ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

753 POCSO case: ಜಿಲ್ಲೆಯಲ್ಲಿ 753 ಪೋಕ್ಸೊ ಪ್ರಕರಣ ದಾಖಲು; ಅಧಿಕಾರಿಗಳ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದ ನಿವೃತ್ತ ನ್ಯಾಯಮೂರ್ತಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 753 ಪೋಕ್ಸೊ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಅವರ ಹಕ್ಕುಗಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ಮಕ್ಕಳಿಗೆ ಶಿಕ್ಷಣ, ಸುರಕ್ಷತೆ ಮತ್ತು ಉತ್ತಮ ವಾತಾವರಣ ಕಲ್ಪಿಸಬೇಕು. ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಿಸುವುದರ ಜತೆಗೆ ಅಪರಾಧಿಗಳಿಗೆ ಕಾನೂನು ಪ್ರಕಾರ ಶಿಕ್ಷೆಯಾ ಗುವಂತೆ ನೋಡಿಕೊಳ್ಳಬೇಕು

ಮಕ್ಕಳ ರಕ್ಷಣೆ, ಸಾಮಾಜಿಕ ಸಮಾನತೆಗೆ ಕಾನೂನು ಅರಿವು ಅತ್ಯಗತ್ಯ

-

Profile
Ashok Nayak Nov 13, 2026 10:58 PM

ಚಿಕ್ಕಬಳ್ಳಾಪುರ: ಮಕ್ಕಳ ರಕ್ಷಣೆ, ಮಹಿಳೆಯರ ಘನತೆಯ ಬದುಕು, ಸಾಮಾಜಿಕ ಸಮಾನತೆ ಹಾಗೂ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಸಂವಿಧಾನದ ಆಶಯವಾಗಿದೆ. ಆದರೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ ಮತ್ತು ಶೋಷಣೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಪೋಕ್ಸೊ ಕಾಯ್ದೆ ಕುರಿತು ಪ್ರತಿಯೊಬ್ಬರಲ್ಲೂ ಕಾನೂನು ಅರಿವು ಮೂಡಿಸುವುದು ಇಂದಿನ ತುರ್ತು ಅಗತ್ಯ ವಾಗಿದೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಗೋಪಾಲಗೌಡ ಹೇಳಿದರು.

ನಗರದ ಜಿಲ್ಲಾ ಕನ್ನಡ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ನಡೆದ ಪೋಕ್ಸೊ ಕಾಯ್ದೆ(POCSO Act) ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: POCSO: ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ; ಪೋಕ್ಸೋ ಅಡಿ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 753 ಪೋಕ್ಸೊ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಅವರ ಹಕ್ಕುಗಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ಮಕ್ಕಳಿಗೆ ಶಿಕ್ಷಣ, ಸುರಕ್ಷತೆ ಮತ್ತು ಉತ್ತಮ ವಾತಾವರಣ ಕಲ್ಪಿಸಬೇಕು. ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಿಸುವುದರ ಜತೆಗೆ ಅಪರಾಧಿಗಳಿಗೆ ಕಾನೂನು ಪ್ರಕಾರ ಶಿಕ್ಷೆಯಾ ಗುವಂತೆ ನೋಡಿಕೊಳ್ಳಬೇಕು ಎಂದರು.

ಮಹಿಳೆಯರು, ಮಕ್ಕಳು, ದಲಿತರು ಹಾಗೂ ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸು ವುದು ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಕರ್ತವ್ಯ. ಅಂಬೇಡ್ಕರ್ ನೇತೃತ್ವದಲ್ಲಿ ರಚನೆ ಯಾದ ಸಂವಿಧಾನ ಸಮಾನತೆಯ ಆಶಯ ಹೊಂದಿದ್ದರೂ ಅದು ಸಂಪೂರ್ಣವಾಗಿ ಸಾಕಾರ ಗೊಂಡಿಲ್ಲ. ಜಾತಿ ತಾರತಮ್ಯ ಮತ್ತು ಶೋಷಣೆ ನಿವಾರಣೆಗೆ ಯುವಜನರಲ್ಲಿ ಕಾನೂನು ಅರಿವು ವ್ಯಾಪಕವಾಗಿ ಹರಡಬೇಕು ಎಂದು ಪ್ರತಿಪಾದಿಸಿದರು.

