ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BS Yediyurappa: ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ

ತಮ್ಮ ಮೇಲಿನ ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್,​ ಯಡಿಯೂರಪ್ಪ ಅವರ ಅರ್ಜಿ ವಜಾಗೊಳಿಸಿತ್ತು. ಇಂದೇ ಪೀಠದ ಮುಂದೆ ಹಾಜರಾಗುವಂತೆ ಆದೇಶಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕೋರ್ಟ್‌ಗೆ

ಬಿಎಸ್‌ ಯಡಿಯೂರಪ್ಪ -

ಹರೀಶ್‌ ಕೇರ
ಹರೀಶ್‌ ಕೇರ Dec 2, 2025 12:43 PM

ಬೆಂಗಳೂರು, ಡಿ.02: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು (POCSO case) ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ನಿರಾಕರಿಸಿತ್ತು. ಕೋರ್ಟ್ ಆದೇಶದ ಪ್ರಕಾರ ಇಂದೇ ಯಡಿಯೂರಪ್ಪ ಕೋರ್ಟ್​ಗೆ ಹಾಜರಾಗಬೇಕಿತ್ತು. ಆದರೆ ಇದೀಗ ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ (Supreme court) ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್​ ಯಡಿಯೂರಪ್ಪ ಅವರ ಅರ್ಜಿ ವಜಾಗೊಳಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಖುದ್ದು ಕೋರ್ಟ್​ಗೆ ಹಾಜರಾಗಬೇಕಿದ್ದ ಬಿಎಸ್‌ವೈ, ಸುಪ್ರೀಂ ಕೋರ್ಟ್​ನಲ್ಲಿ ಮೊರೆ ಹೋಗಿದ್ದು, ಮೇಲ್ಮನವಿ ಅರ್ಜಿ ವಿಚಾರಣೆ ನಿಗದಿಯಾಗುವ ಸಾಧ್ಯತೆ ಇದೆ.

ಏನಿದು ಪ್ರಕರಣ?

ದೂರಿನ ಪ್ರಕಾರ, 2024ರ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ದೂರು ನೀಡಿದ್ದರು. ಸದಾಶಿವನಗರ ಪೊಲೀಸರು ಮಾರ್ಚ್ 14, 2024 ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಹೆಚ್ಚಿನ ತನಿಖೆಗಾಗಿ ಕೇಸನ್ನು ಸಿಐಡಿಗೆ ವರ್ಗಾಯಿಸಲಾಯಿತು. ಸಂಸ್ಥೆಯು ಎಫ್‌ಐಆರ್ ಮರು ದಾಖಲಿಸಿ, ಮಾಜಿ ಸಿಎಂ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತು. ದೂರುದಾರರು ಮತ್ತು ಅವರ ಮಗಳು 2024ರ ಫೆಬ್ರುವರಿಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರನ್ನು ಹಲವು ಬಾರಿ ಭೇಟಿಯಾಗಿದ್ದರು.

ಬಿ.ಎಸ್. ಯಡಿಯೂರಪ್ಪಗೆ ನೀಡಿದ್ದ ಸಮನ್ಸ್‌ ರದ್ದು ಮಾಡಲು ಹೈಕೋರ್ಟ್‌ ನಕಾರ