ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವ್ಯಸನ ಮುಕ್ತ ದಿನಾಚರಣೆ

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ಸರ್ಕಾರದ ಸೂಚನೆ ಯಂತೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಆ.೧ರಂದು ಪೂಜ್ಯ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿರವರ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ಯನ್ನು ತಾಲ್ಲೂಕು ತಹಸೀಲ್ದಾರ್ ವಿ.ರಶ್ಮಿರವರು ನೆರವೇರಿಸಿದರು.

ವ್ಯಸನ ಮುಕ್ತ ದಿನಾಚರಣೆ

Ashok Nayak Ashok Nayak Aug 8, 2025 12:04 AM

ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಮತ್ತು ಸರ್ಕಾರದ ಸೂಚನೆ ಯಂತೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಆ.೧ರಂದು ಪೂಜ್ಯ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿರವರ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲ್ಲೂಕು ತಹಸೀಲ್ದಾರ್ ವಿ.ರಶ್ಮಿರವರು ನೆರವೇರಿಸಿದರು.

ಈ ವೇಳೆ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿ ಸ್ವಾಮೀಜಿರವರ ಬಗ್ಗೆ ಮತ್ತು ವ್ಯಸನಮುಕ್ತ ದಿನಾಚರಣೆಯ ವಿಷಯದ ಬಗ್ಗೆ ವಿಸ್ತಾರವಾಗಿ ತಿಳಿಸಿಕೊಟ್ಟರು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿ ವರ್ಗದವರು ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವ ಬಗ್ಗೆ ತಮ್ಮ ಅಭಿಪ್ರಾಯ ಗಳನ್ನು ತಿಳಿಸಿದರು.

ಇದನ್ನೂ ಓದಿ: Chikkaballapur News: ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಅಂತಿಮವಾಗಿ ಮಾದಕ ವಸ್ತು ವಿರೋಧಿ ಪ್ರತಿಜ್ಞಾ ವಿಧಿಯನ್ನು ಮಾನ್ಯ ತಹಶೀಲ್ದಾರ್ ರವರು ಬೋಧಿಸಿದರು. ಅದರಂತೆ ಸಭೆಯಲ್ಲಿ ಭಾಗವಹಿಸಿದ್ದ ಉಪನ್ಯಾಸಕರು, ವಿದ್ಯಾರ್ಥಿಗಳು, ಕಛೇರಿಯ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಪ್ರತಿಜ್ಞಾ ವಿಧಿಯನ್ನು ಕೈ ಮುಂದೆ ಚಾಚಿ ಭಕ್ತಿ ಮತ್ತು ಶ್ರದ್ಧೆಯಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರೇಡ್-೨ ತಹಶೀಲ್ದಾರ್ ನರೇಂದ್ರ ಬಾಬು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ನಾಗೇಂದ್ರಯ್ಯ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.