ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮುಖ್ಯಶಿಕ್ಷಕಿ ಜಿ.ವಿನುತಾ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಕೆ

ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸಲ್ಲಿಸಿದ ಅವರ ಸೇವೆ ಶ್ಲಾಘನೀಯವಾಗಿದ್ದು, ಅನೇಕ ವಿದ್ಯಾ ರ್ಥಿಗಳ ಬದುಕಿಗೆ ದಾರಿ ತೋರಿಸಿರುವುದು ಸ್ಮರಣೀಯವಾಗಿದೆ. ಅವರ ಮುಂದಿನ ನಿವೃತ್ತ ಜೀವನವು ಆಯುಷ್ಯ, ಉತ್ತಮ ಆರೋಗ್ಯ, ಸುಖ, ಸಂತೋಷ ಹಾಗೂ ನೆಮ್ಮದಿಯಿಂದ ಕೂಡಿರಲಿ ಎಂದು ಸಂದೀಪ ಬಿ. ರೆಡ್ಡಿ ಶುಭ ಹಾರೈಸಿದರು

ಮುಖ್ಯಶಿಕ್ಷಕಿ ಜಿ.ವಿನುತಾ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಕೆ

-

Profile
Ashok Nayak Aug 30, 2026 10:03 PM

ಚಿಕ್ಕಬಳ್ಳಾಪುರ: ರೆಡ್ಡಿಗೊಲ್ಲವಾರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸುದೀರ್ಘ ಕಾಲ ಅರ್ಥ ಪೂರ್ಣ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಉಜ್ವಲ ಭವಿಷ್ಯಕ್ಕೆ ಮಾರ್ಗದರ್ಶಕರಾಗಿದ್ದ ಮುಖ್ಯಶಿಕ್ಷಕಿ ಜಿ.ವಿನುತಾ ಅವರ ನಿವೃತ್ತಿ ಅಭಿನಂದನಾ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸಂದೀಪ ಬಿ. ರೆಡ್ಡಿ ಅವರು ಭಾಗವಹಿಸಿ, ಮುಖ್ಯಶಿಕ್ಷಕಿ ಜಿ. ವಿನುತಾ ಅವರನ್ನು ಆತ್ಮೀಯವಾಗಿ ಗೌರವಿಸಿ, ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ: Chikkaballapur News: ಅಧಿಕಾರಿಗಳನ್ನು ಹೀಯಾಳಿಸುವ ಶಾಸಕರ ಪ್ರವೃತ್ತಿ ಖಂಡನೀಯ: ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ

ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸಲ್ಲಿಸಿದ ಅವರ ಸೇವೆ ಶ್ಲಾಘನೀಯವಾಗಿದ್ದು, ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿಸಿರುವುದು ಸ್ಮರಣೀಯವಾಗಿದೆ. ಅವರ ಮುಂದಿನ ನಿವೃತ್ತ ಜೀವನವು ಆಯುಷ್ಯ, ಉತ್ತಮ ಆರೋಗ್ಯ, ಸುಖ, ಸಂತೋಷ ಹಾಗೂ ನೆಮ್ಮದಿಯಿಂದ ಕೂಡಿರಲಿ ಎಂದು ಸಂದೀಪ ಬಿ. ರೆಡ್ಡಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಜಿ. ವಿನುತಾ ಅವರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.