Bike Accident: ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು!
Bidar News: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ-161 (ಎ) ರಲ್ಲಿ ಔರಾದ್ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಾದೇವ ಖಳೂರೆ (50) (ಸಂಗ್ರಹ ಚಿತ್ರ). -
ಬೀದರ್, ಮೇ 5: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ (Road Accident) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ (Bidar News) ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ-161(ಎ) ರಲ್ಲಿ ಔರಾದ್ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರು ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದ ಮಹಾದೇವ ಖಳೂರೆ (50) ಎಂದು ತಿಳಿದು ಬಂದಿದೆ.
ಮೃತ ಮಹಾದೇವ ಅವರು ಔರಾದ್ ಪಟ್ಟಣದ ಖಾಸಗಿ ಸಹಕಾರ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗ್ರಾಮದಿಂದ ಬ್ಯಾಂಕ್‌ಗೆ ತೆರಳುವ ವೇಳೆ ಎದುರಿನಿಂದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಮೇಲೆ ಅಪ್ಪಳಿಸಿ ಬಿದ್ದಿದ್ದಾರೆ. ತಲೆಗೆ ಗಂಭೀರವಾಗಿ ಪೆಟ್ಟಾದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸಂತಪೂರ ಕಡೆಯಿಂದ ಔರಾದ್‌ಗೆ ಬರುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ದುರ್ಘಟನೆಯಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾರೆ. ಜಹೀರಾಬಾದ್ ಮೂಲದ ಇನ್ನೋರ್ವ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ
ಚಿಕ್ಕಮಗಳೂರು, ಮೇ 5: ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಅರಳುಗುಪ್ಪೆ ಗ್ರಾಮದ ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ (8) ಮೃತಪಟ್ಟ ಮಕ್ಕಳು. ಅರಳುಗುಪ್ಪೆಯ 4 ವರ್ಷದ ಅರ್ಮನ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಕೆರೆ ಪಾತ್ರದಲ್ಲಿ ಈ ಮಕ್ಕಳು ಆಟವಾಡುವಾಗ ಈ ದುರ್ಘಟನೆ ನಡೆದಿದೆ. ಆಟವಾಡುತ್ತಿರುವಾಗ ತಮ್ಮೊಂದಿಗಿದ್ದ ಬಾತುಕೋಳಿ ನೀರಿಗಿಳಿದಿದೆ ಎಂದು ಅದನ್ನು ಹಿಡಿಯಲು ಹೋದ ಬಾಲಕಿ ನೀರಿಗೆ ಬಿದ್ದಿದ್ದಾಳೆ. ಈ ಬಾಲಕಿಯನ್ನು ರಕ್ಷಿಸಲು ಹೋದ ಒಬ್ಬರ ಹಿಂದೊಬ್ಬರಂತೆ ಮಕ್ಕಳು ನೀರಿಗಿಳಿದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀನಿವಾಸ ಸಾಗರದಲ್ಲಿ ಮುಳುಗಿ 12 ವರ್ಷದ ಪ್ರವಾಸಿ ಸಬಿಹಾ ಸಾವು
ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ವಿಚಾರಿಸಿದರಲ್ಲದೆ ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೆರೆಗಳ ಬಳಿ ಯಾವ ರೀತಿ ಮುಂಜಾಗ್ರತ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ. ಕ್ಷೇತ್ರದಲ್ಲಿ ಈ ರೀತಿ ಹಲವು ಕೆರೆಗಳಿವೆ. ಮಕ್ಕಳ ಸುರಕ್ಷತೆಗೆ ಇಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದರು.