ಗುಂಡ್ಲುಪೇಟೆಯಲ್ಲಿ ಗ್ರೈಂಡರ್‌ನಿಂದ ವಿದ್ಯುತ್ ಹರಿದು 4 ವರ್ಷದ ಮಗು ಸಾವು
Chamarajanagar News: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲೀಗೌಡನಹಳ್ಳಿಯಲ್ಲಿ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿ ನೀರು ಕುಡಿಯಲು ಅಡುಗೆ ಮನೆಗೆ ಹೋಗಿದ್ದಾಳೆ. ಈ ವೇಳೆ ಗ್ರೈಂಡರ್‌ನಿಂದ ವಿದ್ಯುತ್ ಹರಿದು ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತ ಬಾಲಕಿ ಅದ್ವಿತಾ. -
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲೀಗೌಡನಹಳ್ಳಿ ಗ್ರಾಮದಲ್ಲಿ ಘೋರ ಘಟನೆ ನಡೆದಿದೆ. ಮನೆಯಲ್ಲಿ ಗ್ರೈಂಡರ್‌ನಿಂದ ವಿದ್ಯುತ್ ಹರಿದು 4 ವರ್ಷದ ಹೆಣ್ಣು ಮಗು ಮೃತಪಟ್ಟಿದ್ದಾಳೆ.
ಪುಟ್ಟಮ್ಮ ಮತ್ತು ಆನಂದ್ ದಂಪತಿಯ ಪುತ್ರಿ ಅದ್ವಿತಾ (4) ಮೃತ ಬಾಲಕಿ ಮೃತಪಟ್ಟಿದ್ದಾಳೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಈ ವೇಳೆ ವಿದ್ಯುತ್ ಪ್ರವಹಿಸಿ ಬಾಲಕಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಈಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪುಟ್ಟ ಮಗುವಿನ ಅಕಾಲಿಕ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್ ಇನ್ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ
ಎದೆ ಉರಿ ಎಂದು ಹೇಳಿದ್ದ 4 ವರ್ಷದ ಬಾಲಕ ಹಠಾತ್ ಸಾವು
ಚಿತ್ರದುರ್ಗ: ಎದೆ ಉರಿ ಕಾಣಿಸಿಕೊಂಡಿದ್ದ 4 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಅವರ ಪುತ್ರ ವೈಷ್ಣವ್ (4) ಎಂದು ಗುರುತಿಸಲಾಗಿದೆ.
ಆರಂಭದಲ್ಲಿ ವೈಷ್ಣವ್ ತನ್ನ ಪೋಷಕರಿಗೆ ಎದೆ ಭಾಗದಲ್ಲಿ ಉರಿಯಾಗುತ್ತಿದೆ ಎಂದು ತಿಳಿಸಿದ್ದಾನೆ. ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಭಾವಿಸಿದ ಪೋಷಕರು ಮನೆಮದ್ದು ನೀಡಿದ್ದರು. ಆದರೆ, ಸ್ವಲ್ಪ ಸಮಯದಲ್ಲೇ ಬಾಲಕನ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಆತಂಕಗೊಂಡ ಪೋಷಕರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಮಗು ಹಠಾತ್ ಮೃತಪಟ್ಟಿರುವುದರಿಂದ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.