ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ: ಕದಸಂಸ ರಾಜ್ಯ ವಿಭಾಗೀಯ ಸಂಚಾಲಕರಾಗಿ ಜಿ.ಎನ್. ಸುರೇಶ್ ನೇಮಕ

ಪ್ರೊ. ಬಿ. ಕೃಷ್ಣಪ್ಪ ಅವರ ಹೋರಾಟದ ಆದರ್ಶಗಳನ್ನು ಮುಂದುವರಿಸುವ ಉದ್ದೇಶದಿಂದ ರಾಜ್ಯ ಸಮಿತಿ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿ ಯನ್ನು ಜಿ.ಎನ್. ಸುರೇಶ್ ಅವರಿಗೆ ವಹಿಸಿದೆ ಎಂದು ಹೇಳಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಚಿಂತನೆಗಳ ಆಧಾರದಲ್ಲಿ ಬಡವರು ಹಾಗೂ ಅವಕಾಶ ವಂಚಿತ ಸಮುದಾಯ ಗಳ ಸಮಸ್ಯೆಗಳ ಪರಿಹಾರಕ್ಕಾಗಿ ಅವರು ಹೋರಾಟ ನಡೆಸಲಿದ್ದಾರೆ

ಕದಸಂಸ ರಾಜ್ಯ ವಿಭಾಗೀಯ ಸಂಚಾಲಕರಾಗಿ ಜಿ.ಎನ್. ಸುರೇಶ್ ನೇಮಕ

ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ರಾಜ್ಯ ವಿಭಾಗೀಯ ಸಂಚಾಲಕರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುರುಕುಲನಾಗೇನಹಳ್ಳಿ ಗ್ರಾಮದ ಜಿ.ಎನ್. ಸುರೇಶ್ ಅವರನ್ನು ನೇಮಕ ಮಾಡಲಾಗಿದೆ. -

Profile
Ashok Nayak Jul 20, 2026 10:50 PM

ಚಿಕ್ಕಬಳ್ಳಾಪುರ: ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕದಸಂಸ) ರಾಜ್ಯ ವಿಭಾಗೀಯ ಸಂಚಾಲಕರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುರುಕುಲನಾಗೇನಹಳ್ಳಿ ಗ್ರಾಮದ ಜಿ.ಎನ್. ಸುರೇಶ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಕದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ಹಾಗೂ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ನೇಮಕಾತಿ ಆದೇಶ ಹೊರಡಿಸಿದ್ದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪ ಅವರ ತತ್ವ, ಸಿದ್ಧಾಂತ ಮತ್ತು ಆಶಯಗಳಿಗೆ ಬದ್ಧರಾಗಿ ಅವಕಾಶ ವಂಚಿತ ಸಮುದಾಯಗಳ ಪರವಾಗಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿ ಸಂಘಟನೆ ಬಲಪಡಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Chikkaballapur News: ಗಾನಕೋಗಿಲೆ ಎಸ್.ಜಾನಕಿ ಹಾಗೂ ಚನ್ನಮ್ಮ ದೇವೇಗೌಡರಿಗೆ ಶಾಂತ ಶಿಕ್ಷಣ ಸಂಸ್ಥೆಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಜಿ. ಗಂಗಣ್ಣ ಅವರು ನೂತನ ರಾಜ್ಯ ವಿಭಾಗೀಯ ಸಂಚಾಲಕ ಜಿ.ಎನ್. ಸುರೇಶ್ ಅವರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಗಂಗಣ್ಣ, ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಆದರ್ಶ ಗಳನ್ನು ಮುಂದುವರಿಸುವ ಉದ್ದೇಶದಿಂದ ರಾಜ್ಯ ಸಮಿತಿ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸುವ ಜವಾಬ್ದಾರಿ ಯನ್ನು ಜಿ.ಎನ್. ಸುರೇಶ್ ಅವರಿಗೆ ವಹಿಸಿದೆ ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಚಿಂತನೆಗಳ ಆಧಾರದಲ್ಲಿ ಬಡವರು ಹಾಗೂ ಅವಕಾಶ ವಂಚಿತ ಸಮುದಾಯ ಗಳ ಸಮಸ್ಯೆಗಳ ಪರಿಹಾರಕ್ಕಾಗಿ ಅವರು ಹೋರಾಟ ನಡೆಸ ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೂತನ ರಾಜ್ಯ ವಿಭಾಗೀಯ ಸಂಚಾಲಕ ಜಿ.ಎನ್. ಸುರೇಶ್ ಮಾತನಾಡಿ, ಪ್ರೊ. ಬಿ. ಕೃಷ್ಣಪ್ಪ ಅವರ ಆಶಯಗಳಂತೆ ದಲಿತರು ಹಾಗೂ ಅವಕಾಶ ವಂಚಿತ ಸಮುದಾಯಗಳ ಹಕ್ಕುಗಳಿಗಾಗಿ ಸಂವಿಧಾ ನಾತ್ಮಕ ಹೋರಾಟ ನಡೆಸುವುದು ತಮ್ಮ ಆದ್ಯತೆಯಾಗಿದೆ ಎಂದರು. ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಘಟನೆಯನ್ನು ಬಲಪಡಿಸಿ, ಜನಪರ ಹೋರಾಟಗಳನ್ನು ಪರಿಣಾಮಕಾರಿಯಾಗಿ ನಡೆಸಲು ಎಲ್ಲರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಚ್.ಎಂ. ವೆಂಕಟೇಶ್, ಗಂಗಪ್ಪ, ನಾಗರಾಜ್, ಶಿವಶಂಕರ್, ನರಸಿಂಹ ಮೂರ್ತಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.