Mobile canteen: ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಅರ್ಜಿದಾರರು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರ್‌ರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ. ತಹಶೀಲ್ದಾರ್‌ರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯದ ಪ್ರಮಾಣ ಪತ್ರದ ಪ್ರತಿ. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಲಗತ್ತಿಸಬೇಕು.
-
ಚಿಕ್ಕಬಳ್ಳಾಪುರ: ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು ಮತ್ತು ಅಗತ್ಯ ದಾಖಲೆಗಳ ವಿವರ: ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 20 ರಿಂದ 55 ವರ್ಷ ದೊಳಗಿರಬೇಕು. ಅರ್ಜಿದಾರರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಚಾಲ್ತಿಯಲ್ಲಿರುವ ಲಘುವಾಹನ ಚಾಲನ ಪರವಾನಗಿ ಹೊಂದಿರಬೇಕು ಹಾಗೂ ಜೆರಾಕ್ಸ್ ಪ್ರತಿ ಸಲ್ಲಿಸಬೇಕು. ನಗರ ಪ್ರದೇಶದ ಫಲಾ ನುಭವಿಗಳ ವಾರ್ಷಿಕ ಆದಾಯ ರೂ.2.00 ಲಕ್ಷ ಮಿತಿಯೊಳಗಿರಬೇಕು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷ ಮಿತಿಯೊಳಗಿರ ಬೇಕು.
ಇದನ್ನೂ ಓದಿ: Indira canteen: ಇಂದಿರಾ ಕ್ಯಾಂಟೀನ್‌ನಲ್ಲಿ ಲೆಕ್ಕಪತ್ರ ಅವ್ಯವಸ್ಥೆ ಆರೋಪ: ಗ್ಯಾಸ್ ಕೊರತೆಯಿಂದ ಕ್ಯಾಂಟೀನ್ ಸೇವೆ ಅಸ್ತವ್ಯಸ್ತ
ಅರ್ಜಿದಾರರು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರ್‌ರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ. ತಹಶೀಲ್ದಾರ್‌ರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯದ ಪ್ರಮಾಣ ಪತ್ರದ ಪ್ರತಿ. ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಲಗತ್ತಿಸಬೇಕು.
ಅರ್ಜಿದಾರರು ಯಾವುದೇ ಸರ್ಕಾರಿ ಇಲಾಖೆನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿ ಸೇವೆ ಸಲ್ಲಿಸುತ್ತಿಲ್ಲವೆಂದು ಮತ್ತು ಮೊಬೈಲ್ ಕ್ಯಾಂಟೀನ್ ಫಲಾನುಭವಿಯಾಗಿ ಆಯ್ಕೆಯಾದ ಬಳಿಕ ಪ್ರವಾಸೋದ್ಯಮ ಇಲಾಖೆಯಿಂದ ನೀಡುವ ಕೌಶಲ್ಯಾಭಿವೃದ್ಧಿ ಇಟಿಣeಡಿಠಿಡಿeಟಿueಡಿshiಠಿ (ಇP) ತರಬೇತಿಯನ್ನು ಕಡ್ಡಾಯವಾಗಿ ಪಡೆಯತ್ತೇನೆ ಎಂದು ರೂ.100 ಬೆಲೆಯ ಛಾಪಾ ಕಾಗದದ ಅಫಿಡವಿಟ್ ನಮೂನೆಯಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು. ಅರ್ಜಿದಾರರು ಖಾತೆ ಹೊಂದಿದ ಬ್ಯಾಂಕ್ ನಿಂದ ಸಾಲ ಮಂಜೂರಾತಿ ದೃಢೀಕರಣ ಪತ್ರ ಪಡೆದು ಜೆರಾಕ್ಸ್ ಪ್ರತಿ ಲಗತ್ತಿಸುವುದು. ಅರ್ಜಿದಾರರು ವಾಸಸ್ಥಳ ದೃಢೀಕರಣದ ಜೆರಾಕ್ಸ್ ಪ್ರತಿ ನೀಡಬೇಕು. ಅರ್ಜಿದಾರರು ಈ ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಮುಚ್ಚಿದ ಲಕೋಟೆಯಲ್ಲಿ ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು.
ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಪ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕಚೇರಿ ವೇಳೆ ಯಲ್ಲಿ (ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೩೦ ರವರೆಗೆ) ಅರ್ಜಿಯನ್ನು ಪಡೆದುಕೊಳ್ಳಬಹುದು. ದಿನಾಂಕ: ೩೦-೦೪-೨೦೨೬ ಸಂಜೆ ೫.೩೦ ರೊಳಗಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.ಜಿಬಿ-೧೫, ನೆಲಮಹಡಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಜಿಲ್ಲೆ, ದೂ.ಸಂ. ೦೮೦-೨೭೭೦೪೧ ಗೆ ಸಂಪರ್ಕಿಸಬಹುದೆAದು ಜಿಲ್ಲಾಧಿಕಾರಿ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.