ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ರಾಗಿ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಮನವಿ ಸ್ವೀಕಾರ, ಕ್ರಮ ವಹಿಸುವ ಭರವಸೆ

ನೀರಾವರಿ ಆದರೆ ಒಂದು ಎಕರೆಗೆ ಸರಾಸರಿ 40 ಕ್ವಿಂಟಾಲ್ ಮೆಕ್ಕೇಜೋಳ ಬೆಳೆದರೆ, ಮಳೆಯಾಶ್ರಿತ ಕುಷ್ಕಿಯಲ್ಲಿ 25 ಕ್ವಿಂಟಾಲ್ ಬೆಳೆಯುತ್ತಾರೆ. ಈ ಬಾರಿ ಉತ್ತಮ ಮಳೆಯಾದ ಕಾರಣ ಜಿಲ್ಲೆಯಲ್ಲಿ ಒಂದು ಲಕ್ಷ 1 ಟನ್ ಜೋಳ ಉತ್ಪಾದನೆ ಆಗಿದೆ.ಈ ಹೊತ್ತಲ್ಲಿ ಸಿದ್ಧರಾಮಯ್ಯ ಸರಕಾರ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯಲ್ಲಿ 10 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ಉತ್ತಮ ಫಸಲು ಬಂದಿದೆ.

ಎ.ಕೆ.ಆರ್.ಎಸ್ ರೈತ ಸಂಘದಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎ.ಕೆ.ಆರ್.ಎಸ್ ರೈತ ಸಂಘದಿಂದ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವAತೆ ಬೃಹತ್ ಪ್ರತಿಭಟನೆ ನಡೆಸಲಾಯಿತು. -

Ashok Nayak
Ashok Nayak Jan 12, 2026 11:52 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ) ಅಡಿಯಲ್ಲಿ ಮೆಕ್ಕೆಜೋಳ ಹಾಗೂ ರಾಗಿ ಖರೀದಿ ಕೇಂದ್ರಗಳನ್ನು ತಕ್ಷಣವೇ ತೆರೆಯಬೇಕು. ಯಾವುದೇ ನಿರ್ಬಂಧ ವಿಲ್ಲದೆ ಸರ್ಕಾರವೇ ಮೆಕ್ಕೆಜೋಳವನ್ನು ಖರೀದಿಸಬೇಕು. ಮೆಕ್ಕೆಜೋಳದ ಎಂ.ಎಸ್.ಪಿ ದರವನ್ನು ಕನಿಷ್ಠ ರೂ.3500ಕ್ಕೆ ಏರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘಟನೆ (ಎ.ಕೆ.ಆರ್.ಎಸ್)ವತಿಯಿಂದ ಸೋಮವಾರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಮಂಜುನಾಥರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಾಗೇಪಲ್ಲಿ ಗುಡಿಬಂಡೆ, ಗೌರಿಬಿದನೂರು ಚಿಕ್ಕಬಳ್ಳಾಪುರ ಚಿಂತಾಮಣಿ ಸೇರಿದಂತೆ ಬಹುತೇಕ ತಾಲೂಕುಗಳ ಸುಮಾರು 45 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯುವ ರೈತರಿದ್ದಾರೆ.

ಇದನ್ನೂ ಓದಿ: Chikkaballapur News: ನಂದಿ ಸರ್ಕಾರಿ ಪ್ರೌಢಶಾಲೆ 1994-95 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ ಸಮರ್ಪಣೆ

ನೀರಾವರಿ ಆದರೆ ಒಂದು ಎಕರೆಗೆ ಸರಾಸರಿ 40 ಕ್ವಿಂಟಾಲ್ ಮೆಕ್ಕೆಜೋಳ ಬೆಳೆದರೆ, ಮಳೆಯಾಶ್ರಿತ ಕುಷ್ಕಿಯಲ್ಲಿ 25 ಕ್ವಿಂಟಾಲ್ ಬೆಳೆಯುತ್ತಾರೆ. ಈ ಬಾರಿ ಉತ್ತಮ ಮಳೆಯಾದ ಕಾರಣ ಜಿಲ್ಲೆಯಲ್ಲಿ ಒಂದು ಲಕ್ಷ 1 ಟನ್ ಜೋಳ ಉತ್ಪಾದನೆ ಆಗಿದೆ. ಈ ಹೊತ್ತಲ್ಲಿ ಸಿದ್ಧರಾಮಯ್ಯ ಸರಕಾರ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯಲ್ಲಿ 10 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ಉತ್ತಮ ಫಸಲು ಬಂದಿದೆ. ಆದರೆ ಜಿಲ್ಲೆ ಯಲ್ಲಿ ಈವರೆಗೆ ಖರೀದಿ ಕೇಂದ್ರಗಳನ್ನೇ ತರೆದಿಲ್ಲ. ನಾವು ಸುಳ್ಳು ಹೇಳುತ್ತಿದ್ದೇವೆ ಎಂದರೆ ನಿಮ್ಮ ಕೃಷಿ ಅಧಿಕಾರಿಗಳು ಯಾರಾದರೂ ಇದ್ದರೆ  ಅವರೇ ಹೇಳಲಿ ಎಂದು ಸವಾಲು ಹಾಕಿದರು.

