ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapuara news: ಮಂತ್ರಾಲಯ ಬಳಿ ಭೀಕರ ಅಪಘಾತ, ಚಿಕ್ಕಮಗಳೂರಿನ 8 ಮಂದಿ ಭಕ್ತರು ದುರ್ಮರಣ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ.

ಮಂತ್ರಾಲಯ ಬಳಿ ಭೀಕರ ಅಪಘಾತ, ಚಿಕ್ಕಮಗಳೂರಿನ 8 ಮಂದಿ ಭಕ್ತರ ಸಾವು

ಮಂತ್ರಾಲಯ ಬಳಿ ಅಪಘಾತ -

ಹರೀಶ್‌ ಕೇರ
ಹರೀಶ್‌ ಕೇರ Apr 16, 2026 7:32 AM

ರಾಯಚೂರು, ಏ.16: ಶ್ರೀ ಕ್ಷೇತ್ರ ಮಂತ್ರಾಲಯದ (Mantralaya) ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ (devotees) ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಮಗಳೂರು (chikkamagaluru news) ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.