ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಎಂಬಿಬಿಎಸ್‌ ವಿದ್ಯಾರ್ಥಿ ಕಾಲೇಜಿನಲ್ಲೇ ಆತ್ಮಹತ್ಯೆ

ಅನಿಷ್ಕಾರ್ ಅವರು ಬಿರಿಮ್ಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಶಿಕ್ಷಣದ ಅಂತಿಮ ಘಟ್ಟದಲ್ಲಿದ್ದ ಇವರು, ಇನ್ನೇನು ಕೆಲವೇ ದಿನಗಳಲ್ಲಿ ವೈದ್ಯರಾಗಿ ಸಮಾಜದ ಸೇವೆಗೆ ಸಿದ್ಧರಾಗಬೇಕಿತ್ತು. ಆದರೆ ಅನಿಷ್ಕಾರ್ ಅವರ ಈ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸಹಪಾಠಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

ಎಂಬಿಬಿಎಸ್‌ ವಿದ್ಯಾರ್ಥಿ ಕಾಲೇಜಿನಲ್ಲೇ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Mar 24, 2026 12:41 PM

ಬೀದರ್, ಮಾ. 24: ಬೀದರ್ (Bidar) ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (BRIMS) ಆವರಣದಲ್ಲಿ ಎಂಬಿಬಿಎಸ್ (MBBS) ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ (Student) ಆತ್ಮಹತ್ಯೆಗೆ (Self harming) ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿ ನಿವಾಸಿ ಅನಿಷ್ಕಾರ್ ಚೌಹಾಣ್ ಎಂದು ಗುರುತಿಸಲಾಗಿದೆ.

ಅನಿಷ್ಕಾರ್ ಅವರು ಬಿರಿಮ್ಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಶಿಕ್ಷಣದ ಅಂತಿಮ ಘಟ್ಟದಲ್ಲಿದ್ದ ಇವರು, ಇನ್ನೇನು ಕೆಲವೇ ದಿನಗಳಲ್ಲಿ ವೈದ್ಯರಾಗಿ ಸಮಾಜದ ಸೇವೆಗೆ ಸಿದ್ಧರಾಗಬೇಕಿತ್ತು. ಆದರೆ ಅನಿಷ್ಕಾರ್ ಅವರ ಈ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸಹಪಾಠಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಇದು ಶೈಕ್ಷಣಿಕ ಒತ್ತಡವೋ ಅಥವಾ ವೈಯಕ್ತಿಕ ಕಾರಣವೋ ಎನ್ನುವ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ʻಪಾಕ್‌ ಎದುರಿನ ಸೋಲನ್ನು ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಂಡ್ರುʼ: ರೆಹಮಾನುಲ್ಲಾ ಗುರ್ಬಾಝ್‌ ಶಾಕಿಂಗ್‌ ಹೇಳಿಕೆ!