Guarantee Schemes: ಶೇ.99ರಷ್ಟು ಜನರಿಗೆ ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆಗಳು ತಪುಲುತ್ತಿವೆ : ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಂ.ಎನ್.ಸೂರಜ್ ಹೆಗಡೆ
ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ. ರಾಜ್ಯದಲ್ಲಿ ಈ ಯೋಜನೆಗಳು ಯಶಸ್ವಿಯಾಗಿ ಮುಂದುವರೆಯು ತ್ತಿದ್ದು, ದೇಶದ ಯಾವುದಾದರೂ ರಾಜ್ಯದಲ್ಲಿ ಶೇ.೯೯ ರಷ್ಟು ಜನರನ್ನು ತಲುಪುತ್ತಿ ರುವ ಯೋಜನೆಗಳು ಯಾವುದಾದರೂ ಇದೆ ಎಂದಾದರೆ ಅದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾಗಿವೆ

ದೇಶದ ಯಾವುದಾದರೂ ರಾಜ್ಯದಲ್ಲಿ ಶೇ.೯೯ ಜನರನ್ನು ತಲುಪುತ್ತಿರುವ ಯೋಜನೆಗಳೆಂದರೆ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಂ.ಎನ್.ಸೂರಜ್ ಹೆಗಡೆ ಬಣ್ಣಿಸಿದರು.

ಚಿಕ್ಕಬಳ್ಳಾಪುರ: ದೇಶದ ಯಾವುದಾದರೂ ರಾಜ್ಯದಲ್ಲಿ ಶೇ.೯೯ ಜನರನ್ನು ತಲುಪುತ್ತಿರುವ ಯೋಜನೆಗಳೆಂದರೆ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಗಳು ಎಂದು ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಂ.ಎನ್.ಸೂರಜ್ ಹೆಗಡೆ ಬಣ್ಣಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಹಾಗೂ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು.
ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿವೆ. ರಾಜ್ಯದಲ್ಲಿ ಈ ಯೋಜನೆಗಳು ಯಶಸ್ವಿಯಾಗಿ ಮುಂದುವರೆಯುತ್ತಿದ್ದು, ದೇಶದ ಯಾವುದಾದರೂ ರಾಜ್ಯದಲ್ಲಿ ಶೇ.೯೯ ರಷ್ಟು ಜನರನ್ನು ತಲುಪುತ್ತಿ ರುವ ಯೋಜನೆಗಳು ಯಾವುದಾದರೂ ಇದೆ ಎಂದಾದರೆ ಅದು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾಗಿವೆ ಎಂದರು.
ಇದನ್ನೂ ಓದಿ: Guarantee Scheme: ಗ್ಯಾರಂಟಿಗಳನ್ನು ಶೇ.100ರಷ್ಟು ಅರ್ಹರಿಗೆ ತಲುಪಿಸಲು ಬದ್ದ: ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್
ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರ ದೇಶದ ಹಲವು ರಾಜ್ಯಗಳು ಈ ಯೋಜನೆಗಳನ್ನು ಮಾದರಿಯಾಗಿ ಸ್ವೀಕರಿಸಿ ಆಯಾ ರಾಜ್ಯಗಳಲ್ಲೂ ಜಾರಿ ಮಾಡಿವೆ. ಹೊರ ರಾಜ್ಯಗಳಲ್ಲೂ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ ಎನ್ನುವುದೇ ವಿಶೇಷ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಈಗಾಗಲೇ ರಾಜ್ಯದ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿ ೫೦೦ ಕೋಟಿ ಟ್ರಿಪ್‌ಗಳನ್ನು ಪೂರೈಸಿ ದಾಖಲೆ ಬರೆದಿದ್ದಾರೆ ಎಂದು ಬಣ್ಣಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಂದಾದ ಪರಿಣಾಮ, ಪ್ರಯೋಜನ, ಲಾಭಗಳನ್ನು ಫಲಾನುಭವಿಗಳ ಹೇಳಿಕೆಗಳ ಮೂಲಕವೇ ಚಿತ್ರೀಕರಿಸಿ ಹೆಚ್ಚು ಪ್ರಚಾರ ಮಾಡಬೇಕು. ಫಲಾನುಭವಿಗಳ ಸಮಾವೇಶ ಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಮತ್ತಷ್ಡು ಹೆಚ್ಚಿನ ಮಾಹಿತಿ ನೀಡಬೇಕು. ಸಮಾವೇಶದ ವೇದಿಕೆಗಳಲ್ಲಿ ಫಲಾನುಭವಿಗಳ ಅನುಭವ, ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ವಿಭಿನ್ನ, ವಿಶಿಷ್ಟ ಮತ್ತು ರಚನಾತ್ಮಕವಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಿರುವವರ ಕುರಿತು ತಿಳಿಸಿ ಇತರರಿಗೆ ಪ್ರೇರಣೆಯಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳನ್ನು ಶೇ. ೧೦೦ ರಷ್ಟು ಪ್ರಮಾಣದಲ್ಲಿ ಅರ್ಹರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕಂಕಣ ಬದ್ದವಾಗಿ ಕಾರ್ಯನಿರ್ವಹಿಸಬೇಕು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾದರಿಯಾಗಿ ಪ್ರಚಾರ ಕಾರ್ಯಕ್ರಮ ಕೈಗೊಂಡಿರುವುದರಿಂದ ಗೃಹಲಕ್ಷ್ಮೀ ಯೋಜನೆ ಯಡಿ ಜಿಲ್ಲೆಯಲ್ಲಿ ೫೬,೯೩,೨೧೯ ಫಲಾನುಭವಿಗಳಿಗೆ ೧,೧೩೮,೬೪,೩೮,೦೦೦ ಕೋಟಿ ಹಣವನ್ನು ಈ ವರೆಗೆ ಜಮೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ೧,೫೬,೦೫,೬೯೭ ಪಲಾನುಭವಿಗಳಿಗೆ ೨,೬೫,೨೯,೬೮,೫೦೦ ರೂಗಳನ್ನು ವೆಚ್ಚ ಮಾಡಿ ಈ ವರೆಗೆ ಪಡಿತರ ವಿತರಿಸುವ ವ್ಯವಸ್ಥೆಯಾಗಿದೆ.
ಯುವ ನಿಧಿ ಯೋಜನೆಯಡಿ ೩,೬೪೧ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳನ್ನು ನೋಂದಣಿ ಮಾಡಿ ೮,೬೭,೧೬,೫೦೦ ಗಳ ಹಣವನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ. ಗೃಹ ಜ್ಯೋತಿ ಯೋಜನೆ ಯಡಿ ೩,೨೨,೩೦೭ ಫಲಾನುಭವಿಗಳಿಗೆ ೨೦೦ ಯುನಿಟ್ ಉಚಿತ ವಿದ್ಯುತ್ ನೀಡಲಾಗಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ೭,೭೭,೨೫,೮೦೦ ಉಚಿತ ಟಿಕೆಟ್ ಗಳನ್ನು ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ವಿತರಿಸಿ ೨,೯೪,೬೫,೭೯,೯೭೧ ರೂಗಳನ್ನು ಸರ್ಕಾರ ಭರಿಸಿದೆ. ಈ ಎಲ್ಲ ಯೋಜನೆಗಳ ಬಡ ಹಾಗೂ ಮಧ್ಯಮ ವರ್ಗಗದವರಿಗೆ ಆರ್ಥಿಕ ಶಕ್ತಿ ತುಂಬಿದೆ,ಈ ಯೋಜನೆಗಳಿಂದ ಉಳಿತಾಯವಾದ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ, ಔಷಧಿ ಖರೀದಿ, ಮನೆ ನಿರ್ಮಾಣ, ಕೊಳವೆ ಬಾವಿ ಕೊರೆಯಲು,ಜಾನುವಾರು ಖರೀದಿಸಲು,ಆರೋಗ್ಯ ಚಿಕಿತ್ಸೆಗೆ ಹೀಗೆ ಇನ್ನೂ ಹಲವು ಉಪಯುಕ್ತ ಕಾರ್ಯಗಳಿಗೆ ವಿನಿಯೋಗಿಸಿಕೊಳ್ಳುವ ಮೂಲಕ ಸರ್ಕಾರದ ಆಶಯಕ್ಕೆ ಸಾರ್ಥಕತೆ ಯನ್ನು ಜನರು ನೀಡಿದ್ದಾರೆ ಎಂದರು.
ಪAಚ ಗ್ಯಾರಂಟಿ ಯೋಜನೆಗಳನ್ನು ಪ್ರಚಾರ ಮಾಡುವ ಮೂಲಕ ಅರಿವು ಮೂಡಿಸಿ ಶೇ. ೧೦೦ರಷ್ಟು ಪ್ರಗತಿ ಸಾಧಿಸಲು ಜೆಲ್ಲೆಯಲ್ಲಿ ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಿಗೆ ತಾಲೂಕಿನಲ್ಲಿ ಕಚೇರಿ ತೆರೆಯಲು ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್.ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ವೈ. ನವೀನ್ ಭಟ್,ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಎಸ್ ಕುಮಟಾ ಹಾಗೂ ಜಿಲ್ಲೆಯ ಗ್ಯಾರೆಂಟಿ ಯೋಜನೆಗಳ ಸಮಿತಿಯ ಉಪಾಧ್ಯಕ್ಷರುಗಳು, ಸದಸ್ಯರು, ತಾಲೂಕು ಅಧ್ಯಕ್ಷರುಗಳು, ಮತ್ತು ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.