ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani News: ಕಾಂಗ್ರೆಸ್‌ನ ವೋಟ್ ಬ್ಯಾಂಕ್ ರಾಜಕೀಯಕ್ಕೆ ಬಿಎಲ್‌ಒಗಳ ಬಳಕೆ? ಸೀಕಲ್ ಆನಂದ್ ಗೌಡ ಆಕ್ರೋಶ...!

ಶಿಡ್ಲಘಟ್ಟದಲ್ಲಿ ರಾಮನಗರದ ಮಾದರಿಯಂತೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ, ಮತದಾರರ ಪಟ್ಟಿಗೆ ಮತಗಳನ್ನು ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಸೀಕಲ್ ಆನಂದ್ ಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರ ಮತಗಳನ್ನು ಬಿಡಬಾರದು ಎಂಬ ಟಾರ್ಗೆಟ್ ಅನ್ನು ಬಿಎಲ್‌ಒಗಳಿಗೆ ನೀಡಲಾಗಿದ್ದು, ಅವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ನ ವೋಟ್ ಬ್ಯಾಂಕ್ ರಾಜಕೀಯಕ್ಕೆ ಬಿಎಲ್‌ಒಗಳ ಬಳಕೆ?: ಆಕ್ರೋಶ...!

-

Profile
Ashok Nayak Jul 5, 2026 10:45 PM

ಚಿಂತಾಮಣಿ: ತಾಲ್ಲೂಕಿನ ಬುರುಡುಗುಂಟೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳ ಲಾಗಿದ್ದ ಬಿಜೆಪಿ ಪಕ್ಷದ ಬಿ ಎಲ್ ಎ-2 ಗಳಿಗೆ, ಎಸ್.ಐ.ಆರ್(SIR) ಅರಿವು ಮತ್ತು ಪಕ್ಷ ಸೇರ್ಪಡೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಿಜೆಪಿ ಮುಖಂಡ ಸೀಕಲ್ ಆನಂದ್ ಗೌಡ ಮಾತನಾಡಿದರು.

ಶಿಡ್ಲಘಟ್ಟದಲ್ಲಿ ರಾಮನಗರದ ಮಾದರಿಯಂತೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ, ಮತದಾರರ ಪಟ್ಟಿಗೆ ಮತಗಳನ್ನು ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಸೀಕಲ್ ಆನಂದ್ ಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಮತಗಳನ್ನು ಬಿಡಬಾರದು ಎಂಬ ಟಾರ್ಗೆಟ್ ಅನ್ನು ಬಿಎಲ್‌ಒಗಳಿಗೆ ನೀಡಲಾ ಗಿದ್ದು, ಅವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದರು. ಮತ ಬ್ಯಾಂಕಿಂಗ್ ರಾಜಕಾರಣಕ್ಕಾಗಿ ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Chinthamani News: ಇರಗಂಪಲ್ಲಿ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಹದಗೆಟ್ಟು ಹರಡುತ್ತಿರುವ ಸಾಂಕ್ರಾಮಿಕ ರೋಗ ಭೀತಿ!

ಶಿಡ್ಲಘಟ್ಟದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆದರೆ ಭಾರತೀಯ ಜನತಾ ಪಾರ್ಟಿ ಇದನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗು ವುದು ಎಂದು ಎಚ್ಚರಿಕೆ ನೀಡಿದರು.

ಜವಾಬ್ದಾರಿಯುತ ಅಧಿಕಾರಿಗಳಾದ ದಂಡಾಧಿಕಾರಿಗಳು, ಬಿಇಒಗಳು ಹಾಗೂ ಜಿಲ್ಲಾಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ಚುನಾವಣಾ ಆಯೋಗದ ನಿರ್ದೇಶನದಂತೆ ಕಾನೂನಾತ್ಮಕವಾಗಿ, ನಿಶ್ಚಿಂತೆಯಿಂದ ತಮ್ಮ ಕೆಲಸ ನಿರ್ವಹಿಸಬೇಕು ಎಂದು ಮನವಿ ಮಾಡಿದರು. ಒಂದು ವೇಳೆ, ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿ ಅಕ್ರಮಗಳಿಗೆ ಸಹಕರಿಸಿದರೆ, ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ಹಾಗೂ ಮುಷ್ಕರಗಳನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

ನರೇಂದ್ರ ಮೋದಿ ಅವರ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷರ ಸೂಚನೆಯಂತೆ ಜಿಲ್ಲಾಧ್ಯಕ್ಷರಾದ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸಲು ಪ್ರತಿ ಯೊಂದು ಬೂತ್ ಮಟ್ಟದಲ್ಲಿ ಬಿಎಲ್‌ಎ-1 ಹಾಗೂ ಬಿಎಲ್‌ಎ-2 ಮುಖಂಡರು ಕಾರ್ಯಪ್ರವೃತ್ತ ರಾಗಿದ್ದು, ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಾಮರ್ಶಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪ್ರಸಾದ್ ರೆಡ್ಡಿ, ಸುಧಾಕರ್, ಕಿಟ್ಟಣ್ಣ, ನಾರಾಯಣಸ್ವಾಮಿ, ಶ್ರೀನಿವಾಸ್, ನರಸಿಂಹ, ಮುನಯ್ಯ ಸೇರಿದಂತೆ ಮತ್ತಿತರರು ಇದ್ದರು.