Chikkaballapur News: ಅರ್ಥಪೂರ್ಣವಾಗಿ ವಿಶ್ವಕರ್ಮ ಜಯಂತಿಯ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಕರೆ
ಶ್ರೀ ವಿಶ್ವಕರ್ಮ ಜಯಂತಿ ಯನ್ನು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಅನುಸರಿಸಿ ಕೊಂಡು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಕಾರ್ಯಕ್ರಮದ ವೇದಿಕೆ ಸಿದ್ಧತೆ, ಆಹ್ವಾನ ಪತ್ರಿಕೆಗಳ ಮುದ್ರಣ, ವಿತರಣೆ, ಭಾಷಣ, ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಹಿರಿಯ ಮುಖಂಡರಿಗೆ ಸನ್ಮಾನ ಮಾಡಲು ತೀರ್ಮಾನಿಸ ಲಾಗಿದೆ

ಅರ್ಥಪೂರ್ಣವಾಗಿ ವಿಶ್ವಕರ್ಮ ಜಯಂತಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಕರೆ ನೀಡಿದರು. -

ಚಿಕ್ಕಬಳ್ಳಾಪುರ: ಶ್ರೀ ವಿಶ್ವಕರ್ಮ ಜಯಂತಿಯ ದಿನಾಚರಣೆಯನ್ನು ಸೆಪ್ಟೆಂಬರ್ ೧೭ ರಂದು ಹೆಚ್ಚಿನ ಜನರು ಆಗಮಿಸಿ ಅರ್ಥಪೂರ್ಣವಾಗಿ ಆಚರಿಸಲು ನೇರವಾಗಬೇಕು ಎಂದು ಡಾ.ಎನ್. ಭಾಸ್ಕರ್ ಮನವಿ ಮಾಡಿದರು.
ಶುಕ್ರವಾರ ಜಿಲ್ಲಾಡಳಿತ, ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ " ಶ್ರೀ ವಿಶ್ವಕರ್ಮ ಜಯಂತಿ” ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಸಮುದಾಯದ ಮುಖಂಡರ ಸಲಹೆಗಳನ್ನು ಸ್ವೀಕರಿಸಿ ನಂತರ ಮಾತನಾಡಿದರು.
ಶ್ರೀ ವಿಶ್ವಕರ್ಮ ಜಯಂತಿ ಯನ್ನು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಅನುಸರಿಸಿ ಕೊಂಡು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಕಾರ್ಯಕ್ರಮದ ವೇದಿಕೆ ಸಿದ್ಧತೆ, ಆಹ್ವಾನ ಪತ್ರಿಕೆಗಳ ಮುದ್ರಣ, ವಿತರಣೆ,ಭಾಷಣ, ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಹಿರಿಯ ಮುಖಂಡರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಗಿದೆ.
ಜಯಂತಿ ಕಾರ್ಯಕ್ರಮದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಕಾರ್ಯ ಭಾರ ಹಂಚಿಕೆ ಮಾಡಿದರು. ಜೊತೆಗೆ ಜಯಂತಿ ಆಚರಣೆಯ ಎಲ್ಲಾ ಕಾರ್ಯಗಳನ್ನು ಸಮರ್ಪಕ ವಾಗಿ ನಿರ್ವಹಿಸಿ ಯಶಸ್ವಿಯಾಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸಮುದಾಯದ ಮುಖಂಡರಾದ ಸಿ.ಬಿ.ನವೀನ್ ಕುಮಾರ್, ಎ.ನಂಜುಂಡಾಚಾರಿ, ಜೆ. ಹರೀಶ್ ಕುಮಾರ್, ಜಯ ನರೇಂದ್ರ ಕುಮಾರ್, ಸಿಜಿ ಮುರಳಿಧರ್, ಜೆ.ಪಿ ಸಂತೋಷ್, ಎನ್. ಸುಬ್ರಹ್ಮಣ್ಯಚಾರಿ, ಸುಬ್ಬಲಕ್ಷ್ಮಿ ಬ್ರಹ್ಮಚಾರಿ, ಜಮುನಾ ರಾಮಕೃಷ್ಣ ಚಾರಿ, ಪಾರಿಜಾತ ಪರಮೇಶ್ವರ ಚಾರಿ, ಪುಷ್ಪವತಮ್ಮ ವರದಾಚಾರಿ,ವಿನುತ ಲಕ್ಷ್ಮೀ ನಾರಾಯಣ ಚಾರಿ, ಭಾರತೀ ನವೀನ್ ಕುಮಾರ್, ತೇಜಸ್ವಿನಿ ಅನಿಲ್ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.