Shravana Shanivara: ಮೂರನೇ ಶ್ರಾವಣ ಶನಿವಾರ ತಾಲ್ಲೂಕಿನ ವಿವಿಧ ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ
ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಅಶ್ವತ್ಥನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಗೆ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು. ಸ್ವಾಮಿಗೆ ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದ ನಂತರ ಪುಷ್ಪಾಲಂಕಾರದೊಂದಿಗೆ ವಿಶೇಷವಾಗಿ ಪುಷ್ಪಗಳಿಂದ ಅಲಂಕಾರ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಬಾಗೇಪಲ್ಲಿ: ಶ್ರಾವಣ ಮಾಸದ ಎರಡನೇ ಶನಿವಾರದ ಅಂಗವಾಗಿ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ಅಭಿಷೇಕ, ವಿಶೇಷ ಅಲಂಕಾರ, ಪೂಜೆ ನಡೆದವು.
ತಾಲೂಕಿನ ಪುರಾಣ ಪ್ರಸಿದ್ಧ ಐತಿಹಾಸಿಕ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರ ವಿಶೇಷ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿತ್ತು. ಬೆಳಗಿನಿಂದಲೇ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದರು.
ಇದನ್ನೂ ಓದಿ: Chikkaballapur News: ಬಾಗೇಪಲ್ಲಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ; ನಾಡಿನ ಒಳಿತಿಗೆ ನಾರಿಯರ ಪ್ರಾರ್ಥನೆ
ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಅಶ್ವತ್ಥನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಗೆ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು. ಸ್ವಾಮಿಗೆ ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದ ನಂತರ ಪುಷ್ಪಾಲಂಕಾರದೊಂದಿಗೆ ವಿಶೇಷವಾಗಿ ಪುಷ್ಪಗಳಿಂದ ಅಲಂಕಾರ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.
ಬೆಳಗ್ಗೆಯಿಂದಲೂ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಭಜನೆ, ವಿಷ್ಣು ಸಹಸ್ರ ನಾಮ ಪಾರಾಯಣ ನಡೆಸಿದರು. ಎರಡನೇ ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ದೇವಾಲಯವನ್ನು ವಿವಿಧ ಪುಷ್ಪಗಳಿಂದ ಮತ್ತು ತಳಿರು ತೋರಣಗಳಿಂದ ಸಿಂಗಾರಗೊಳಿಸಲಾಗಿತ್ತು.
ಸ್ಥಳೀಯರು ಸೇರಿದಂತೆ ಆಂದ್ರಪ್ರದೇಶದಿಂದ ಒಳಗೊಂಡಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ಗೋವಿಂದ ನಾಮಸ್ಮರಣೆಯೊಂದಿಗೆ ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು. ಈ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ಹಾಗೂ ಅನ್ನದಾನ ಆಏರ್ಪಡಿಸಲಾಗಿತ್ತು. ಆರಕ್ಷಕ ನಿರೀಕ್ಷಕ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ್ ಮಾಡಲಾಗಿತ್ತು.