ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cabinet meeting: ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಬೇಕು; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

Cabinet meeting: ಉಗ್ರರ ದಾಳಿ ಕುರಿತು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಉಗ್ರರ ದಾಳಿ ಕುರಿತು ಕ್ಯಾಬಿನೆಟ್‌ ಸಭೆಯಲ್ಲಿ ಖಂಡನಾ ನಿರ್ಣಯ

Profile Prabhakara R Apr 24, 2025 4:36 PM

ಚಾಮರಾಜನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿಸಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಉಗ್ರರ ದಾಳಿಗಳು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು. ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ನಮ್ಮ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Pahalgam Terror Attack: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕ್‌ಗೆ ಹುಟ್ಟಿದ ನಡುಕ; ಕ್ಷಿಪಣಿಗಳ ಪರೀಕ್ಷೆ, ಹೈ ಅಲರ್ಟ್‌ ಘೋಷಣೆ

Cabinet meeting (2)

ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕಲಬುರಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು. ಸಭೆಯಲ್ಲಿ ಕಾಶ್ಮೀರ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡು ಪ್ರಮುಖ ನಿರ್ಣಯಗಳು

  • ಪಿಡಬ್ಲ್ಯುಡಿ, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಬುಡಕಟ್ಟು ಹಳ್ಳಿಗಳ ರಸ್ತೆ ನಿರ್ಮಾಣಕ್ಕೆ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ.
  • ನೀರಾವರಿ, ಎಸ್‌ಸಿ- ಎಸ್‌ಟಿ ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 1787 ಕೋಟಿ ಒದಗಿಸಲು ತೀರ್ಮಾನ.
  • ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ, ರೈಲ್ವೆ ಬ್ಯಾರಿಕೇಡ್ ಪೂರ್ಣಗೊಳಿಸಲು ಒಪ್ಪಿಗೆ.
  • ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ (250 ಬೆಡ್‌ಗಳ ಜಿಲ್ಲಾಸ್ಪತ್ರೆ).
  • ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.
  • ಹನೂರಿನಲ್ಲಿ ಹೊಸ ತಾಲೂಕಿಗೆ ತಾಲೂಕು ಆಸ್ಪತ್ರೆ, ತಾಲೂಕು ಭವನ ನಿರ್ಮಾಣ.
  • ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.
  • ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲಾಗಿದೆ.‌
  • 40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.
  • ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.
  • ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.
  • ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.
  • ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ
  • ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.
  • 3647.62 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳ ಮಾಡಲು ತೀರ್ಮಾನ

ಈ ಸುದ್ದಿಯನ್ನೂ ಓದಿ | Pahalgam terror attack: ಉಗ್ರರ ದಾಳಿ; ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ತಲಾ 1 ಲಕ್ಷ ಪರಿಹಾರ