ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Car Accident: ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ; ಪಿಎಸ್‌ಐ, ಚಾಲಕನಿಗೆ ಗಂಭೀರ ಗಾಯ

Car Accident: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಚಾಲಕ ಮತ್ತು ಪಿಎಸ್‌ಐ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ

Profile Prabhakara R May 14, 2025 9:37 PM

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ಕೆ. ವೆಂಕಟೇಶ್ ಅವರ ಎಸ್ಕಾರ್ಟ್‌ ವಾಹನ ಪಲ್ಟಿಯಾಗಿ ಪಿಎಸ್‌ಐ ಮತ್ತು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಬೆಟ್ಟದ ತಿರುವಿನಲ್ಲಿ ಅಪಘಾತ ನಡೆದಿದ್ದು, ಗಾಯಾಳುಗಳಾದ ಯಳಂದೂರು ಠಾಣೆಯ ಪಿಎಸ್‌ಐ ಆಕಾಶ್ ಮತ್ತು ಚಾಲಕನನ್ನು ಮೈಸೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಬಿಳಿಗಿರಿರಂಗನ ಬೆಟ್ಟಕ್ಕೆ ಉಸ್ತುವಾರಿ ಸಚಿವ ವೆಂಕಟೇಶ್ ಅವರು ಭೇಟಿ ನೀಡಿದ್ದರು. ಸಚಿವರ ಎಸ್ಕಾರ್ಟ್ ಆಗಿ ಯಳಂದೂರು ಠಾಣೆಯ ಪಿಎಸ್‌ಐ ಆಕಾಶ್ ಅವರು ಹೋಗಿದ್ದರು. ಮಳೆ ಹಿನ್ನೆಲೆಯಲ್ಲಿ ತಿರುವಿನಲ್ಲಿ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ವಾಹನದ ಚಾಲಕ ಮತ್ತು ಪಿಎಸ್‌ಐ ಆಕಾಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Road Accident: ಡಿವೈಡರ್‌ಗೆ ಬಸ್‌ ಡಿಕ್ಕಿ, ದೇವನಹಳ್ಳಿ ಏರ್‌ಪೋರ್ಟ್‌ ಸಿಬ್ಬಂದಿ ಸಾವು

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ (Murder Case) ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿ ಎನ್ನಲಾದ ಸಂಪತ್ ಕುಮಾರ್‌ನ ಶವ ಹಾಸನದಲ್ಲಿ ಪತ್ತೆಯಾಗಿದೆ.

ಏಪ್ರಿಲ್ 9ರಂದು ಕೊಡಗಿನ ಕುಶಾಲನಗರದಿಂದ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದ, ಏ.10ರಂದು ಕಾರು ಹಾಸನ ಜಿಲ್ಲೆಯ ಸಕಲೇಶಪುರದ ಕಲಹಳ್ಳಿಬಳಿ ಪತ್ತೆಯಾಗಿತ್ತು ಕಾರಿನಲ್ಲಿ ರಕ್ತದ ಕಲೆಗಳು ಇದ್ದವು. ಆದರೆ ಸಂಪತ್ ಸುಳಿವು ಇರಲಿಲ್ಲ ಕುಶಾಲನಗರ ಠಾಣೆಯಲ್ಲಿ ಸಂಪತ್ ಕುಮಾರ್ ನಾಪತ್ತೆ ಕೇಸ್ ದಾಖಲಾಗಿತ್ತು.

ಈ ಸುದ್ದಿಯನ್ನೂ ಓದಿ | Murder Case: ತಂದೆಯನ್ನು ಕೊಂದು ಶಾರ್ಟ್ ಸರ್ಕ್ಯೂಟ್ ಎಂದು ಬಿಂಬಿಸಿದ ಮಗ; ಸುಳಿವು ನೀಡಿದ ಸಿಸಿಟಿವಿ

ಇತ್ತ ಕಾರು ಪತ್ತೆಯಾದ ಬಗ್ಗೆ ಸ್ಥಳೀಯರು ಯಸಳೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದರು ಆದರೆ ಈಗ ಸಂಮತ್ ಕುಮಾರ್ ಮೃತದೇಹ ಕಲಹಳ್ಳಿ ಬಳಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಶವವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.