ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಅಹವಾಲು ಆಲಿಕೆ, ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಒತ್ತು; ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

ಸಾರಿಗೆ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ನಡೆಯಲಿರುವ ಸಭೆಗಳಲ್ಲಿ ಸಾರ್ವಜನಿಕರು ತಮ್ಮ ಅಹವಾಲು, ಸಮಸ್ಯೆ ಹಾಗೂ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹು ದಾಗಿದೆ. ಇದೇ ವೇಳೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸೆ.12ರಂದು ಜಿಲ್ಲೆಯಾದ್ಯಂತ ‘ಪ್ರಜಾಸೇವೆ ಆಂದೋಲನ’

-

Profile
Ashok Nayak Sep 10, 2026 11:56 PM

ಚಿಕ್ಕಬಳ್ಳಾಪುರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವೇ ಜನರ ಬಳಿಗೆ ತೆರಳಿ ಅಹವಾಲುಗಳನ್ನು ಆಲಿಸಿ ಸಾಧ್ಯ ವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೆ.12ರಂದು ಜಿಲ್ಲೆಯ ವಿವಿಧೆಡೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸ ಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.

ಸಾರಿಗೆ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಸುರೇಶ್ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ನಡೆಯಲಿರುವ ಸಭೆಗಳಲ್ಲಿ ಸಾರ್ವ ಜನಿಕರು ತಮ್ಮ ಅಹವಾಲು, ಸಮಸ್ಯೆ ಹಾಗೂ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹು ದಾಗಿದೆ. ಇದೇ ವೇಳೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: Chikkaballapur News: ಮುನ್ಸಿಪಲ್ ಬಡಾವಣೆಯ ಗಣೇಶೋತ್ಸವಕ್ಕೆ ‘ವರಾಹ ವೈಭವಹಾರ’ದ ವೈಭವ

ಮಂಡಿಕಲ್ಲಿನಲ್ಲಿ ತಾಲ್ಲೂಕು ಮಟ್ಟದ ಸಭೆ

ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ಲು ಹೋಬಳಿಯ ಮಂಡಿಕಲ್ಲು ಗ್ರಾಮದಲ್ಲಿ ಸೆ.12ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಪಿ.ಇ. ಅವರು ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಭೆ ನಡೆಯಲಿದೆ.

ಐದು ಹೋಬಳಿಗಳಲ್ಲಿ ಸಭೆ

ಅದೇ ದಿನ ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಐದು ಹೋಬಳಿಗಳಲ್ಲಿ ಹೋಬಳಿ ಮಟ್ಟದ ಸಭೆಗಳು ನಡೆಯಲಿವೆ.

ಬಾಗೇಪಲ್ಲಿ ತಾಲ್ಲೂಕು: ಚೇಳೂರು ಹೋಬಳಿಯ ಕೆಪಿಎಸ್ ಶಾಲಾ ಆವರಣದಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ(MLA S N Subbareddy) ಅವರ ಅಧ್ಯಕ್ಷತೆಯಲ್ಲಿ ಸಭೆ. ಗೌರಿಬಿದನೂರು ತಾಲ್ಲೂಕು: ಡಿ.ಪಾಳ್ಯ ಗ್ರಾಮದ ಕೆಪಿಎಸ್ ಶಾಲಾ ಆವರಣದಲ್ಲಿ ಶಾಸಕ ಕೆ.ಹೆಚ್.ಪುಟ್ಟಸ್ವಾಮಿ ಗೌಡ( MLA KH Puttaswamy Gowda) ಅವರ ಅಧ್ಯಕ್ಷತೆಯಲ್ಲಿ ಸಭೆ. ಶಿಡ್ಲಘಟ್ಟ ತಾಲ್ಲೂಕು: ಕಸಬಾ ಹೋಬಳಿಯ ಬಶೆಟ್ಟಹಳ್ಳಿ ಗ್ರಾಮದ ಕೆಪಿಎಸ್ ಶಾಲಾ ಆವರಣದಲ್ಲಿ ಶಾಸಕ ಬಿ.ಎನ್. ರವಿಕುಮಾರ್ (MLA B.N. Ravikumar)ರವರ ಅಧ್ಯಕ್ಷತೆಯಲ್ಲಿ ಸಭೆ.

ಚಿಂತಾಮಣಿ ತಾಲ್ಲೂಕು: ಮುರುಗಮಲ್ಲ ಗ್ರಾಮದ ಬೊಗ್ಗರಂ ನಾರಾಯಣ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಸಕ ಡಾ.ಎಂ.ಸಿ.ಸುಧಾಕರ್(MLA Dr. M.C. Sudhakar) ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು, ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಅಗತ್ಯ ದಾಖಲೆಗಳೊಂದಿಗೆ ಆಗಮಿಸಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಪ್ರಭು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.