1 ಲಕ್ಷ ಟನ್ ಮೆಕ್ಕೆಜೋಳ ಬೆಳೆದಿದ್ದರೆ ರಾಜಾನುಕುಂಟೆಯ ಖರೀದಿ ಕೇಂದ್ರದಲ್ಲಿ ಈವರೆಗೆ 120-130 ಕ್ವಿಂಟಾಲ್ ಮಾತ್ರ ಖರೀದಿ ಮಾಡಿದ್ದಾರೆ. ಏನಿದರ ಉದ್ದೇಶ? ನಮ್ಮವರು ರೈತರಲ್ಲವೆ? ಡೈರಿಗಳಲ್ಲಿ ನೋಂದಣಿ ಮಾಡಿಕೊಳ್ಳಲಿ ಎಂದು ಸರಕಾರ ಹೇಳಿದೆ. ಆದರೆ  ರೈತರಿಗೆ ಈ ಬಗ್ಗೆ ಸರಿಯಾದ ಮಾಹಿತಿಯೇ ಇನ್ನು ರಾಜಾನುಕುಂಟೆಯಲ್ಲಿ ನೋಂದಣಿ ಮಾಡಲು ಹೋದರೆ ಸರ್ವರ್ ಸಮಸ್ಯೆ ಇದೆ ಎನ್ನುತ್ತಾರೆ.

cbpm6a

ಕೆ.ಎಂ.,ಎಫ್ ಶಿಬಿರ ಕಚೇರಿಗಳಲ್ಲಿ ನೋಂದಣಿಗೆ ಅವಕಾಶವೇ ಇಲ್ಲವಾಗಿದೆ. ಯಾಕೀ ಮಲತಾಯಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು  ರಾಗಿ ನೋಂದಣಿ ಪ್ರಕ್ರಿಯೆ ಸ್ಥಗಿತ ಗೊಂಡಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಆದ್ದರಿಂದ ಬಾಗೇಪಲ್ಲಿಯಲ್ಲಿ ಖರೀದಿ ಕೇಂದ್ರ ತೆರೆಯಲೇಬೇಕು. ಇದರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮೆಕ್ಕೆಜೋಳ ರಾಗಿ ಖರೀದಿ ಕೇಂದ್ರ ತರೆಯಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರ ವಿದೇಶಗಳಿಂದ ಮೆಕ್ಕೆಜೋಳ ಆಮದು ಮಾಡುವುದನ್ನು ನಿಲ್ಲಿಸಬೇಕು. ಸ್ಥಳೀಯ ರೈತರು ಬೆಳೆದ ಮೆಕ್ಕೆಜೋಳವನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು ಒಂದು ವಾರದ ಒಳಗೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ರವಾನಿಸಲಾಯಿತು.

ಜಿಲ್ಲಾಡಳಿತ ಭವನದ ಎದುರು ಪ್ರತಿಭಟಿಸುವುದಕ್ಕೂ ಮುನ್ನ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸರಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿ ಸಿದ ಸಂಘಟನೆ ಪದಾಧಿಕಾರಿಗಳು ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ಧೋರಣೆಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ರೈತರು ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆ ಜಾಥಾ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿದರು.

*

ಮೆಕ್ಕೆಜೋಳ ಖರೀದಿ ಕೇಂದ್ರಗಳ ಸ್ಥಾಪನೆ ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ)ಸಂಬಂಧಿಸಿ ದಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಸರಕಾರದ ಗಮನಕ್ಕೆ ತರಲಾಗುವುದು. ಪ್ರಸ್ತುತ ಕೆಎಂಎಫ್ ವತಿಯಿಂದ ರಾಜಾನುಕುಂಟೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆಯಾಗಿದೆ. ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂಬುದು ಅಖಿಲ ಕರ್ನಾಟಕ ರೈತ ಸಂಘಟನೆ ಬೇಡಿಕೆಯಾಗಿದೆ.ಈ ಕುರಿತು ಸರಕಾರದ ಗಮನಕ್ಕೆ ತರಲಾಗುವುದು.
-ಜಿ.ಪ್ರಭು ಜಿಲ್ಲಾಧಿಕಾರಿಗಳು. ಚಿಕ್ಕಬಳ್ಳಾಪುರ

ಈ ಪ್ರತಿಭಟನೆಯಲ್ಲಿ ಪುಟ್ಟಣ್ಣಯ್ಯ ಬಣದ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಎಂ.ಎಲ್ ರಾಮಾಂಜಿನಪ್ಪ, ಎ.ಕೆ.ಆರ್.ಎಸ್ ರೈತ ಸಂಘ ಪದಾಧಿಕಾರಿಗಳಾದ ನರಸಿಂಹಪ್ಪ, ಹನುಮಂತ ರೆಡ್ಡಿ,ಲಕ್ಷ್ಮಿ ನಾರಾಯಣ,ಹೇಮ ಚಂದ್ರ,ಶ್ರೀನಿವಾಸ್,ಗೋಪಾಲ್ ರೆಡ್ಡಿ,ರಮೇಶ್ ರೆಡ್ಡಿ ಇತರರು ಉಪಸ್ಥಿತರಿದ್ದರು.