾಹ ಜೀವನದ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಬಂದ ವಧುವಿಗೆ ಬರ ಸಿಡಿಲು ಬಡಿದಂತಾಗಿದೆ. ಮದುವೆಗೆ ಬಂದ ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಈ ಸುದ್ದಿಯನ್ನೂ ಓದಿ | Police Alert: ಎಚ್ಚರಿಕೆ, ಮಕ್ಕಳ ಕೈಗೆ ವಾಹನ ಕೊಟ್ಟರೆ ಪೋಷಕರು ಜೈಲಿಗೆ!