ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chamarajanagar News: ಪ್ರೀತಿ ಹೆಸರಿನಲ್ಲಿ ಕಿರುಕುಳ; ಚಾಮರಾಜನಗರದಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ಕಾಟಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಯಳಂದೂರು ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಪ್ರೀತಿ ಹೆಸರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

-

Prabhakara R
Prabhakara R Sep 4, 2026 2:41 PM

ಚಾಮರಾಜನಗರ: ಪ್ರೀತಿ ಹೆಸರಿನಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ವರ್ಷಾ (22) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ.

ವರ್ಷಾ ಮೈಸೂರಿನಲ್ಲಿ ಬಿ.ಇ ವ್ಯಾಸಂಗ ಮಾಡುತ್ತಿದ್ದಳು. ಕೆಲ ದಿನಗಳಿಂದ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ಬಳಿಕ ವರ್ಷಾಳ ತಾಯಿ ನಾಗರತ್ನಮ್ಮ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸದ್ಯ ಕೇಸ್‌ ದಾಖಲಿಸಿಕೊಂಡಿರುವ ಯಳಂದೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಡಿಮೆ ಅಂಕ ಪಡೆದಿದ್ದಕ್ಕೆ ಮಕ್ಕಳಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕಿ

ಶಿವಮೊಗ್ಗ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆ ಎಂದು ಪ್ರಾಥಮಿಕ ಶಾಲೆಯ ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಮನಬಂದಂತೆ ಹೊಡೆದಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ. ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ರಕ್ಷಿತಾ ಎಂಬ ಅತಿಥಿ ಶಿಕ್ಷಕಿ ಮಕ್ಕಳ ಮೇಲೆ ಕ್ರೌರ್ಯ ಮೆರೆದಿದ್ದಾರೆ.

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎರಡು, ಮೂರು ಮತ್ತು ನಾಲ್ಕನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷಕಿ ಕೋಲಿನಿಂದ ಅಮಾನವೀಯವಾಗಿ ಹೊಡೆದಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ಶಿಕ್ಷಕಿ, ಮಕ್ಕಳ ಬೆನ್ನಿನ ಮೇಲೆ ಬಾಸುಂಡೆ ಎದ್ದು ರಕ್ತ ಬರುವ ಮಟ್ಟಿಗೆ ಥಳಿಸಿದ್ದಾರೆ.

ಮೊಟ್ಟೆಯಲ್ಲಿ ಹುಳು ಪತ್ತೆ: ಬ್ಲಿಂಕಿಟ್ ವಿರುದ್ಧ ದೂರು; ಮಂಗಳೂರಿನ ಆಹಾರ ಮಳಿಗೆ ಮೇಲೆ ಅಧಿಕಾರಿಗಳ ದಾಳಿ

ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಅತಿಥಿ ಶಿಕ್ಷಕಿ ರಕ್ಷಿತಾ ವಿರುದ್ಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.