ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಲು ಮಾಸಿಕ ಕನಿಷ್ಠ ೧೫ ತಪಾಸಣೆ ಕಡ್ಡಾಯ : ಜಿಲ್ಲಾಧಿಕಾರಿ ಪಿ,ಎನ್ ರವೀಂದ್ರ  ಸೂಚನೆ

ಬಾಲಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಶಿಕ್ಷೆ ವಿಧಿಸಲು ಅವಕಾಶ ವಿರುತ್ತದೆ. ತಪ್ಪಿತಸ್ಥ ಮಾಲೀಕರು ಪ್ರತಿ ಮಗುವಿಗೆ ರೂ.೨೦,೦೦೦ ಗಳನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವವರು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಾಲಕಾರ್ಮಿಕರನ್ನು ಪತ್ತೆ ಮಾಡಲು ಮಾಸಿಕ ಕನಿಷ್ಠ ೧೫ ತಪಾಸಣೆ ಕಡ್ಡಾಯ

-

Ashok Nayak Ashok Nayak Nov 5, 2025 1:07 AM

ಚಿಕ್ಕಬಳ್ಳಾಪುರ : ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಲು ಈಗಾಗಲೇ ರಚಿಸಿರುವ ತಾಲ್ಲೂಕುವಾರು ಮತ್ತು ಹೋಬಳಿವಾರು ಕಾರ್ಯಪಡೆ ತಂಡಗಳು  ಮಾಸಿಕ ಕನಿಷ್ಠ ೧೫ ತಪಾಸಣೆಗಳನ್ನು ಕೈಗೊಂಡು ಬಾಲಕಾರ್ಮಿಕತೆಗೆ ಉತ್ತೇಜನ ನೀಡುವವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಮತ್ತು ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರ ಪತ್ತೆ ಹಾಗೂ ಪುನರ್ವಸತಿ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, ದಿ:೦೧/೦೪/೨೦೨೫ ರಿಂದ ದಿ:೩೧/೧೦/೨೦೨೫ ರವರೆಗೆ ಜಿಲ್ಲೆ ಯಾದ್ಯಂತ ಹಲವು ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ ೧೩ ಬಾಲ ಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಲಾಗಿರುತ್ತದೆ ಈ ಪೈಕಿ ಬಾಲಕಾರ್ಮಿಕರು-೨, ಕಿಶೋರಕಾರ್ಮಿಕರು-೧೧ ಆಗಿದ್ದು, ಸದರಿ ಮಕ್ಕಳಿಗೆ ಸರ್ಕಾರದ ವತಿಯಿಂದ ಪುನರ್ವಸತಿ ಕಲ್ಪಿಸಲಾಗಿರುತ್ತದೆ. ಬಾಲ ಕಾರ್ಮಿಕತೆಯನ್ನು ಉತ್ತೇಜನ ಮಾಡಿದ ತಪ್ಪಿತಸ್ಥ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ

ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿರುತ್ತದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ೧೯೮೬ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಕೆಲಸ ಪ್ರಕ್ರಿಯೆಗಳಲ್ಲಿ ೧೪ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿ ಕೊಳ್ಳುವುದು ಹಾಗೂ ೧೮ ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ ಅಪರಾಧವಾಗಿರುತ್ತದೆ, ಅಂತಹ ಅಪರಾಧಕ್ಕೆ ೦೬ ತಿಂಗಳಿAದ ೦೨ ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.೨೦,೦೦೦ಗಳಿಂದ ರೂ.೫೦.೦೦೦ಗಳ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗಳನ್ನು ವಿಧಿಸಲು ಅವಕಾಶವಿರುತ್ತದೆ.

ಬಾಲಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಶಿಕ್ಷೆ ವಿಧಿಸಲು ಅವಕಾಶ ವಿರುತ್ತದೆ. ತಪ್ಪಿತಸ್ಥ ಮಾಲೀಕರು ಪ್ರತಿ ಮಗುವಿಗೆ ರೂ.೨೦,೦೦೦ ಗಳನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವವರು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಗೆ ಕರೆಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗುವಿಗೆ ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿರಬೇಕು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾಧಿಕಾರಿಗಳು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನಾ ಆಂದೋಲನ ಜಾಗೃತಿಯ ಭಿತ್ತಿಪತ್ರಗಳನ್ನು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಿದರು.

ಈ ಸಂರ್ಭದಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಶಿಲ್ಪ, ಕಾರ್ಮಿಕ ಅಧಿಕಾರಿ ಶಬಾನಾ ಆಜ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಆರ್.ವೆಂಕಟೇಶರೆಡ್ಡಿ, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.