ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ; ಮಧ್ಯರಾತ್ರಿಯಿಂದಲೇ ಬೆಳಗಾವಿಯಲ್ಲಿ ಆಚರಣೆ ಶುರು

ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಚರಿಸಲಾಗುತ್ತಿದೆ. ಇಂದು ಸರ್ಕಾರಿ, ಖಾಸಗಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ತಯಾರಿ ನಡೆದಿದ್ದು, ಅಲಂಕಾರ ನಡೆಸಲಾಗಿದೆ.

ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 1, 2026 8:34 AM

ಬೆಂಗಳೂರು: ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವದ (Kannada Rajyotsava) ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಚರಿಸಲಾಗುತ್ತಿದೆ. ಇಂದು ಸರ್ಕಾರಿ, ಖಾಸಗಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಸಿಎಂ ಡಿಕೆ ಶಿವಕುಮಾರ್ ಅವರು ಧ್ವಜಾರೋಹಣ ಮಾಡಲಿದ್ದಾರೆ.

ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವದ ಆಚರಣೆ ಶುರುವಾಗಿದ್ದು, ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ, ಕೆಂಪು-ಹಳದಿ ಬಾವುಟಗಳನ್ನು ಹಾರಿಸಿ ಘೋಷಣೆಗಳನ್ನು ಕೂಗಲಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೇ ನಗರದ ರಾಣಿ ಚೆನ್ನಮ್ಮ ವೃತ್ತದತ್ತ ಕನ್ನಡಾಭಿಮಾನಿಗಳು ಆರಂಭಿಸಿದ್ದರು. ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹನುಮಂತ ಕೊಂಗಾಲಿ ಮಧ್ಯರಾತ್ರಿಯೇ ರಾಜ್ಯೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ತಯಾರಿ ನಡೆದಿದ್ದು, ಅಲಂಕಾರ ನಡೆಸಲಾಗಿದೆ. ವಿಧಾನಸೌಧ ಕಟ್ಟಡಕ್ಕೆ ಹಳದಿ ಮತ್ತು ಕೆಂಪು ಬಣ್ಣದ ಆಕರ್ಷಕ ಎಲ್‌ಇಡಿ (LED) ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಸಂಜೆ 6:30 ರಿಂದ ರಾತ್ರಿ 10:00 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ವಿಶೇಷ ಮೆರಗು ನೀಡಲಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ 'ಕನ್ನಡ ಹಬ್ಬ-71' ರ‍್ಯಾಲಿ ಹಾಗೂ ಕರವೇ ಸೇರಿದಂತೆ ವಿವಿಧ ಸಂಘಟನೆಗಳಿಂದ ಕನ್ನಡ ಜಾಗೃತಿ ಮತ್ತು ಉದ್ಯೋಗ ಅಭಿಯಾನದ ಮೆರವಣಿಗೆಗಳು ನಡೆಯುತ್ತಿವೆ.

ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 71 ಮಂದಿ ಸಾಧಕರಿಗೆ ಮುಖ್ಯಮಂತ್ರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ವರ್ಷದ ಹೆಮ್ಮೆಯ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.