ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹನೂರು ಎನ್‌ಕೌಂಟರ್‌ ಕೇಸ್‌; ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಸಾಕ್ಷ್ಯಗಳ ಮೇಲೆಯೇ ಅನುಮಾನ!

Hanur encounter case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಕೇಸ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೃತ ಪೀಟರ್, ಆಂಥೋನಿ ಹಾಗೂ ಕುಮಾರ್ ಅವರ ಅಂತ್ಯಕ್ರಿಯೆ ನೇರವೇರಿದ ಬಳಿಕ ಅರಣ್ಯ ಇಲಾಖೆ ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ತನಿಖಾಧಿಕಾರಿಗಳಿ ಒಪ್ಪಿಸಿತ್ತು.

ಹನೂರು ಎನ್‌ಕೌಂಟರ್‌ ಕೇಸ್‌; ಅನುಮಾನ ಹುಟ್ಟಿದ ಅರಣ್ಯ ಇಲಾಖೆ ನಡೆ

ಹನೂರು ಎನ್‌ಕೌಂಟರ್‌ ಪ್ರಕರಣದಲ್ಲಿ ಅರಣ್ಯ ಇಲಾಖೆ ಜಪ್ತಿ ಮಾಡಿದ ವಸ್ತುಗಳು -

Vishakha Bhat Heggar
Vishakha Bhat Heggar Aug 18, 2026 11:00 AM

ಚಾಮರಾಜನಗರ: ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ (Hanur Encounter Case) ನಡೆಯುತ್ತಿದ್ದು, ಕೇಸ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೃತ ಪೀಟರ್, ಆಂಥೋನಿ ಹಾಗೂ ಕುಮಾರ್ ಅವರ ಅಂತ್ಯಕ್ರಿಯೆ ನೇರವೇರಿದ ಬಳಿಕ ಅರಣ್ಯ ಇಲಾಖೆ ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ತನಿಖಾಧಿಕಾರಿಗಳಿ ಒಪ್ಪಿಸಿತ್ತು. ಆದರೆ ಇದೀಗ ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಸಾಕ್ಷ್ಯಗಳ ಮೇಲೆ ಅನುಮಾನ ಹುಟ್ಟಿಕೊಂಡಿದೆ.

ಘಟನಾ ಸ್ಥಳದಲ್ಲಿ ಬೇಟೆಗಾರರಿಂದ ಅಕ್ರಮವಾಗಿ ಬಳಸಲಾಗುತ್ತಿದ್ದ ಬಂದೂಕು ಹಾಗೂ ಬರೋಬ್ಬರಿ 34.25 ಕೆಜಿ ಜಿಂಕೆ ಮಾಂಸ ತುಂಬಿದ್ದ ಚೀಲ ಹಾಗೂ ಜಿಂಕೆಗೆ ಮೂರು ಕಡೆಗಳಲ್ಲಿ ಬಿದ್ದಿದ್ದ ಗುಂಡೇಟಿನ ಪುರಾವೆಯನ್ನು ಅರಣ್ಯ ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿತ್ತು. ಅಲ್ಲದೆ 4 ಜೊತೆ ಪ್ಯಾರಾಗನ್ ಚಪ್ಪಲಿ, 2 ಲೀಟರ್ ಮೆರಿಂಡಾ ಬಾಟಲಿನಲ್ಲಿ ಕಾಲು ಲೀಟರ್ ನೀರು ಸೇರಿದಂತೆ ಇನ್ನೂ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು.

ಅರಣ್ಯಾಧಿಕಾರಿಗಳು ಬಿಡುಗಡೆ ಮಾಡಿದ ಫೋಟೋಗಳೇ ಇದೀಗ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ನೀಡಿವೆ. ಹೊಸ ಚಪ್ಪಲಿಯ ಮೇಲಿನ ಸ್ಟಿಕ್ಕರ್ ಕೂಡ ತೆಗೆಯದಿರುವುದು ಸಾರ್ವಜನಿಕರಲ್ಲಿ ಮತ್ತು ತನಿಖಾಧಿಕಾರಿಗಳಲ್ಲಿ ತೀವ್ರ ಅನುಮಾನ ಮೂಡಿಸಿದೆ. ಅಧಿಕಾರಿಗಳು ನಕಲಿ ಸಾಕ್ಷಿ ಸೃಷ್ಟಿಸಲು ಹೊಸ ಚಪ್ಪಲಿ ತಂದಿಟ್ಟಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಸದ್ಯ ತನಿಖೆ ನಡೆಯುತ್ತಿದ್ದು, ಕೊಳ್ಳೇಗಾಲ ಡಿವೈಎಸ್​ಪಿ ಮೋಹನ್ ಅವರ ನೇತೃತ್ವದಲ್ಲಿ ಎಫ್ಎಸ್ಎಲ್ ಹಾಗೂ ಬ್ಯಾಲೆಸ್ಟಿಕ್ ತಜ್ಞರನ್ನೊಳಗೊಂಡ 15 ಮಂದಿಯ ವಿಶೇಷ ತಂಡ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್ ಅರಣ್ಯಕ್ಕೆ ಭೇಟಿ ನೀಡಿದೆ. ಘಟನಾ ಸ್ಥಳದಲ್ಲಿ ಬಿದ್ದಿದ್ದ ಗುಂಡಿನ ಚೂರುಗಳು, ಪೆಲೆಟ್ಸ್ ಮತ್ತು ರಕ್ತದ ಕಲೆಯ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

ಹನೂರಿನಲ್ಲಿ ಮೂವರ ಎನ್‌ಕೌಂಟರ್‌: ಮೃತರ ಕುಟುಂಬಸ್ಥರ ಮನವೊಲಿಸಲು ಶಾಸಕ ಮಂಜುನಾಥ್‌ ಕೊನೆಗೂ ಯಶಸ್ವಿ; ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ

ಸದನದಲ್ಲಿ ಗದ್ದಲ

ಹನೂರು ಎನ್‌ಕೌಂಟರ್‌ ಕೇಸ್‌ ಸದನದಲ್ಲಿಯೂ ಭಾರೀ ಸದ್ದು ಮಾಡುತ್ತಿದೆ. ವಿಪಕ್ಷ ನಾಯಕ ಆರ್ ಅಶೋಕ್, ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ, ಪ್ರಕರಣದ ನ್ಯಾಯಾಂಗ ತನಿಖೆಗೆ ವಿಪಕ್ಷದ ನಾಯಕರು ಆಗ್ರಹಿಸಿದರು. ಅಲ್ಲದೆ ಅರಣ್ಯ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.