ಸರಕಾರಿ ನೌಕರರಿಂದ ಅರ್ಜಿ ಆಹ್ವಾನ
ವಿದ್ಯಾರ್ಥಿಯು 2026 ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರ ಬೇಕು. ನಿಗಮ ಮಂಡಳಿ ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ
ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ -
ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2026ನೇ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ "ಪ್ರತಿಭಾ ಪುರಸ್ಕಾರಕ್ಕೆ" ಆನ್ʼಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-05-2026. ಆನ್ʼಲೈನ್ ಲಿಂಕ್ : ಹೆಚ್‌ಟಿಟಿಪಿಎಸ್ ://ಪವರ್ ಮೀಡಿಯಾ ಡಾಟ್ ಇನ್ಫೋ ಮೂಲಕ ನೊಂದಾಯಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು: ವಿದ್ಯಾರ್ಥಿಯು 2026 ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರ ಬೇಕು. ನಿಗಮ ಮಂಡಳಿ ಪ್ರಾಧಿಕಾರ, ವಿಶ್ವವಿದ್ಯಾಲಯ ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯಲ್ಲಿ ನೇಮಕವಾಗಿರುವ ನೌಕರರು ಅರ್ಜಿ ಸಲ್ಲಿಸುವಂತಿಲ್ಲ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.