sadakara sanmana

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಗೈರಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಜನರಲ್ಲಿ ಕಾನೂನು ಅರಿವು ಮೂಡಿಸುವ ಇಂತಹ ಮಹತ್ವದ ಕಾರ್ಯಕ್ರಮಗಳಲ್ಲಿ ಜವಾಬ್ದಾರಿಯುತ ಅಧಿಕಾರಿಗಳು ಭಾಗವಹಿಸದಿರುವುದು ಸರಿಯಲ್ಲ. ಈ ವಿಚಾರವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

ಗೋಪಾಲಗೌಡರ ಉಪನ್ಯಾಸ ನಮ್ಮೆಲ್ಲರ ಕಣ್ತೆರೆಸಿದೆ: ಮಂಗಳನಾಥ ಸ್ವಾಮೀಜಿ

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ಮಾತನಾಡಿ, 51 ವರ್ಷಗಳ ಕಾಲ ನ್ಯಾಯಾಂಗ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಗೋಪಾಲಗೌಡರ ಉಪನ್ಯಾಸ ಎಲ್ಲರ ಕಣ್ತೆರೆಸುವಂತಿದೆ. ವಯಸ್ಸು 76 ಆದರೂ ಯುವಕರಂತೆ ಕ್ರಿಯಾಶೀಲರಾಗಿದ್ದು, ಸಮಾಜಮುಖಿ ಚಿಂತನೆಗೆ ಮಾದರಿ ಯಾಗಿದ್ದಾರೆ ಎಂದರು.

ಅಸ್ಪೃಶ್ಯತೆ, ತಾರತಮ್ಯ ನಿರ್ಮೂಲನೆಗೆ ಯುವಜನತೆ ಚಿಂತಿಸಲಿ: ವೀರಭದ್ರ ಚೆನ್ನಮಲ್ಲ ಸ್ವಾಮೀಜಿ

ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಮಾತನಾಡಿ, ಗೋಪಾಲಗೌಡರು ನಿಜವಾದ ಪ್ರಜಾಪ್ರಭುತ್ವವಾದಿ. ಬಡವರು, ದೀನದಲಿತರು ಮತ್ತು ಶೋಷಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಸ್ವಾತಂತ್ರ್ಯಾನಂತರವೂ ಅಸ್ಪೃಶ್ಯತೆ ಮತ್ತು ತಾರತಮ್ಯ ಮುಂದುವರಿದಿರುವುದು ವಿಷಾದನೀಯ. ಯುವಜನತೆ ಸಮಾನತೆ, ಮಾನವೀಯ ಮೌಲ್ಯಗಳನ್ನು ಬೆಂಬಲಿಸಿ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ಶ್ರಮಿಸಬೇಕು ಎಂದರು.

ಜಿಲ್ಲಾ ನ್ಯಾಯಾಧೀಶ ರಾಮಲಿಂಗೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ ಆಶಯ ದಂತೆ ಎಲ್ಲರಿಗೂ ಸಮಾನ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿನ ಪೋಕ್ಸೊ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿದ್ದು, ಪರಿಸ್ಥಿತಿ ಬದಲಿಸಲು ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಲೋಕ ಅದಾಲತ್‌ಗಳ ಮೂಲಕ 26,667 ಪ್ರಕರಣಗಳನ್ನು ಇತ್ಯರ್ಥಪಡಿಸಿರು ವುದು ಹಾಗೂ 35 ದಂಪತಿಗಳನ್ನು ಮತ್ತೆ ಒಂದುಗೂಡಿಸಿರುವುದನ್ನು ಸ್ಮರಿಸಲಾಯಿತು. 

ಹಿರಿಯ ನ್ಯಾಯಾಧೀಶರು, ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ನ್ಯಾಯಾಂಗ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.