ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಬೆಳೆ ವಿಮೆ ತಿರಸ್ಕೃತಗೊಂಡ 531 ರೈತರಿಗೆ ಆಕ್ಷೇಪಣೆ ಸಲ್ಲಿಸಲು ಏ.30 ಕೊನೆಯ ದಿನ

ಒಂದು ವೇಳೆ ಸಮೀಕ್ಷೆಯಲ್ಲಿ ವ್ಯತ್ಯಾಸವಿದ್ದು, ರೈತರು ನಿಜವಾಗಿಯೂ ವಿಮೆ ಮಾಡಿದ ಬೆಳೆಯನ್ನೇ ಬೆಳೆದಿದ್ದಲ್ಲಿ, ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ರೈತರು ತಮ್ಮ ಮನವಿಯನ್ನು ಏಪ್ರಿಲ್ 30 ರೊಳಗೆ ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಬೆಳೆ ವಿಮೆ ತಿರಸ್ಕೃತ: ಆಕ್ಷೇಪಣೆ ಸಲ್ಲಿಸಲು ಏ.30 ಕೊನೆಯ ದಿನ

-

Profile
Ashok Nayak Apr 11, 2026 12:00 AM

ಗುಡಿಬಂಡೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೊಂದಾ ಯಿಸಿಕೊಂಡ ರೈತರ ಪೈಕಿ ಹಲವು ಅರ್ಜಿಗಳು ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡಿದ್ದು, ಅಂತಹ ರೈತರು ಆಕ್ಷೇಪಣೆ ಸಲ್ಲಿಸಲು ಏ.30 ಕೊನೆ ಎಂದು ಸಹಾಯಕ ಕೃಷಿ ನಿರ್ದೇಶಕರ ಕೇಶವ ರೆಡ್ಡಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 'ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ' ಯೋಜನೆಯಡಿ ವಿಮೆಗಾಗಿ ನೋಂದಾ ಯಿಸಿಕೊಂಡಿದ್ದ ರೈತರ ಪೈಕಿ ಹಲವು ಅರ್ಜಿಗಳು ತಾಂತ್ರಿಕ ಕಾರಣಗಳಿಂದ ತಿರಸ್ಕಾರಗೊಂಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಡೆಸಲಾದ ಬೆಳೆ ಸಮೀಕ್ಷೆಯ ದತ್ತಾಂಶಗಳು, ರೈತರು ವಿಮೆಗಾಗಿ ಸಲ್ಲಿಸಿದ್ದ ಅರ್ಜಿಯಲ್ಲಿನ ಮಾಹಿತಿಯೊಂದಿಗೆ ತಾಳೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗುಡಿಬಂಡೆ ತಾಲ್ಲೂಕಿನ ಒಟ್ಟು 531 ರೈತ ಪ್ರಸ್ತಾವನೆಗಳನ್ನು ವಿಮಾ ಸಂಸ್ಥೆಯು ತಿರಸ್ಕರಿಸಿದೆ.

ಇದನ್ನೂ ಓದಿ: Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಬಾಬು ಜಗಜೀವನ್ ರಾಂ ಜಯಂತಿ

ರೈತರು ತಮ್ಮ ಅರ್ಜಿಗಳ ಸ್ಥಿತಿಗತಿಯನ್ನು ತಿಳಿಯಲು ರೈತರು ಆಯಾ ಹೋಬಳಿಗಳ ರೈತ ಸಂಪರ್ಕ ಕೇಂದ್ರಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತಾಲ್ಲೂಕು ಆಡಳಿತ ಕಚೇರಿ ಅಥವಾ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿ ಪ್ರಕಟಿತ ಪಟ್ಟಿಯನ್ನು ಪರಿಶೀಲಿಸ ಬಹುದಾಗಿದೆ.

ಒಂದು ವೇಳೆ ಸಮೀಕ್ಷೆಯಲ್ಲಿ ವ್ಯತ್ಯಾಸವಿದ್ದು, ರೈತರು ನಿಜವಾಗಿಯೂ ವಿಮೆ ಮಾಡಿದ ಬೆಳೆಯನ್ನೇ ಬೆಳೆದಿದ್ದಲ್ಲಿ, ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ರೈತರು ತಮ್ಮ ಮನವಿಯನ್ನು ಏ.30ರೊಳಗೆ ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ನಿಗದಿತ ಸಮಯದೊಳಗೆ ಯಾವುದೇ ಆಕ್ಷೇಪಣೆಗಳು ಬಾರದಿದ್ದಲ್ಲಿ, ಅಂತಹ ಅರ್ಜಿಗಳನ್ನು ಶಾಶ್ವತ ವಾಗಿ ತಿರಸ್ಕರಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ ರೈತರು ಕೂಡಲೇ ಸ್ಥಳೀಯ ಕೃಷಿ ಅಧಿಕಾರಿ ಗಳನ್ನು ಸಂಪರ್ಕಿಸಲು ಕೋರಲಾಗಿದೆ.