ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಧನ್ಯವಾದ 5.45 ಲಕ್ಷ ನೌಕರರಿಗೆ ಅನುಕೂಲ: ಎಂ ಶಂಕರಪ್ಪ

ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸೆಪ್ಟೆಂಬರ್ ೩೦ ರಂದು ಬೆಳಿಗ್ಗೆ ೧೦:೩೦ ರಿಂದ ಸಂಜೆ ೬ ಗಂಟೆಯವರೆಗೆ ಚಿಂತಾಮಣಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಧನ್ಯವಾದ ೫.೨೫ ಲಕ್ಷ ನೌಕರರಿಗೆ ಅನುಕೂಲ

-

Ashok Nayak Ashok Nayak Sep 29, 2025 8:59 PM

ಚಿಕ್ಕಬಳ್ಳಾಪುರ : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಆಗಸ್ಟ್ ೧ ರಿಂದ ಜಾರಿಗೆ ಆದೇಶಿಸಿರುವ ರಾಜ್ಯದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ತಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ರವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ. ಶಂಕರಪ್ಪ ರವರು ಧನ್ಯವಾದಗಳನ್ನು ಸಲ್ಲಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರದ ೫.೨೫ ಲಕ್ಷ ನೌಕರರು ಮತ್ತು ಅವರ ೨೫ ಲಕ್ಷ ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯ ಲಾಭ ದೊರೆಯಲಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ರಾಜ್ಯದ ಲಕ್ಷಾಂತರ ನೌಕರರ ಮತ್ತು ಅವರ ಕುಟುಂಬಗಳ ಸದಸ್ಯರ ಬೇಡಿಕೆಯಿತ್ತು ಎಂದು ತಿಳಿಸಿದರು.

ಈ ಯೋಜನೆಯನ್ನು ಜಾರಿಗೆ ಬರುವಂತೆ ಮಾಡಲು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ನಿರಂತರ ಪರಿಶ್ರಮಕ್ಕೆ ಇದೀಗ ಫಲ ಸಿಕ್ಕಿದ್ದು, ರಾಜ್ಯದ ನೌಕರರ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕೆ ಹಾದಿ ಸುಗಮವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: ಭಾರತದಲ್ಲಿ ೬ ಸಾವಿರ ಸಾಯಿ ಸ್ವಾಸ್ಥ್ಯ ಆರೋಗ್ಯ ಕೇಂದ್ರಗಳ ಸ್ಥಾಪನೆ ಗುರಿ : ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಣೆ

ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಂಪುಟದ ಎಲ್ಲಾ ಸಚಿವರು, ನುಡಿದಂತೆ ನಡೆಯುವ ಮೂಲಕ ಲಕ್ಷಾಂತರ ಸರ್ಕಾರಿ ನೌಕರರ ಹಿತ ರಕ್ಷಣೆ ಮಾಡುವ ಪ್ರಾಮಾ ಣಿಕ ಪ್ರಯತ್ನ  ನಡೆಸಿದ್ದು,  ಸರ್ಕಾರಿ ನೌಕರರ ಪರವಾಗಿ ರಾಜ್ಯ ಉಪಾಧ್ಯಕ್ಷ ಎಂ ಶಂಕರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಧ್ಯಮ ಆಹ್ವಾನ ಮತ್ತು ವಾಹನ ವ್ಯವಸ್ಥೆ

ಉನ್ನತ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸೆಪ್ಟೆಂಬರ್ ೩೦ ರಂದು ಬೆಳಿಗ್ಗೆ ೧೦:೩೦ ರಿಂದ ಸಂಜೆ ೬ ಗಂಟೆಯವರೆಗೆ ಚಿಂತಾಮಣಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸದರಿ ಕಾರ್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿ ಗಳನ್ನು ಕರೆದೊಯ್ಯಲು ವಾಹನ ವ್ಯವಸ್ಥೆಯನ್ನು ಅಂದು ಬೆಳಿಗ್ಗೆ ೯:೩೦ ಗಂಟೆಗೆ ನಗರದ ನ್ಯಾಯಾಲಯದ ಆವರಣದಿಂದ ಕಲ್ಪಿಸಿದ್ದು, ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.
೨೯ಸಿಬಿಪಿಎಂ೪: ಎಂ.ಶAಕರಪ್ಪ.