ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Annamalai: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಅಣ್ಣಾಮಲೈ ಭೇಟಿ

Kolluru: ಈ ಹಿಂದೆ ಉಡುಪಿಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರ ಆಗಮನದಿಂದ ಸ್ಥಳೀಯರು ಖುಷಿಗೊಂಡರು. ದೇವಾಲಯದಲ್ಲಿ ಸರದಿಯ ಸಾಲಿನಲ್ಲಿ ನಿಂತಿದ್ದ ಭಕ್ತರೊಂದಿಗೆ ಅವರು ಕೆಲಕಾಲ ಮಾತುಕತೆ ನಡೆಸಿದರು. ಭಕ್ತರು ಅಣ್ಣಾಮಲೈ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಅಣ್ಣಾಮಲೈ ಭೇಟಿ

-

ಹರೀಶ್‌ ಕೇರ ಹರೀಶ್‌ ಕೇರ Oct 2, 2025 7:19 PM

ಉಡುಪಿ: ನವರಾತ್ರಿ (Navaratri) ಹಬ್ಬದ ಸಂಭ್ರಮದ ನಡುವೆ ಬಿಜೆಪಿ ಮುಖಂಡ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ (Annamalai) ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ (Kolluru Mookambika Temple) ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ಅವರು ಮುಂಜಾನೆಯೇ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿಯು ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ವಿಶೇಷ ಗೌರವ ಸಮರ್ಪಿಸಿತು.

ಈ ಹಿಂದೆ ಉಡುಪಿಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರ ಆಗಮನದಿಂದ ಸ್ಥಳೀಯರು ಖುಷಿಗೊಂಡರು. ದೇವಾಲಯದಲ್ಲಿ ಸರದಿಯ ಸಾಲಿನಲ್ಲಿ ನಿಂತಿದ್ದ ಭಕ್ತರೊಂದಿಗೆ ಅವರು ಕೆಲಕಾಲ ಮಾತುಕತೆ ನಡೆಸಿದರು. ಭಕ್ತರು ಅಣ್ಣಾಮಲೈ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಅಣ್ಣಾಮಲೈ ಅವರ ಸರಳತೆ ಮತ್ತು ಆತ್ಮೀಯತೆ ಕಂಡು ಸ್ಥಳೀಯರು ಸಂತಸಗೊಂಡರು. ದೇವಿಯ ಆಶೀರ್ವಾದ ಪಡೆದು ತೆರಳಿದ ಅಣ್ಣಾಮಲೈ, ದೇವಾಲಯದ ಸಂಪ್ರದಾಯಕ್ಕೆ ಗೌರವ ಸೂಚಿಸಿದರು.

ಕರ್ನಾಟಕ ಸೇರಿ 28 ರಾಜ್ಯಗಳಿಗೂ ಕೇಂದ್ರ ಬಂಪರ್‌ ಉಡುಗೊರೆ

ನವದೆಹಲಿ: ʼದೇಶದ ಜನತೆಗೆ ́Next Gen Gst́ ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ ನೀಡಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ(Pralhad Joshi) ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ ₹1,01,603 ಕೋಟಿ ಹೆಚ್ಚುವರಿ ತೆರಿಗೆ ಹಂಚಿಕೆ ಹಣವನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ. ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು ಮುಂಗಡ ಕಂತು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ ₹3705 ಕೋಟಿ ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ, ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಬುಧವಾರ ರಾತ್ರಿ ಒಟ್ಟಾರೆ 1,01,603 ಕೋಟಿ ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಿದೆ ಎಂದು ಜೋಶಿ ತಿಳಿಸಿದ್ದಾರೆ. ಅಕ್ಟೋಬರ್ 10ರಂದು ಬಿಡುಗಡೆ ಆಗಬೇಕಾದ ಸಾಮಾನ್ಯ ಮಾಸಿಕ ಹಂಚಿಕೆ ಜೊತೆಗೇ ಈ ಹೆಚ್ಚುವರಿ ತೆರಿಗೆ ಪಾಲಿನ ಹಣವೂ ಬಿಡುಗಡೆಯಾಗಲಿದೆ. ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಾರ್ಯಗಳಿಗೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಜೋಶಿ ಸಲಹೆ ಮಾಡಿದ್ದಾರೆ.

ಇದನ್ನೂ ಓದಿ: Kantara Chapter 1: 'ಕಾಂತಾರ: ಚಾಪ್ಟರ್‌ 1' ರಿಲೀಸ್‌ಗೆ ದಿನಗಣನೆ; ಕೊಲ್ಲೂರು ದೇಗುಲಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